Vikrant Rona Collection Day 5: ಎಲ್ಲೆಡೆ ಅಬ್ಬರಿಸುತ್ತಿದೆ ವಿಕ್ರಾಂತ್ ರೋಣ, ಹೇಗಿದೆ 5ನೇ ದಿನದ ಕಲೆಕ್ಷನ್?

Kiccha Sudeep: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಭಾರೀ ನಿರೀಕ್ಷೆಗಳ ನಡುವೆ ಜುಲೈ 28 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಚಿತ್ರವು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ.

ವಿಕ್ರಾಂತ್ ರೋಣ

ವಿಕ್ರಾಂತ್ ರೋಣ

  • Share this:
ಸ್ಯಾಂಡಲ್​ವುಡ್​ನ (Sandalwood) ಕಿಚ್ಚ ಸುದೀಪ್​ (Kiccha Sudeep) ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ (Vikrant Rona) ಸಿನಿಮಾ ಅದ್ಧೂರಿಯಾಗಿ ತೆರೆಕಂಡಿದೆ. ಸಿನಿಮಾ ನೋಡಿದ ಪ್ರೇಕ್ಷಕರು ಚಿತ್ರದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ನಡುವೆ ಚಿತ್ರಕ್ಕೆ ಪೈರಸಿ (Piracy) ಕಾಟ ಎದುರಾಗಿತ್ತು. ವಿಕ್ರಾಂತ್​ ರೋಣ ಸಂಪೂರ್ಣ ಸಿನಿಮಾ ಆನ್​ಲೈನ್​ನಲ್ಲಿ ಸೋರಿಕೆ ಆಗಿ, ಕಿಚ್ಚನ ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು.  ಆದರೂ ಕಿಚ್ಚನ ಅಬ್ಬರಕ್ಕೆ ಯಾವುದೇ ಕೊರತೆ ಆಗಲಿಲ್ಲ. ಅನೇಕ ಸಿನಿ ಪಂಡಿತರು ಮತ್ತು ಒರ್ಮ್ಯಾಕ್ಸ್ ವರದಿಯ ಪ್ರಕಾರ ವಿಕ್ರಾಂತ್​ ರೋಣ ಚಿತ್ರವು ಭರ್ಜರಿ ಕಲೆಕ್ಷನ್ ಮಾಡಿದೆ. ಹಾಗಾದ್ರೆ ಸಿನಿಮಾದ ಐದನೇ ದಿನದ ಕಲೆಕ್ಷನ್ ಹೇಗಿದೆ? ಇಲ್ಲಿದೆ  ಡೀಟೈಲ್ಸ್​. 

100 ಕೋಟಿ ಕ್ಲಬ್ ಸೇರಿದ ಸಿನಿಮಾ

ಮೂಲಗಳ ಪ್ರಕಾರ  ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣದ ಒಟ್ಟು ಕಲೆಕ್ಷನ್ ಮೊದಲ ವಾರಾಂತ್ಯದಲ್ಲಿ 110 ಕೋಟಿ ರೂ ಎನ್ನಲಾಗುತ್ತಿದೆ. ಹಿಂದಿ ಬೆಲ್ಟ್‌ನಲ್ಲಿ ಸುಮಾರು 6 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಚಿತ್ರ ಉತ್ತಮ ಪ್ರದರ್ಶನ ನೀಡುತ್ತಿದೆ. ವಾರದ ದಿನಗಳಲ್ಲಿ ವಿಕ್ರಾಂತ್ ರೋಣ ಯಾವ ರೀತಿ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ. ಟ್ರೇಡ್ ವರದಿಗಳ ಪ್ರಕಾರ ವಿಕ್ರಾಂತ್ ರೋಣ ಈ ವಾರ ಕಲೆಕ್ಷನ್‌ನಲ್ಲಿ ಸ್ವಲ್ಪ ಕುಸಿತವನ್ನು ಕಾಣಬಹುದು ಎನ್ನಲಾಗುತ್ತಿದೆ.

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಭಾರೀ ನಿರೀಕ್ಷೆಗಳ ನಡುವೆ ಜುಲೈ 28 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಚಿತ್ರವು ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಉತ್ತಮ ವಿಮರ್ಶೆಗಳನ್ನು ಪಡೆಯುತ್ತಿದೆ. ಮೊದಲ ದಿನವೇ ಈ ಸಿನಿಮಾ ಉತ್ತಮ ಕಲೆಕ್ಷನ್ ಮಾಡಿದ್ದು, ನೂರು ಕೋಟಿ ಕ್ಲಬ್​ ಸೇರಿದೆ.  ಸಿನಿಮಾ ವ್ಯಾಪಾರ ವಿಶ್ಲೇಷಕ ಸುಮಿತ್ ಕಡೆಲ್ ಪ್ರಕಾರ, ವಿಕ್ರಾಂತ್ ರೋಣ ತನ್ನ ಮೊದಲ ವಾರಾಂತ್ಯದಲ್ಲಿ ಜಾಗತಿಕವಾಗಿ 110 ಕೋಟಿ ಗಳಿಸುವಲ್ಲಿ ಯಶಸ್ವಿಯಾಗಿದೆ., "#VikrantRona 5 ದಿನಗಳಲ್ಲಿ ರೂ 100 ಕೋಟಿ ದಾಟಿದೆ, ಒಟ್ಟಾರೆಯಾಗಿ ವಿಶ್ವದಾದ್ಯಂತ ಸುಮಾರು ರೂ 110 ಕೋಟಿಗಳನ್ನು ಕೆಲಕ್ಷನ್ ಮಾಡಿದೆ. ಪ್ರೇಕ್ಷಕರು ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದಿಯಲ್ಲಿ ಕಲೆಕ್ಷನ್​ ಇಂದು ರೂ 6 ಕೋಟಿಗಳನ್ನು ದಾಟಿದೆ. ಅಭಿನಂದನೆಗಳು @KicchaSudeep #KichaSudeep (sic) ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಲೈಗರ್ ಪ್ರಚಾರ ಕಾರ್ಯಕ್ರಮದಲ್ಲಿ ನೂಕುನುಗ್ಗಲು, ಉಸಿರಾಡಲು ಪರದಾಡಿದ ವಿಜಯ್ ಅಭಿಮಾನಿ

ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆ

ಕನ್ನಡ ಮಾತ್ರವಲ್ಲದೆ ತೆಲುಗು ಮತ್ತು ಹಿಂದಿಯಲ್ಲೂ ವಿಕ್ರಾಂತ್ ರೋಣ ಉತ್ತಮ ಪ್ರದರ್ಶನ ನೀಡುತ್ತಿದ್ದು, ಚಿತ್ರವು ದೇಶಾದ್ಯಂತ ಉತ್ತಮ ಕಲೆಕ್ಷನ್ ಮಾಡುತ್ತಿದೆ. ವಿಕ್ರಾಂತ್ ರೋಣ ಚಿತ್ರವನ್ನು ಅನೂಪ್ ಭಂಡಾರಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಕಿಚ್ಚ ಸುದೀಪ್ ಮುಖ್ಯ ಪಾತ್ರದಲ್ಲಿ ನಟಿಸಿದ್ದು, ಬಾಲಿವುಡ್​ ಬೆಡಗಿ ಜಾಕ್ಲೀನ್​ ಫರ್ನಾಂಡಿಸ್, ನಿರೂಪ್ ಭಂಡಾರಿ ಮತ್ತು ನೀತಾ ಅಶೋಕ್ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶಾಲಿನಿ ಮಂಜುನಾಥ್ ಮತ್ತು ಜಾಕ್ ಮಂಜುನಾಥ್ ನಿರ್ಮಾಣದ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ, ಆಶಿಕ್ ಕುಡುಗೊಲ್ಲಿ ಅವರ ಸಂಕಲನ ಮತ್ತು ವಿಲಿಯಂ ಡೇವಿಡ್ ಅವರ ಛಾಯಾಗ್ರಹಣವಿದೆ.



ವಿಕ್ರಾಂತ್ ರೋಣ ಸಿನಿಮಾ ಕರ್ನಾಟಕದಲ್ಲಿ ಸುಮಾರು 325 ಸಿಂಗಲ್ ಸ್ಕ್ರೀನ್ ನಲ್ಲಿ ಬಿಡುಗಡೆ ಆಗಿದೆ. ಉಳಿದಂತೆ 325 ಥಿಯೇಟರ್, 65 ಮಲ್ಟಿಫೆಕ್ಸ್ ಸ್ಕ್ರೀನ್ಸ್ ಗಳಲ್ಲಿ‌ 2500ಕ್ಕೂ ಹೆಚ್ಚು ಶೋ ಪ್ರದರ್ಶನ ಕಂಡಿದೆ. ಅದರಲ್ಲಿಯೂ ಬೆಂಗಳೂರಿನಲ್ಲೆ 1200 ಶೋ ನೀಡಲಾಗಿದೆ.

ಇದನ್ನೂ ಓದಿ: ಸುದೀಪ್ ಹಿಂದಿ ಕಲಿತಿದ್ದು ಇವರಿಂದ ಅಂತೆ, ಅಜಯ್ ದೇವಗನ್ ಜೊತೆ ಟ್ವಿಟ್​ ವಾರ್​ ಬಗ್ಗೆ ಕಿಚ್ಚ ಹೇಳಿದ್ದೇನು?

ಸ್ಯಾಂಡಲ್​ವುಡ್​ನ ಪ್ಯಾನ್​ ಇಂಡಿಯಾ ಸಿನಿಮಾಗಳು ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ರಾಕಿಂಗ್ ಸ್ಟಾರ್ ಯಶ್​ ಅಭಿನಯದ ಕೆಜಿಎಫ್​ ಹಾಗೂ ಕೆಜಿಎಫ್​ 2 ಹಲವಾರು ದಾಖಲೆಗಳನ್ನು ಧೂಳಿಪಟ ಮಾಡಿದ್ದವು. ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ದಾಖಲೆ ಬರೆದಿತ್ತು ಕೆಜಿಎಫ್​ ಚಾಪ್ಟರ್ 2 ಸಿನಿಮಾ. ಅಲ್ಲದೇ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ಸಹ 150 ಕೋಟಿ ಕಲೆಕ್ಷನ್ ಮಾಡಿತ್ತು.
Published by:Sandhya M
First published: