• Home
 • »
 • News
 • »
 • entertainment
 • »
 • Sushant Singh Rajput: ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆ ಅಲ್ಲ ಕೊಲೆ! ಆಸ್ಪತ್ರೆ ಸಿಬ್ಬಂದಿ ಬಾಯ್ಬಿಟ್ಟ ಸ್ಫೋಟಕ ಸತ್ಯ!

Sushant Singh Rajput: ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆ ಅಲ್ಲ ಕೊಲೆ! ಆಸ್ಪತ್ರೆ ಸಿಬ್ಬಂದಿ ಬಾಯ್ಬಿಟ್ಟ ಸ್ಫೋಟಕ ಸತ್ಯ!

ಸುಶಾಂತ್ ಸಿಂಗ್ ರಜಪೂತ್

ಸುಶಾಂತ್ ಸಿಂಗ್ ರಜಪೂತ್

ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ರೂಪಕುಮಾರ್ ಶಾ ಆರೋಪಿಸಿದ್ದಾರೆ.

 • News18 Kannada
 • 4-MIN READ
 • Last Updated :
 • Karnataka, India
 • Share this:

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್​ (Sushant Singh Rajput) ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿತ್ತು. ಸುಶಾಂತ್​ ಸಾವನ್ನಪ್ಪಿ 2 ವರ್ಷ ಕಳೆದಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ (Murder Or Suicide) ಎಂಬ ಬಗ್ಗೆ ಇನ್ನೂ ತನಿಖೆ ನಡೆಯುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಅವರದ್ದು ಕೊಲೆ ಎಂಬ ಆರೋಪ ಕೇಳಿಬಂದಿತ್ತು. ಈ ಆರೋಪಕ್ಕೆ ಪುಷ್ಠಿ ಎಂಬಂತೆ  ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ಮಾಡಿದ್ದ ಕೂಪರ್​ ಆಸ್ಪತ್ರೆ  ಸಿಬ್ಬಂದಿ ಸ್ಫೋಟಕ ಹೇಳಿಕೆ ನೀಡಿದ್ದು, ಇದೀಗ ಸುಶಾಂತ್​ ಸಿಂಗ್ ಸಾವಿನ ತನಿಖೆಗೆ ಟ್ವಿಸ್ಟ್​ ಸಿಕ್ಕಿದೆ. 


ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಅದು ಕೊಲೆ


ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಅವರನ್ನು ಕೊಲೆ ಮಾಡಲಾಗಿದೆ ಎಂದು ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ರೂಪಕುಮಾರ್ ಶಾ ಆರೋಪಿಸಿದ್ದಾರೆ. ಸುಶಾಂತ್ ಶವ ಪತ್ತೆಯಾದಾಗ ಅವರ ದೇಹದ ಮೇಲೆ ಗಾಯಗಳಿದ್ದವು ಮತ್ತು ಅವರ ದೇಹವನ್ನು ಥಳಿಸಲಾಗಿತ್ತು ಎಂದು ರೂಪಕುಮಾರ್ ಶಾ ಹೇಳಿಕೆ ನೀಡಿದ್ದಾರೆ.
ಮರಣೋತ್ತರ ಪರೀಕ್ಷೆ ವೇಳೆ ಸತ್ಯ ಮುಚ್ಚಿಟ್ರಾ?


ಇದೇ ವಿಚಾರವಾಗಿ ಮಾತಾಡಿದ ಆಸ್ಪತ್ರೆ ಸಿಬ್ಬಂದಿ ರೂಪ ಕುಮಾರ್ ಶಾ, ಸುಶಾಂತ್ ಸಿಂಗ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುವಾಗ ನಾನು ಅಲ್ಲಿಯೇ ಇದ್ದೆ. ಇದು ಆತ್ಮಹತ್ಯೆಯಲ್ಲ ಕೊಲೆ ಎಂದು ವೈದ್ಯರಿಗೆ ಹೇಳಿದ್ದೆ. ಆದರೆ ಯಾರೂ ನನ್ನತ್ತ ಗಮನ ಹರಿಸಲಿಲ್ಲ ಎಂದು  ಹೇಳಿದ್ದಾರೆ.


ಇಷ್ಟು ದಿನ ಈ ವಿಚಾರವನ್ನು ಮುಚ್ಚಿಟ್ಟಿದ್ದೇಕೆ?


ಇಷ್ಟು ದಿನ ಈ ವಿಚಾರವನ್ನು ಮುಚ್ಚಿಟ್ಟಿದ್ದೇಕೆ ಎಂಬ ಪ್ರಶ್ನೆಗೆ ಉತ್ತರಿಸಿ ರೂಪಕುಮಾರ್ ಶಾ ಕೆಲಸದಲ್ಲಿ ಯಾರಿಗೂ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ನಾವು ಇಷ್ಟು ದಿನ ಇದರ ಬಗ್ಗೆ ಮಾತನಾಡಲಿಲ್ಲ ಎಂದು ಹೇಳಿದ್ದಾರೆ.


ಸಿಬ್ಬಂದಿ ಹೇಳಿಕೆ ಬಳಿಕ ವೈದ್ಯರ ಮೇಲೆ ಡೌಟ್​


ಕೂಪರ್ ಆಸ್ಪತ್ರೆ ಸಿಬ್ಬಂದಿ ಹೇಳಿಕೆ ಬಳಿಕ ವೈದ್ಯರ ಮೇಲೆಯೇ ಇದೀಗ ಅನುಮಾನ ಮೂಡಿದೆ. ಮರಣೋತ್ತರ ಪರೀಕ್ಷೆ ವೇಳೆ ವೈದ್ಯರೇ ಸತ್ಯವನ್ನು ಮುಚ್ಚಿಟ್ಟಿದ್ದಾರಾ ಎಂಬ ಪ್ರಶ್ನೆ ಮೂಡಿದೆ.  ರೂಪಕುಮಾರ್ ಶಾ ಕೂಪರ್ ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದರು. ಅವರು ಒಂದೂವರೆ ತಿಂಗಳ ಹಿಂದೆ ನಿವೃತ್ತರಾಗಿದ್ದರು.


ಜಾಮೀನು ಪಡೆದು ಹೊರ ಬಂದಿರುವ ರಿಯಾ ಚಕ್ರವರ್ತಿ


ಸುಶಾಂತ್ ಸಿಂಗ್ ರಜಪೂತ್ ಅವರ ಗರ್ಲ್​ಫ್ರೆಂಡ್ ಆಗಿದ್ದ ರಿಯಾ ಚಕ್ರವರ್ತಿ ಈ ಪ್ರಕರಣದ ಪ್ರಮುಖ ಆರೋಪಿ. ಅವರು ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದರು. ಸದ್ಯ ಜಾಮೀನು ಪಡೆದು ಅವರು ಹೊರಗಿದ್ದಾರೆ. ತನಿಖೆ ನಡೆಯುವ ಸಂದರ್ಭದಲ್ಲಿ ರಿಯಾಗೆ ‘ಎಯು’ ಹೆಸರಿನ ವ್ಯಕ್ತಿಯಿಂದ 44 ಬಾರಿ ಕರೆ ಬಂದಿದೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ್ ಪೊಲೀಸರು ಹೇಳಿದ್ದರು. ಇದರಿಂದಾಗಿ ಈ ಪ್ರಕರಣಕ್ಕೆ ಹಾಗೂ ಆದಿತ್ಯ ಠಾಕ್ರೆಗೆ ಲಿಂಕ್ ಆಗಿದೆ.


ಶಿವ ಸೇನೆಯ ಏಕನಾಥ್​ ಶಿಂಧೆ ಬಣದ ಎಂಪಿ ರಾಹುಲ್ ಶೆವಾಲೆ ಅವರು ಲೋಕಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದರು. ರಿಯಾ ಚಕ್ರವರ್ತಿ ಅವರು ಎಯು ನಿಂದ 44 ಬಾರಿ ಕರೆ ಸ್ವೀಕರಿಸಿದ್ದಾರೆ. ಎಯು ಎಂದರೆ ಆದಿತ್ಯ ಉದ್ಧವ್ ಠಾಕ್ರೆ ಎಂದು ಬಿಹಾರ ಪೊಲೀಸರು ಹೇಳಿದ್ದರು.


ಇದನ್ನೂ ಓದಿ: Shah Rukh Khan: ನಟ ಶಾರುಖ್ ಖಾನ್​ ಮನೆಗೆ ಬರ್ತಿದ್ದ ಸಾಂತಾ ಟ್ರಾಫಿಕ್​ನಲ್ಲಿ ಸಿಲುಕಿದ್ರಾ! ಅಭಿಮಾನಿ ಪ್ರಶ್ನೆಗೆ SRK ಉತ್ತರ


ಹಿಂದಿ ಧಾರಾವಾಹಿಯ ಮೂಲಕ ಪರಿಚಿತರಾದ ಸುಶಾಂತ್ ಸಿಂಗ್ ನಂತರ ಬಾಲಿವುಡ್​ಗೆ ಕಾಲಿಟ್ಟರು. ಎಂ.ಎಸ್. ಧೋನಿ ಬಯೋಪಿಕ್ ಸಿನಿಮಾದ ಮೂಲಕ ಅವರು ಖ್ಯಾತಿ ಹೆಚ್ಚಿಸಿಕೊಂಡರು. ಅವರಿಗೆ ಬಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಇತ್ತು. ಆದರೆ, 2020ರ ಜೂನ್ 14 ರಂದು ಅವರು ಆತ್ಮಹತ್ಯೆ ಮಾಡಿಕೊಂಡರು. ಇಂದಿಗೂ ಕೂಡ ಅವರದ್ದು ಸಾವೋ ಅಥವಾ ಆತ್ಮಹತ್ಯೆಯೋ ಎನ್ನುವುದು ನಿಗೂಢವಾಗಿಯೇ ಇದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.

Published by:ಪಾವನ ಎಚ್ ಎಸ್
First published:

ಸುದ್ದಿ 18ಕನ್ನಡ ಟ್ರೆಂಡಿಂಗ್

ಮತ್ತಷ್ಟು ಓದು