ಸ್ಯಾಂಡಲ್ವುಡ್ ನಟ ಮನದೀಪ್ ರಾಯ್ (Mandeep Roy) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ (Death). ಜನವರಿ 29ರಂದು ಬೆಳಗ್ಗೆ 1.30 ರಿಂದ 2 ಗಂಟೆಯ ಮಧ್ಯೆ ನಟ ಮನದೀಪ್ ಅವರಿಗೆ ಹೃದಯಾಘಾತವಾಗಿದೆ ಎಂದು ಅವರ ಪುತ್ರಿ ಅಕ್ಷತಾ ತಿಳಿಸಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಅವರ ಅಂತ್ಯಕ್ರಿಯೆ ಹೆಬ್ಬಾಳ (Hebbala) ಕ್ರಿಮೆಟೋರಿಯಂನಲ್ಲಿ ನೆರವೇರಲಿದೆ ಎಂದು ಅವರ ಪುತ್ರಿ ಅಕ್ಷತಾ ಅವರು ನ್ಯೂಸ್ 18 ಕನ್ನಡ ಡಿಜಿಟಲ್ಗೆ ದೃಢಪಡಿಸಿದ್ದಾರೆ. ಅವರು ಬಹಳ ಸಮಯದಿಂದ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು.
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರು ಡಿಸೆಂಬರ್ ತಿಂಗಳಲ್ಲಿ ಹೃದಯಾಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯಾಘಾತದಿಂದ ಬೆಂಗಳೂರಿನ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಅಲ್ಲಿಯೇ ಚಿಕಿತ್ಸೆ ಪಡೆದಿದ್ದರು. ಅವರು 500 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅವರ ಚಿಕಿತ್ಸೆಗೆ ಆರ್ಥಿಕ ಸಮಸ್ಯೆ ಕೂಡಾ ಎದುರಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ