ಕೊಟ್ಟ ಮಾತಿನಂತೆ ಮೈಸೂರಿನ ಶಕ್ತಿಧಾಮಕ್ಕೆ ನಟ ವಿಶಾಲ್ ಭೇಟಿ, ಪುನೀತ್ ಓದಿಸುತ್ತಿದ್ದ ಮಕ್ಕಳ ಜೊತೆ ಮಾತು, ಆಟ!

ಇನ್ನು ಶಕ್ತಿಧಾಮದ ಭೇಟಿ ಬಳಿಕ ಮಾತನಾಡಿದ ನಟ ವಿಶಾಲ್, ನಾನು ಯಾವಾಗಲು ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ. ಅದಕ್ಕೆ ರಾಜ್ ಕುಟುಂಬದವರು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿತ್ತು. ದೇವಸ್ಥಾನಕ್ಕೆ ಹೋದರೆ ಒಂದು ದೇವರ ದರ್ಶನ ಪಡೆಯಬಹುದು. ಇಲ್ಲಿ ಒಂದೊಂದು ಮಕ್ಕಳಲ್ಲೂ ದೇವರನ್ನು ನೋಡಿದೆ. ಮಕ್ಕಳು ತುಂಬಾ ಲವ ಲವಿಕೆಯಿಂದ ಇದ್ದಾರೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.

ನಟ ವಿಶಾಲ್

ನಟ ವಿಶಾಲ್

  • Share this:
ಮೈಸೂರು(ಸೆ.10): ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್​ (Tamil Actor Vishal) ಇಂದು ಮೈಸೂರಿನ ಚಾಮುಂಡಿ ಬೆಟ್ಟದ (Chamundi Hills) ಬಳಿ ಇರುವ ಶಕ್ತಿಧಾಮಕ್ಕೆ ಭೇಟಿ ನೀಡಿ, ಆಡಳಿತ ಸಿಬ್ಬಂದಿ ಜೊತೆ ಮಾತನಾಡಿದ್ದಾರೆ. ಇನ್ನು ಈ ಹಿಂದೆ ಪವರ್​​ ಸ್ಟಾರ್​ ಪುನೀತ್ ರಾಜ್​ಕುಮಾರ್​​ (Puneeth Rajkumar) ನಿಧನವಾಗಿದ್ದ ವೇಳೆ ಶಕ್ತಿಧಾಮದ ಬಗ್ಗೆ ಮಾತನಾಡಿದ್ದ ವಿಶಾಲ್​, ನಟ ಪುನೀತ್ ರಾಜ್​ಕುಮಾರ್ ಅವರ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಅಲ್ಲದೇ ಪುನೀತ್​​ ರಾಜ್​ಕುಮಾರ್​​ ಓದಿಸುತ್ತಿದ್ದ 1,800 ಮಂದಿ ವಿದ್ಯಾರ್ಥಿಗಳ ಮುಂದಿನ ಜವಾಬ್ದಾರಿ ನನ್ನದು. ಅವರ ಈ ಕಾರ್ಯವನ್ನು ನಾನು ಮುಂದುವರಿಸಿಕೊಂಡು ಹೋಗುತ್ತೇನೆ ಎಂದು ಹೇಳಿದ್ದರು. ಇದೀಗ ತಾನು ಕೊಟ್ಟ ಮಾತಿನಂತೆ ನಟ ವಿಶಾಲ್​​ ಶಕ್ತಿಧಾಮಕ್ಕೆ (Shaktidhama) ಭೇಟಿ ನೀಡಿದ್ದಾರೆ.

ಇನ್ನು ಶಕ್ತಿಧಾಮದ ಭೇಟಿ ಬಳಿಕ ಮಾತನಾಡಿದ ನಟ ವಿಶಾಲ್, ನಾನು ಯಾವಾಗಲು ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ. ಅದಕ್ಕೆ ರಾಜ್ ಕುಟುಂಬದವರು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಇದೇ ವೇಳೆ ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿತ್ತು. ದೇವಸ್ಥಾನಕ್ಕೆ ಹೋದರೆ ಒಂದು ದೇವರ ದರ್ಶನ ಪಡೆಯಬಹುದು. ಇಲ್ಲಿ ಒಂದೊಂದು ಮಕ್ಕಳಲ್ಲೂ ದೇವರನ್ನು ನೋಡಿದೆ. ಮಕ್ಕಳು ತುಂಬಾ ಲವ ಲವಿಕೆಯಿಂದ ಇದ್ದಾರೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Puneeth Rajkumar : ಅಪ್ಪು ಓದಿಸುತ್ತಿದ್ದ 1800 ಮಕ್ಕಳ ಹೊಣೆ ಹೊತ್ತ ತಮಿಳು ನಟ ವಿಶಾಲ್​: ಕನ್ನಡಿಗರಿಂದ ಬಹುಪರಾಕ್!​

ಪುನೀತ್ ರಾಜ್ ಕುಮಾರ್ ಹಾಗೂ ಗೀತಮ್ಮ ಅವರು ಅತ್ಯುತ್ತಮ ಕೆಲಸ ಮಾಡುತ್ತಿದ್ದರು. ಈ ಬಗ್ಗೆ ಶಿವರಾಜ್​ಕುಮಾರ್ ಜೊತೆ ಮಾತನಾಡಿದ್ದೇನೆ. ರಾಜ್ ಕುಟುಂಬದ ಜೊತೆ ನಿರಂತರ ಸಂಪರ್ಕದಲ್ಲಿದ್ದೇನೆ. ಮಕ್ಕಳ ಜೊತೆ ನಾನು ಮಾತನಾಡಿದೆ. ಅವರೂ ಡ್ಯಾನ್ಸ್ ಮಾಡಿದ್ರು, ಆಟವಾಡಿದ್ರು ತುಂಬಾ ಉತ್ಸಾಹದಿಂದ ಇದ್ದಾರೆ. ಇಲ್ಲಿರುವ ಮಕ್ಕಳಿಗೆ ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯ ಇದೆ ಎಂದು ಸಂತಸ ವ್ಯಕ್ತಪಡಿಸಿದರು.

ಶಕ್ತಿಧಾಮಕ್ಕೆರ ಭೇಟಿ ನೀಡಲು ತಡವಾದ ಕಾರಣವನ್ನೂ ತಿಳಿಸಿದ ನಟ ವಿಶಾಲ್ ಸಿನಿಮಾದ ಶೂಟಿಂಗ್​ ವೇಳೆ ನನಗೆ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ನಾನು ಇಷ್ಟ ದಿನ ಶಕ್ತಿಧಾಮಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಈಗ ಬರಲೇಬೇಕೆಂದು ನಿರ್ಧಾರ ಮಾಡಿ ಬಂದಿದ್ದೇನೆ, ವಿಶೇಷ ಏನು ಇಲ್ಲ. ಮಕ್ಕಳನ್ನು ನೋಡಬೇಕೆಂಬ ಒಂದೇ ಒಂದು ಉದ್ದೇಶದಿಂದ ಬಂದಿದ್ದೇನೆ. ಎಲ್ಲರನ್ನು ಭೇಟಿ ಮಾಡಿದ್ದು ನನಗೆ ಸಾಕಷ್ಟು ಖುಷಿ ಕೊಟ್ಟಿದೆ. ನಾನು ಇಲ್ಲಿ ಸೇವಕನಾಗಿರಲು ಇಷ್ಟಪಡುತ್ತೇನೆ ಎಂದಿದ್ದಾರೆ.

ಅಂದು ನಟ ವಿಶಾಲ್ ಹೇಳಿದ್ದೇನು?

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ್ದ ಮೂಲತಃ ಬೆಂಗಳೂರಿನವರಾದ, ತಮಿಳು ನಟ ವಿಶಾಲ್, ಅಪ್ಪು ಮೇಲಿನ ಅಭಿಮಾನದೊಂದಿಗೆ ತಾವೊಂದು ನಿರ್ಧಾರ ತೆಗೆದುಕೊಂಡಿದ್ದು, ಮುಂದಿನ ವರ್ಷದಿಂದ ಪುನೀತ್ ರಾಜ್​​ಕುಮಾರ್ ಓದಿಸುತ್ತಿದ್ದ 1800 ಮಕ್ಕಳ ಜವಾಬ್ದಾರಿ ನನ್ನದು ಎಂದು ಘೋಷಿಸಿದ್ದರು.

ಇದನ್ನು ಓದಿ : ಅಪ್ಪು ಅವರನ್ನು ಜೀವಂತವಾಗಿಡಲು ಒಂದು ಮಾರ್ಗವಿದೆ: ರಮ್ಯಾ ಭಾವನಾತ್ಮಕ ಪೋಸ್ಟ್

ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸದ್ದಿಲ್ಲದೆ ತೊಡಗಿಸಿಕೊಂಡಿದ್ದ ಪುನೀತ್

ಪುನೀತ್ ರಾಜ್​ಕುಮಾರ್ ಸದ್ದಿಲ್ಲದೆ ಸಾಕಷ್ಟು ಸಮಾಜಮುಖಿ ಕಾರ್ಯಗಳಲ್ಲಿ ಕೂಡ ತೊಡಗಿಕೊಂಡಿದ್ದರು ಎಂಬ ವಿಚಾರ ಅವರ ನಿಧನದ ಬಳಿಕ ಹೆಚ್ಚು ಬಯಲಾಗಿತ್ತು.
Published by:Precilla Olivia Dias
First published: