ಅಭಿನಯ ಚಕ್ರವರ್ತಿ ಎಂದೇ ಹೆಸರಾಗಿರುವ ನಟ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ 'ವಿಕ್ರಾಂತ್ ರೋಣ' ಸಿನಿಮಾ ಕುರಿತು ಸಂತೋಷದ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ. ಆಗಸ್ಟ್ 19ರಂದು ಭಾರತದಾದ್ಯಂತ 'ವಿಕ್ರಾಂತ್ ರೋಣ' ಸಿನಿಮಾ ತೆರೆ ಕಾಣಲಿದೆ ಎಂದು ನಟ ಕಿಚ್ಚ ಸುದೀಪ್ ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ. ಬುರ್ಜಾ ಖಲೀಫಾ ಕಟ್ಟಡದ ಮೇಲೆ 'ವಿಕ್ರಾಂತ್ ರೋಣ' ಸಿನಿಮಾದ ಟೈಟಲ್ ಲಾಂಚ್ ಮಾಡಿದ್ದ ಚಿತ್ರತಂಡ ಕನ್ನಡ ಮಾತ್ರವಲ್ಲದೆ ತೆಲುಗು, ಹಿಂದಿ, ತಮಿಳು, ಮಲೆಯಾಳಂ ಸೇರಿದಂತೆ ಒಟ್ಟು 6 ಭಾಷೆಗಳಲ್ಲಿ ಈ ಸಿನಿಮಾವನ್ನು ತೆರೆಗೆ ಬರಲಿದೆ.
ಒಟ್ಟು 6 ಭಾಷೆಗಳಲ್ಲಿ 'ವಿಕ್ರಾಂತ್ ರೋಣ' ಸಿನಿಮಾ ತೆರೆ ಕಾಣಲಿದೆ ಎಂದು ಘೋಷಿಸಿದ್ದ ನಟ ಕಿಚ್ಚ ಸುದೀಪ್ ಇದೀಗ ಆಗಸ್ಟ್ 19ರಂದು ಭಾರತದಾದ್ಯಂತ ಸಿನಿಮಾ ತೆರೆಗೆ ಬರಲಿದೆ ಎಂಬ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡುವುದಾಗಿ ನಿನ್ನೆಯೇ ಘೋಷಿಸಿದ್ದ ನಟ ಸುದೀಪ್ ಅದರಂತೆ ತಮ್ಮ ಸಿನಿಮಾದ ರಿಲೀಸ್ ದಿನಾಂಕವನ್ನು ಘೋಷಿಸಿದ್ದಾರೆ.
ವಿಕ್ರಾಂತ್ ರೋಣ ಸಿನಿಮಾದ ಚಿತ್ರೀಕರಣ ಸಿದ್ದತೆ ಮತ್ತು ಪ್ರಕ್ರಿಯೆಯ ಆನಂದವನ್ನು ಅನುಭವಿಸಿದ ನಂತರ ಈಗ *ರೋಮಾಂಚನಕಾರಿ* ಸುದ್ದಿಯೊಂದನ್ನು ನಿಮ್ಮೊಂದಿಗೆ ಹಂಚಿಕೊಳ್ಳುವ ಸಮಯ! ವಿಕ್ರಾಂತ್ರ ರೋಣ ಸಿನಿಮಾ ಆಗಸ್ಟ್ 19 ರಂದು ಭಾರತದಾದ್ಯಂತ ಬಿಡುಗಡೆಗೊಳ್ಳುತ್ತಿದೆ ಎಂದು ತಿಳಿಸಲು ನಮ್ಮ ವಿಕ್ರಾಂತ್ ರೋಣ ತಂಡವು ಹರ್ಷಿಸುತ್ತದೆ.#VikrantRona
🤗 pic.twitter.com/bI80FiW64K
— Kichcha Sudeepa (@KicchaSudeep) April 15, 2021
..@VikrantRona arriving on Aug 19.
ವಿಕ್ರಾಂತ್ ರೋಣ August 19, 2021 ರಿಂದ ವಿಶ್ವದಾದ್ಯಂತ#VikrantRona #VikrantRonaOnAug19 #WorldGetsANewHero pic.twitter.com/DLqSWQ9iho
— Anup Bhandari (@anupsbhandari) April 15, 2021
'ವಿಕ್ರಾಂತ್ ರೋಣ' ಸಿನಿಮಾವನ್ನು ರಂಗಿತರಂಗ, ರಾಜರಥ ಖ್ಯಾತಿಯ ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಜಾಕ್ ಮಂಜು ನಿರ್ಮಾಣ ಮಾಡಿರುವ ಈ ಸಿನಿಮಾದಲ್ಲಿ ಕಿಚ್ಚ ಸುದೀಪ್, ನಿರೂಪ್ ಭಂಡಾರಿ, ನೀತಾ ಅಶೋಕ್, ರವಿಶಂಕರ್ ಗೌಡ ಸೇರಿದಂತೆ ಹಲವು ನಟರು ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ