ಬಾಲಿವುಡ್ ನಟ ದಿಲೀಪ್ ಕುಮಾರ್ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು

news18
Updated:September 5, 2018, 5:48 PM IST
ಬಾಲಿವುಡ್ ನಟ ದಿಲೀಪ್ ಕುಮಾರ್ ಆರೋಗ್ಯದಲ್ಲಿ ಏರುಪೇರು ; ಆಸ್ಪತ್ರೆಗೆ ದಾಖಲು
news18
Updated: September 5, 2018, 5:48 PM IST
ನ್ಯೂಸ್ 18 ಕನ್ನಡ

ಬಾಲಿವುಡ್​ನ ಹಿರಿಯ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಬಗ್ಗೆ ದಿಲೀಪ್ ಕುಮಾರ್ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ಶ್ವಾಸಕೋಶದ ಸೊಂಕಿನ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ.

95 ವರ್ಷದ ದಿಲೀಪ್ ಕುಮಾರ್ ಅವರ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಲೀಲಾವತಿ ಆಸ್ಪತ್ರೆಯ ವೈದ್ಯರು, ಉಸಿರಾಟದ ತೊಂದರೆಯಿಂದ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದೆ. ಯಾವುದೇ ಅಪಾಯ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಟ ದಿಲೀಪ್ ಕುಮಾರ್ ಅವರಿಗೆ 1994ರಲ್ಲಿ ದಾದ ಸಾಹೇಬ್ ಪಾಲ್ಕೆ,  2015 ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. 1998ರಲ್ಲಿ ಕೊನೆಯಬಾರಿ ಚಲನಚಿತ್ರದಲ್ಲಿ ನಟನೆ ಮಾಡಿದ್ದರು.

ಇನ್ನು ದಿಲೀಪ್ ಕುಮಾರ್ ಕಳೆದ ವರ್ಷ ಕೂಡ ಕಿಡ್ನಿ ಸಮಸ್ಯೆ ಸಂಬಂಧ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲ ದಿನಗಳವರೆಗೆ ದಾಖಲಾಗಿದ್ದ ದಿಲೀಪ್ ಕುಮಾರ್ ಚಿಕಿತ್ಸೆ ಪಡೆದು ಡಿಸ್ಚಾರ್ಜ್​ ಆಗಿದ್ದರು. ಇದೀಗ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ದಿಲೀಪ್ ಕುಮಾರ್ ಮತ್ತೆ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇತ್ತ, ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅವರ ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ. ಅಲ್ಲದೇ ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತಿದ್ದಾರೆ.
First published:September 5, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ