news18-kannada Updated:August 10, 2020, 9:47 AM IST
ಸುಶಾಂತ್-ರಿಯಾ
ಮುಂಬೈ(ಆ.10) ನಟ ಸುಶಾಂತ್ ಸಿಂಗ್ ರಜಪೂತ್ ಖಾತೆಯಿಂದ 15 ಕೋಟಿ ರೂಪಾಯಿಗೂ ಅಧಿಕ ಹಣ ವರ್ಗಾವಣೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಾ ಚಕ್ರವರ್ತಿ ಅವರನ್ನು ಜಾರಿ ನಿರ್ದೇಶನಲಾಯದ ಅಧಿಕಾರಿಗಳು ಪ್ರಶ್ನೆ ಮಾಡಿದ್ದರು. ಆದರೆ, ಈ ವೇಳೆ ಅವರು ಸರಿಯಾಗಿ ಉತ್ತರ ನೀಡದ ಕಾರಣ ಇಂದು ಅವರನ್ನು ಮತ್ತೊಮ್ಮೆ ಪ್ರಶ್ನೆ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.
ವಿಚಾರಣೆ ಸಮಯವನ್ನು ಮುಂದೂಡುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಬಳಿ ರಿಯಾ ಪರ ವಕೀಲರು ಮನವಿ ಮಾಡಿಕೊಂಡಿದ್ದರು. ಆದರೆ, ಮನವಿ ತಿರಸ್ಕಾರ ಗೊಂಡಿತ್ತು. ಈ ಹಿನ್ನೆಲೆಯಲ್ಲಿ ರಿಯಾ ಶನಿವಾರ ಬೆಳಗ್ಗೆ 11:30ಕ್ಕೆ ವಿಚಾರಣೆಗೆ ಹಾಜರಾಗಿದ್ದಾರು. ಸತತ 18 ಗಂಟೆಗಳ ಕಾಲ ಇಡಿ ಅಧಿಕಾರಿಗಳು ಅವರನ್ನು ಪ್ರಶ್ನೆ ಮಾಡಿದ್ದು, ಭಾನುವಾರ ಮುಂಜಾನೆ ಇಡಿ ಕಚೇರಿಯಿಂದ ರಿಯಾ ಹಿಂದಿರುಗಿದ್ದರು.
18 ಗಂಟೆಗಳ ಕಾಲ ಪ್ರಶ್ನೆ ಮಾಡಿದ ಹೊರತಾಗಿಯೂ ರಿಯಾ ಅವರಿಂದ ಅಧಿಕಾರಿಗಳಿಗೆ ಸರಿಯಾದ ಉತ್ತರ ಸಿಕ್ಕಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಕೂಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ರಿಯಾ ಕುಟುಂಬದವರನ್ನೂ ಇಡಿ ಅಧಿಕಾರಿಗಳು ಇಂದು ಪ್ರಶ್ನೆ ಮಾಡಲಿದ್ದಾರೆ.
ಕಳೆದ ಒಂದು ವರ್ಷದಿಂದ ಸುಶಾಂತ್ ಬ್ಯಾಂಕ್ ಖಾತೆಯಿಂದ ಸುಮಾರು 17 ಕೋಟಿ ರೂಪಾಯಿ ಡೆಬಿಟ್ ಆಗಿದೆ. ಅದರಲ್ಲಿ 15 ಕೋಟಿ ರೂಪಾಯಿಯಷ್ಟು ಹಣ ರಿಯಾ ಖಾತೆಗೆ ವರ್ಗಾವಣೆ ಆಗಿದೆ ಎನ್ನಲಾಗಿದೆ. ಆತನ ಕ್ರೆಡಿಟ್ ಕಾರ್ಡ್ ಮತ್ತು ಬ್ಯಾಂಕ್ ಅಕೌಂಟ್ಗಳಲ್ಲಿನ ಹಣ ಯಾರು ಬಳಸಿದ್ದಾರೆ? ರಿಯಾ ಆತನ ಹಣವನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆಯೂ ತನಿಖೆಯಾಗಬೇಕು ಎಂದು ಸುಶಾಂತ್ ತಂದೆ ದೂರಿದ್ದರು. ಈ ದೂರನ್ನು ಆಧರಿಸಿ ಜಾರಿ ನಿರ್ದೇಶನಾಲಯ ದೂರು ದಾಖಲು ಮಾಡಿಕೊಂಡಿತ್ತು.
ಇದನ್ನೂ ಓದಿ: ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾದ ರಿಯಾ ಚಕ್ರವರ್ತಿ
ಸುಶಾಂತ್ ಸಿಂಗ್ ಮೃತಪಟ್ಟಿ ಎರಡು ತಿಂಗಳು ಕಳೆದಿದೆ. ಸುಶಾಂತ್ದು ಆತ್ಮಹತ್ಯೆಯಲ್ಲ ಕೊಲೆ ಎಂದು ಕೆಲವರು ಹೇಳುತ್ತಿದ್ದಾರೆ. ಅಲ್ಲದೆ, ಸುಶಾಂತ್ ಸಾವಿಗೂ ರಿಯಾಗೂ ಕನೆಕ್ಷನ್ ಇದೆ ಎನ್ನುವ ಮಾತು ಸಾಮಾಜಿಕ ಜಾಲತಾಣದಲ್ಲಿ ದೊಡ್ಡಮಟ್ಟದಲ್ಲಿ ಚರ್ಚೆ ಆಗುತ್ತಲೇ ಇದೆ.
Published by:
Rajesh Duggumane
First published:
August 10, 2020, 9:40 AM IST