ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Kichcha Sudeep) ಚುನಾವಣಾ ಸ್ಟಾರ್ ಪ್ರಚಾರಕರಾಗಿ ಅನೌನ್ಸ್ ಮಾಡುತ್ತಿದ್ದಂತೆ ಕಿಚ್ಚನ ಮನೆ ಬಾಗಿಲಿಗೆ ಬೆದರಿಕೆ ಪತ್ರ (Threat letter) ಬಂದಿತ್ತು. ಈ ಸಂಬಂಧ ನಟ ಸುದೀಪ್ ಪೊಲೀಸರಿಗೆ ದೂರು ಸಹ ನೀಡಿದ್ರು. ಕೇಸ್ ಸಂಬಂಧ ವಿಚಾರಣೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ (Arrest). ಸುದೀಪ್ ಆಪ್ತನಾಗಿದ್ದ ಡೈರೆಕ್ಟರ್ ರಮೇಶ್ ಕಿಟ್ಟಿ (Director Ramesh Kitty) ಬಂಧಿತ ಆರೋಪಿಯಾಗಿದ್ದಾನೆ.
ನಿರ್ದೇಶಕ ರಮೇಶ್ ಕಿಟ್ಟಿ ಬಂಧನ
ನಿರ್ದೇಶಕ ರಮೇಶ್ ಕಿಟ್ಟಿ ಈ ಹಿಂದೆ ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ನೋಡಿಕೊಳ್ಳುತ್ತಿದ್ದ ಎಂದು ತಿಳಿದುಬಂದಿದೆ. ಸುದೀಪ್ ಅವರ ಆಪ್ತನಾಗಿದ್ದ ರಮೇಶ್ ಈ ಹಿಂದೆ ಹಲವು ಸಿನಿಮಾಗಳನ್ನ ನಿರ್ದೇಶನಕ ಕೂಡ ಮಾಡಿದ್ದ. ಸುದೀಪ್ ಮತ್ತು ರಮೇಶ್ ನಡುವೆ ಚಾರಿಟಿ ಹಣದ ವಿಚಾರವಾಗಿ ವೈ ಮನಸ್ಸು ಉಂಟಾಗಿತ್ತು. ಈ ವೇಳೆ ನಟ ಸುದೀಪ್ ವಿರುದ್ಧ ನಿರ್ದೇಶಕ ರಮೇಶ್ ಕಿಟ್ಟಿ ಆರೋಪಗಳನ್ನು ಮಾಡಿದ್ರು.
ಹಣ ಕೊಡಲಿಲ್ಲ ಎಂದು ಬೆದರಿಕೆ ಪತ್ರ ಬರೆದೆ- ರಮೇಶ್
ಚಾರಿಟಿಯಲ್ಲಿ ಸುದೀಪ್ ಮೇಲೆ ನಂಬಿಕೆ ಇಟ್ಟು ಎರಡು ಕೋಟಿ ಹಣ ಇನ್ವೆಸ್ಟ್ ಮಾಡಿದ್ದೆ. ಆದ್ರೆ ಸುದೀಪ್ ಹಣ ಕೊಡದೆ ಮೋಸ ಮಾಡಿದ್ರು. ಈ ಕೋಪಕ್ಕೆ ಈ ರೀತಿಯ ಬೆದರಿಕೆ ಪತ್ರ ಬರೆದಿದ್ದೆ ಎಂದು ಸಿಸಿಬಿ ವಿಚಾರಣೆಯಲ್ಲಿ ರಮೇಶ್ ಬಾಯ್ಬಿಟ್ಟಿದ್ದಾನಂತೆ. ಈ ಪ್ರಕರಣ ಹಿಂದೆ ಇನ್ನೂ ಕೆಲ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮನೆ ವಿಳಾಸಕ್ಕೆ ಬಂದಿತ್ತು ಪತ್ರ
ಜೆ.ಪಿ.ನಗರದಲ್ಲಿರು ಸುದೀಪ್ ಅವರ ಮನೆ ವಿಳಾಸಕ್ಕೆ ಅಂಚೆ ಮೂಲಕ ಎರಡು ಪತ್ರಗಳು ಬಂದಿದ್ದವು. ಬೆದರಿಕೆ ಪತ್ರ ಬಂದಿರುವ ಹಿನ್ನಲೆಯಲ್ಲಿ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ರು. ಬೆದರಿಕೆ ಪತ್ರದ ಸಮೇತ ಸುದೀಪ್ ಮ್ಯಾನೇಜರ್ ಜಾಕ್ ಮಂಜು ಅವರು ಪೊಲೀಸರಿಗೆ ದೂರು ನೀಡಿದ್ದರು.
ಖಾಸಗಿ ವಿಡಿಯೋ ಲೀಕ್ ಮಾಡುವ ಬೆದರಿಕೆ
ಸುದೀಪ್ ಖಾಸಗಿ ವಿಡಿಯೋ ಲೀಕ್ ಮಾಡುವುದಾಗಿ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಕೆಲ ಅವಾಚ್ಯ ಶಬ್ದಗಳನ್ನು ಸಹ ಲೆಟರ್ನಲ್ಲಿ ಬರೆದಿದ್ದರು. ಈ ಸಂಬಂಧ ಪೊಲೀಸರು ಎಫ್ ಐ ಆರ್ ಕೂಡ ದಾಖಲಿಸಿದ್ರು.
ಈ ಬಗ್ಗೆ ಮಾಧ್ಯಮಕ್ಕೆ ಉತ್ತರಿಸಿದ್ದ ನಟ ಸುದೀಪ್, ನನಗೆ ಬೆದರಿಕೆ ಪತ್ರ ಬಂದಿರುವುದು ನಿಜ. ಈ ಪತ್ರ ಯಾರೂ ಬರೆದಿದ್ದಾರೆ ಎಂಬುದು ಸಹ ಗೊತ್ತಿದೆ. ಪತ್ರ ಬರೆದವವನಿಗೆ ನನ್ನ ಮನೆ ವಿಳಾಸ ಚೆನ್ನಾಗಿ ತಿಳಿದಿದೆ. ಹೀಗಿದ್ದೂ ಯಾಕೆ ಪೋಸ್ಟ್ ಮಾಡಿದ್ದಾರೆ ಎಂಬುದು ಗೊತ್ತಿಲ್ಲ ಎಂದಿದ್ರು.
ಇದನ್ನೂ ಓದಿ: Kichcha Sudeep: ಬೆದರಿಕೆ ಬಂದಿರೋದು ಚಿತ್ರರಂಗದ ವ್ಯಕ್ತಿಯಿಂದಲೇ! ಕಿಚ್ಚ ಶಾಕಿಂಗ್ ಹೇಳಿಕೆ
ಚಿತ್ರರಂಗಕ್ಕೆ ಸೇರಿದ ವ್ಯಕ್ತಿಯೇ ಈ ಪತ್ರ ಕಳುಹಿಸಿದ್ದಾನೆ. ಆತನಿಗೆ ತಕ್ಕ ಉತ್ತರ ಕೊಡುತ್ತೇನೆ ಎಂದಿದ್ದರು. ಸದ್ಯ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಹಿನ್ನೆಲೆ ನಿದೇರ್ಶಕ ರಮೇಶ್ ಕಿಟ್ಟಿಯನ್ನಯ ಬಂಧಿಸಲಾಗಿದ್ದು, ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ