news18-kannada Updated:December 14, 2020, 11:28 AM IST
Vijay rangaraju
ಡಾ. ರಾಜಕುಮಾರ್ ಜೊತೆಜೊತೆಯಲ್ಲೆ ಸ್ಯಾಂಡಲ್ವುಡ್ ಕಂಡ ದಿಗ್ಗಜ ನಟ, ದಾದಾ, ಸಾಹಸಸಿಂಹ ವಿಷ್ಣುವರ್ಧನ್ ಅವರ ಬಗ್ಗೆ ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ತೆಲುಗು ನಟ ವಿಜಯ್ ರಂಗರಾಜು ಈಗ ಮಂಡಿಯೂರಿ, ಅತ್ತು ಕನ್ನಡಿಗರಲ್ಲಿ ಕ್ಷಮೆಯಾಚಿಸಿದ್ದಾರೆ. ನನ್ನದು ತಪ್ಪಾಯಿತು. ಬಾಯಿತಪ್ಪಿ ಆರೀತಿ ಮಾತನಾಡಿದ್ದೆ. ನನ್ನನ್ನು ಕ್ಷಮಿಸಿಬಿಡಿ ಎಂದು ಕೈ ಮುಗಿದು ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದಾರೆ. ವಿಜಯ್ ರಂಗರಾಜು ವಿಷ್ಟುದಾದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಬೆನ್ನಲ್ಲೇ ಅವರ ವಿರುದ್ಧ ಇಡೀ ಸ್ಯಾಂಡಲ್ವುಡ್ ತಿರುಗಿಬಿದ್ದಿತ್ತು. ಕನ್ನಡದ ಕಿರಿಯ ಸ್ಟಾರ್ ನಟರಿಂದ ಹಿಡಿದು ಹಿರಿಯರ ವರೆಗೆ ವಿಜಯ್ ಹೇಳಿಕೆ ಹಿಂಪಡೆಯುವಂತೆ ಆಗ್ರಯಿಸಿದ್ದರು.
ಕನ್ನಡ ಚಿತ್ರರಂಗದಲ್ಲಿ ತಮ್ಮ ಮನೋಜ್ಞ ನಟನೆಯ ಮೂಲಕ ಛಾಪು ಮೂಡಿಸಿದ್ದ ನಟ ಡಾ. ವಿಷ್ಣುವರ್ಧನ್ ಅಣ್ಣಾವ್ರ ನಂತರದ ಸ್ಥಾನದಲ್ಲಿ, ಇಂದಿಗೂ ಅಭಿಮಾನಿಗಳ ಮನಸ್ಸಲ್ಲಿ ಚಿರಸ್ಥಾಯಿಯಾಗಿ ಉಳಿದಿದ್ದಾರೆ. ಇಂತಹ ಮೇರುನಟನನ್ನು ತೆಲುಗು ಪೋಷಕ ನಟ ವಿಜಯ್ ರಂಗರಾಜು ಅವಾಚ್ಯ ಶಬ್ಧಗಳಿಂದ ನಿಂದಿಸಿ ಅಪಮಾನ ಮಾಡಿದ್ದರು.
Vishnuvardhan: ವಿಷ್ಣುವರ್ಧನ್ ಪರ ನಿಂತು ತೆಲುಗು ನಟನಿಗೆ ಸೈಲೆಂಟ್ ಆಗಿ ವಾರ್ನಿಂಗ್ ಕೊಟ್ಟ ರಾಕಿಂಗ್ ಸ್ಟಾರ್ ಯಶ್
ಕನ್ನಡಿಗರ ಆಕ್ರೋಶ ತಾರಕಕ್ಕೇರುತ್ತಿದೆ ಎಂಬೊತ್ತಿಗೆ ವಿಜಯ್ ಕ್ಷಮೆ ಕೇಳಿದ್ದಾರೆ. ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ ರಂಗರಾಜು, ರಾಜಕುಮಾರ್ ಅವರ ಮಗ ಪುನೀತ್, ಕಿಚ್ಚ ಸುದೀಪ್, ಉಪೇಂದ್ರ ಅವರೇ ನನ್ನನ್ನು ದಯವಿಟ್ಟು ಕ್ಷಮಿಸಿಬಿಡಿ ಎಂದು ಹೇಳಿದ್ದಾರೆ.
'ನನಗೆ ನನ್ನ ತಪ್ಪಿನ ಅರಿವಾಗಿದೆ, ನನ್ನ ತಪ್ಪಿಗೆ ಶಿಕ್ಷೆಯನ್ನೂ ಅನುಭವಿಸುತ್ತಿದ್ದೇನೆ. ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ವಿಷ್ಣುವರ್ಧನ್ ಬಗ್ಗೆ ಹಾಗೆ ಮಾತನಾಡಬಾರದಿತ್ತು, ನನ್ನನ್ನು ಕ್ಷಮಿಸಿಬಿಡಿ' ಎಂದು ಅಂಗಲಾಚಿದ್ದಾರೆ.
ಇತ್ತ ವಿಜಯ್ ಕ್ಷಮೆ ಕೇಳುತ್ತಿದ್ದಂತೆ ವಿಷ್ಣುವರ್ಧನ್ ಅಭಿಮಾನಿಗಳು, ವಿಜಯ್ ಅಭಿಮಾನ್ ಸ್ಟುಡಿಯೋಗೆ ಬಂದು ಕ್ಷಮೆಯಾಚಿಸಬೇಕು. ಇಲ್ಲದಿದ್ರೆ ಸುಮ್ನೆ ಬಿಡಲ್ಲ ಎಂದು ಹೇಳುತ್ತಿದ್ದಾರೆ.
ನವರಸ ನಾಯಕ ಜಗ್ಗೇಶ್, ಕಿಚ್ಚ ಸುದೀಪ್, ಪುನೀತ್ ರಾಜಕುಮಾರ್, ಅನಿರುದ್ಧ್ ಸೇರಿ ಹಲವು ಘಟಾನುಘಟಿ ಕಲಾವಿದರು ತೆಲುಗು ನಟನಿಗೆ ಖಡಕ್ ಸಂದೇಶ ರವಾನಿಸಿದ್ದರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಶೇರ್ ಮಾಡಿಕೊಡಿಕೊಳ್ಳುವ ಮೂಲಕ ರಂಗರಾಜು ಕ್ಷಮೆಯಾಚಿಸಬೇಕೆಂದು ಸಿಡಿದೆದಿದ್ದಿದ್ದರು.
ತೆಲುಗು ನಟನ ವಿರುದ್ಧ ಸಿಡಿದೆದ್ದ ಕಿಚ್ಚ ಸುದೀಪ್; ವಿಷ್ಣು ಸರ್ ಇಲ್ಲದಿರಬಹುದು ನಾವಿದ್ದೇವೆ...
ಅದರಲ್ಲೂ ಪ್ರಮುಖವಾಗಿ ಸುದೀಪ್, 'ವಿಷ್ಣು ಅವರು ಇಲ್ಲ ಎಂದ ಮಾತ್ರಕ್ಕೆ ಹೀಗೆಲ್ಲ ಮಾತನಾಡುವುದು ಸರಿಯಲ್ಲ. ಆ ವ್ಯಕ್ತಿ ಬದುಕಿದ್ದಾಗ ಮಾತನಾಡಿದ್ದರೆ ಗಂಡಸ್ತನ ಇರುತ್ತಿತ್ತು. ಸಿನಿಮಾ ಕ್ಷೇತ್ರ ಅಂದರೆ ಒಂದು ಕುಟುಂಬದ ರೀತಿ. ನಿಮ್ಮ ಈ ಮಾತನ್ನು ನಿಮ್ಮ ಚಿತ್ರರಂಗದಲ್ಲೇ ಯಾರೂ ಒಪ್ಪುವುದಿಲ್ಲ. ನಾಡಿನ ಜನರ ಆರಾಧ್ಯ ದೈವವಾಗಿರುವ ವಿಷ್ಣುವರ್ಧನ್ ನಮ್ಮ ನಡುವೆ ಇಲ್ಲದೆ ಇರಬಹುದು. ಕೋಟಿ ಕೋಟಿ ಮಕ್ಕಳನ್ನು ಬಿಟ್ಟು ಹೋಗಿದ್ದಾರೆ. ಇಲ್ಲಿ ಯಾರೂ ಸುಮ್ಮನೆ ಕುಳಿತಿಲ್ಲ' ಎಂದು ಎಚ್ಚರಿಸಿದ್ದರು.
ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ನೆಲೆಸಿರುವ ವಿಷ್ಣುವರ್ಧನ್ ಬಗ್ಗೆ ನಾಲಿಗೆ ಹರಿಬಿಟ್ಟಿದ್ದ ರಂಗರಾಜು, ವಿಷ್ಣುವರ್ಧನ್ ಅವರಿಗೆ ಲೇಡಿಸ್ ವೀಕ್ ನೆಸ್ ಇತ್ತು. ಒಂದು ಬಾರಿ ನಾನು ಅವರ ಕಾಲರ್ ಹಿಡಿದುಕೊಂಡೆ ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು. ಇದು ವಿಷ್ಣು ಅಭಿಮಾನಿಗಳನ್ನು ಕೆರಳುವಂತೆ ಮಾಡಿತ್ತು.
Published by:
Vinay Bhat
First published:
December 13, 2020, 1:25 PM IST