ಕಿಚ್ಚ ಸುದೀಪ್ (Kiccha Sudeep) ಅವರ ಇತ್ತೀಚಿನ ಫ್ಯಾಂಟಸಿ ಅಡ್ವೆಂಚರ್ ಥ್ರಿಲ್ಲರ್ ವಿಕ್ರಾಂತ್ ರೋಣ (Vikrant Rona) ಸಿನಿಮಾ ಜುಲೈ 28 ರಂದು ಬಿಡುಗಡೆಯಾಗಿದ್ದು, ಬಹುತೇಕ ಹೌಸ್ ಫುಲ್ ಶೋ (House full Show) ಆಗಿದ್ದು, ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ.ಅನುಪ್ ಭಂಡಾರಿ (Anup Bhandari) ನಿರ್ದೇಶನದ ಈ ಸಿನಿಮಾ ನಿಗೂಢ ಘಟನೆಗಳ ಸುತ್ತ ಸುತ್ತುತ್ತದೆ. ಚಿತ್ರದ ತಾಂತ್ರಿಕ ಅಂಶಗಳು ಚಿತ್ರಕ್ಕಿಂತ ಹೆಚ್ಚು ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿವೆ. ಹಾಗಾದ್ರೆ ಈ ಸಿನಿಮಾದ ಮೂರನೇ ದಿನದ ಕಲೆಕ್ಷನ್ ಹೇಗಿತ್ತು? ಇಲ್ಲಿದೆ ಸಂಪೂರ್ಣ ಮಾಹಿತಿ.
ಮೂರನೇ ದಿನದ ಕಲೆಕ್ಷನ್ ಹೀಗಿದೆ
ಆರ್‌ಆರ್‌ಆರ್ ಅಥವಾ ಕೆಜಿಎಫ್ ಅಧ್ಯಾಯ 2 ನಂತಹ ಹಿಂದಿನ ಸೌತ್ ಸಿನಿಮಾಗಳ ಬಿಡುಗಡೆಗಳ ರೀತಿಯೇ, ಈ ಚಿತ್ರ ಬಿಡುಗಡೆಯ ಮೊದಲು ಸಾಕಷ್ಟು ಹೈಪ್ ಕ್ರಿಯೇಟ್ ಮಾಡಿತ್ತು. ಮೂರನೇ ದಿನದ ಕಲೆಕ್ಷನ್ ವಿಚಾರಕ್ಕೆ ಬಂದರೆ ಮುಂಬೈನಲ್ಲಿ ಹೆಚ್ಚಿನ ಬುಕ್ಕಿಂಗ್ ಆಗಿಲ್ಲ. ಆದರೆ ಬೆಂಗಳೂರಿನಲ್ಲಿ ಸಿನಿಮಾ ಬುಕ್ಕಿಂಗ್ ಉತ್ತಮವಾಗಿದೆ. ಈ ಸಿನಿಮಾ ಸಿನಿಪ್ರಿಯರಿಗೆ ಬಹಳ ಇಷ್ಟವಾಗಿದೆ. ಎಲ್ಲೆಡೆ ಸಿನಿಮಾ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ವರದಿಗಳ ಪ್ರಕಾರ, ಚಿತ್ರವು 2D ಮತ್ತು 3D ಯಲ್ಲಿ ಯಶಸ್ಸು ಪಡೆಯುತ್ತಿದೆ. ಈಗ, ದಿನದ 2 ಬಾಕ್ಸ್ ಆಫೀಸ್ ಕಲೆಕ್ಷನ್‌ಗಳಿಗೆ ಬರುವುದಾದರೆ, ಚಿತ್ರದ ಆಕ್ಯುಪೆನ್ಸಿ ವರದಿಯ ಪ್ರಕಾರ, ಈ ಸಿನಿಮಾ ಎರಡನೇ ದಿನಕ್ಕೆ ಹೋಲಿಸಿದರೆ 3 ನೇ ದಿನದಂದು ಸಹ ಯಾವುದೇ ಚೇತರಿಕೆ ಕಂಡಿಲ್ಲ.ಆಕ್ಯುಪೆನ್ಸಿ ವರದಿಗಳ ಪ್ರಕಾರ, ಚಿತ್ರವು 3 ನೇ ದಿನದಂದು ನಿರೀಕ್ಷೆ ಮಾಡಿದ ರೀತಿ ಕಲೆಕ್ಷನ್ ಮಾಡಿಲ್ಲ ಎನ್ನಲಾಗುತ್ತಿದೆ.
ಇದನ್ನೂ ಓದಿ: ಹೊಸ ನಿರ್ಧಾರ ಮಾಡಿದ ಶ್ವೇತಾ ಶ್ರೀವಾತ್ಸವ್, ಅಚ್ಚರಿಯಾದ್ರೂ ಅದ್ಬುತ ಇದು!
ಅಂದಾಜಿನ ಪ್ರಕಾರ, ಶುಕ್ರವಾರ ಈ ಸಿನಿಮಾದ ಕಲೆಕ್ಷನ್ 20 ರಿಂದ 25 ಕೋಟಿ ಕಲೆಕ್ಷನ್ ಮಾಡಿತ್ತು. ಆದರೆ ಶನಿವಾರ 10 ಕೋಟಿ ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ. ಈ ವಾರಂತ್ಯದಲ್ಲಿ ಈ ಸಿನಿಮಾದ ಕಲೆಕ್ಷನ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ ಎನ್ನಲಾಗುತ್ತಿದೆ. ವಿಕ್ರಾಂತ್ ರೋಣ ಸಿನಿಮಾ ಕರ್ನಾಟಕದಲ್ಲಿ ಸುಮಾರು 325 ಸಿಂಗಲ್ ಸ್ಕ್ರೀನ್ ನಲ್ಲಿ ಬಿಡುಗಡೆ ಆಗಿದೆ. ಉಳಿದಂತೆ 325 ಥಿಯೇಟರ್, 65 ಮಲ್ಟಿಫೆಕ್ಸ್ ಸ್ಕ್ರೀನ್ಸ್ ಗಳಲ್ಲಿ 2500ಕ್ಕೂ ಹೆಚ್ಚು ಶೋ ಪ್ರದರ್ಶನ ಕಂಡಿದೆ. ಅದರಲ್ಲಿಯೂ ಬೆಂಗಳೂರಿನಲ್ಲೆ 1200 ಶೋ ನೀಡಲಾಗಿದೆ.
ಬಿಡುಗಡೆಗೂ ಮುನ್ನ ಸದ್ದು ಮಾಡಿದ್ದ ಸಿನಿಮಾ
ಸ್ಯಾಂಡಲ್ವುಡ್ನ ಪ್ಯಾನ್ ಇಂಡಿಯಾ ಸಿನಿಮಾಗಳು ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಇದೇ ಮೊದಲೇನಲ್ಲ. ಈ ಮೊದಲು ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಹಾಗೂ ಕೆಜಿಎಫ್ 2 ಹಲವಾರು ದಾಖಲೆಗಳನ್ನು ಧೂಳಿಪಟ ಮಾಡಿದ್ದವು. ಸಾವಿರ ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ದಾಖಲೆ ಬರೆದಿತ್ತು ಕೆಜಿಎಫ್ ಚಾಪ್ಟರ್ 2 ಸಿನಿಮಾ. ಅಲ್ಲದೇ, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ಸಹ 150 ಕೋಟಿ ಕಲೆಕ್ಷನ್ ಮಾಡಿತ್ತು.
ಇದನ್ನೂ ಓದಿ: ಏಕೆ ರಾಧೆ ಮೌನ ತಳೆದೆ ಎಂದವರಿಗೆ ಉತ್ತರ, ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ಕೃತಿಕಾ ರವೀಂದ್ರ
ಕಿಚ್ಚನ ಸಿನಿಮಾ ಇದೇ ಮೊದಲ ಬಾರಿಗೆ ಇಡೀ ವಿಶ್ವದಾದ್ಯಂತ ಗ್ರ್ಯಾಂಡ್ ಆಗಿ ರಿಲೀಸ್ ಆಗಿದೆ. ಅಲ್ಲದೆ, 3ಡಿಯಲ್ಲಿ ಸಿನಿಮಾ ರಿಲೀಸ್ ಆಗಿರುವುದರಿಂದ ಜನರ ನಿರೀಕ್ಷೆ ಹೆಚ್ಚಿತ್ತು. ಈಗಾಗಲೇ ಓವರ್‌ಸೀನ್ ಸಿನಿಮಾ ರೈಟ್ಸ್ ಅನ್ನು 'ಒನ್ ಟ್ವೆಂಟಿ 8 ಮೀಡಿಯಾ' ಭಾರಿ ಮೊತ್ತಕ್ಕೆ ಪಡೆದುಕೊಂಡಿದೆ. ಒನ್ ಟ್ವೆಂಟಿ 8 ಮೀಡಿಯಾ' ಸುಮಾರು 1.3 ಮಿಲಿಯನ್‌ಗೆ ಓವರ್‌ಸೀಸ್ ಹಕ್ಕುಗಳನ್ನು ಪಡೆದುಕೊಂಡಿದೆ. ಅಂದರೆ, ಭಾರತದ 10 ಕೋಟಿ ರೂಪಾಯಿಗೆ ಸೇಲ್ ಆಗಿದೆ ಎನ್ನಲಾಗಿತ್ತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ