ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಸಾವಿನ ಬಗ್ಗೆಆಸ್ಪತ್ರೆ ಸಿಬ್ಬಂದಿ ನೀಡಿದ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ. ಸುಶಾಂತ್ ಸಿಂಗ್ ರಜಪೂತ್ ಸಾವು ಕೊಲೆಯೋ ಅಥವಾ ಆತ್ಮಹತ್ಯೆಯೋ (Murder Or Suicide) ಎಂಬ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಪುಷ್ಠಿ ಎಂಬಂತೆ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ (Postmortem Examination) ಮಾಡಿದ್ದ ಕೂಪರ್ ಆಸ್ಪತ್ರೆ ಸಿಬ್ಬಂದಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಹೋದರಿ ಶ್ವೇತಾ ಸಿಂಗ್ ಕೀರ್ತಿ ಸಿಬಿಐ ತನಿಖೆಗೆ ಆಗ್ರಹಿಸಿದ್ದಾರೆ.
ನ್ಯಾಯಯುತ ತನಿಖೆ ನಡೆಸಿ
ರೂಪಕುಮಾರ್ ಶಾ ಹೇಳಿಕೆಯಲ್ಲಿ ಸ್ವಲ್ಪ ಸತ್ಯವಿದ್ರೆ ಸರಿಯಾದ ತನಿಖೆ ಅಗತ್ಯವಿದೆ ಎಂದು ಹೇಳಿದ್ದಾರೆ. ನ್ಯಾಯಯುತ ತನಿಖೆ ನಡೆಸಿ ಸತ್ಯವನ್ನು ಬಹಿರಂಗ ಪಡಿಸಬೇಕು ಎಂದು ಸುಶಾಂತ್ ಸಿಂಗ್ ಸಹೋದರಿ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಸಹೋದರಿ ತನ್ನ ಅಭಿಪ್ರಾಯ ತಿಳಿಸಿದ್ದಾರೆ.
View this post on Instagram
ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ರೂಪಕುಮಾರ್ ಶಾ ಆರೋಪಿಸಿದ್ದಾರೆ. ಸುಶಾಂತ್ ಶವ ಪತ್ತೆಯಾದಾಗ ಅವರ ದೇಹದ ಮೇಲೆ ಗಾಯಗಳಿದ್ದವು ಮತ್ತು ಅವರ ದೇಹವನ್ನು ಥಳಿಸಲಾಗಿತ್ತು ಎಂದು ರೂಪಕುಮಾರ್ ಶಾ ಹೇಳಿಕೆ ನೀಡಿದ್ದರು.
ಇದೇ ವಿಚಾರವಾಗಿ ಮಾತಾಡಿದ ಆಸ್ಪತ್ರೆ ಸಿಬ್ಬಂದಿ ರೂಪ ಕುಮಾರ್ ಶಾ, ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುವಾಗ ನಾನು ಅಲ್ಲಿಯೇ ಇದ್ದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ವೈದ್ಯರಿಗೆ ಹೇಳಿದ್ದೆ. ಆದರೆ ಯಾರೂ ನನ್ನತ್ತ ಗಮನ ಹರಿಸಲಿಲ್ಲ ಎಂದು ಹೇಳಿದ್ದಾರೆ.
ಸಿಬ್ಬಂದಿ ಹೇಳಿಕೆ ಬಳಿಕ ವೈದ್ಯರ ಮೇಲೆ ಡೌಟ್
ಕೂಪರ್ ಆಸ್ಪತ್ರೆ ಸಿಬ್ಬಂದಿ ಹೇಳಿಕೆ ಬಳಿಕ ವೈದ್ಯರ ಮೇಲೆಯೇ ಇದೀಗ ಅನುಮಾನ ಮೂಡಿದೆ. ಮರಣೋತ್ತರ ಪರೀಕ್ಷೆ ವೇಳೆ ವೈದ್ಯರೇ ಸತ್ಯವನ್ನು ಮುಚ್ಚಿಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ರೂಪಕುಮಾರ್ ಶಾ ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಒಂದೂವರೆ ತಿಂಗಳ ಹಿಂದೆ ನಿವೃತ್ತರಾಗಿದ್ದರು.
ಜಾಮೀನು ಪಡೆದು ಹೊರ ಬಂದಿರುವ ರಿಯಾ ಚಕ್ರವರ್ತಿ
ಸುಶಾಂತ್ ಸಿಂಗ್ ರಜಪೂತ್ ಅವರ ಗರ್ಲ್ಫ್ರೆಂಡ್ ಆಗಿದ್ದ ರಿಯಾ ಚಕ್ರವರ್ತಿ ಈ ಪ್ರಕರಣದ ಪ್ರಮುಖ ಆರೋಪಿ. ಅವರು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಸದ್ಯ ಜಾಮೀನು ಪಡೆದು ಅವರು ಹೊರಗಿದ್ದಾರೆ. ತನಿಖೆ ನಡೆಯುವ ಸಂದರ್ಭದಲ್ಲಿ ರಿಯಾಗೆ ‘ಎಯು’ ಹೆಸರಿನ ವ್ಯಕ್ತಿಯಿಂದ 44 ಬಾರಿ ಕರೆ ಬಂದಿದೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ್ ಪೊಲೀಸರು ಹೇಳಿದ್ದರು. ಇದರಿಂದಾಗಿ ಈ ಪ್ರಕರಣಕ್ಕೆ ಹಾಗೂ ಆದಿತ್ಯ ಠಾಕ್ರೆಗೆ ಲಿಂಕ್ ಆಗಿದೆ.
Vijay Deverakonda: ಅಭಿಮಾನಿಗಳಿಗಾಗಿ 'ದೇವಸಾಂತಾ' ಕೊಟ್ರು ಭರ್ಜರಿ ಗಿಫ್ಟ್! ವಿಜಯ್ ದೇವರಕೊಂಡ ಫ್ಯಾನ್ಸ್ ಫುಲ್ ಖುಷ್
ಶಿವ ಸೇನೆಯ ಏಕನಾಥ್ ಶಿಂಧೆ ಬಣದ ಎಂಪಿ ರಾಹುಲ್ ಶೆವಾಲೆ ಅವರು ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದರು. ರಿಯಾ ಚಕ್ರವರ್ತಿ ಅವರು ಎಯು ನಿಂದ 44 ಬಾರಿ ಕರೆ ಸ್ವೀಕರಿಸಿದ್ದಾರೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ ಪೊಲೀಸರು ಹೇಳಿದ್ದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ