ಉಜಿರೆ, ಮೇ 12: ಸಿನೆಮಾ ರಂಗದಲ್ಲಿ (Film industry) ಉನ್ನತ ಮಟ್ಟದಲ್ಲಿ ಬೆಳೆಯಬೇಕಾದರೆ ನಾವು ನಮ್ಮ ತನವನ್ನು ಬಿಡದೆ, ನಮ್ಮನ್ನು ಗುರುತಿಸಿದವರನ್ನು ಮರೆಯದೆ ನಾವು ಮುನ್ನೆಡೆದರೆ ನಮಗೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಖ್ಯಾತ ಕನ್ನಡದ ಹಿರಿಯ ನಟ (Senior actor), ರಂಗಕರ್ಮಿ (Theatre artist) ಎಂ.ಕೆ ಮಠ (M K Mutt) ಅವರು ವಿದ್ಯಾರ್ಥಿಗಳಿಗೆ (Students) ಕಿವಿಮಾತು ಹೇಳಿದರು. ಅವರು ಉಜಿರೆ (Ujire) ಎಸ್.ಡಿ.ಎಂ ಕಾಲೇಜಿನ ಬಿವೋಕ್ ವಿಭಾಗದ ಡಿಜಿಟಲ್ ಮಿಡೀಯಾ ಹಾಗು ಫಿಲ್ಮಂ ಮೇಕಿಂಗ್ ವಿದ್ಯಾರ್ಥಿ ಲೊಕೇಶ್ ಧರ್ಮಸ್ಥಳ ರಚಿಸಿ, ನಿರ್ದೇಶನ ಮಾಡಿರುವ "ಆಫ್ ಟು ಡಸ್ಟ್ ಬಿನ್" ಕನ್ನಡ ಕಿರುಚಿತ್ರವನ್ನು ಬಿಡುಗಡೆ ಮಾಡಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಸಿನೆಮಾ ಒಂದು ಸಾಗರ ಇದ್ದಂತೆ ಅಲ್ಲಿ ಉನ್ನತಮಟ್ಟದಲ್ಲಿ ಬೆಳೆಯಬೇಕಾದರೆ ಯಾವುದೆ ಅಡ್ಡ ದಾರಿಯಿಲ್ಲ, ಪ್ರತಿಭೆ, ಪರಿಶ್ರಮವೇ ಮುಖ್ಯದಾರಿ, ಆ ದಾರಿಯಲ್ಲಿ ನಾವು ಹೇಗೆ ಸಾಗುತ್ತೇವೂ ಅದರಂತೆ ನಮ್ಮ ಭವಿಷ್ಯವು ನಿರ್ಧಾರವಾಗುತ್ತದೆ, ಹಾಗಾಗಿ ವಿದ್ಯಾರ್ಥಿಗಳು ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು ಎಂದರು.
ಇದನ್ನೂ ಓದಿ: Niveditha Gowda: Mrs.India ಟ್ರೈನಿಂಗ್ ನಲ್ಲಿ ಕಿರುತೆರೆಯ ಗೊಂಬೆ ನಿವೇದಿತಾ ಗೌಡ
ಕಾರ್ಯಕ್ರಮದಲ್ಲಿ ಚಿತ್ರದ ನಿರ್ದೇಶಕ ಲೋಕೇಶ್ ಧರ್ಮಸ್ಥಳ ಕಿರುಚಿತ್ರದ ನಿರ್ಮಾಣದ ಅನುಭವಗಳನ್ನು ಹಂಚಿಕೊಂಡರು. ಬಿವೋಕ್‍ನ ವಿವಿಧ ವಿಭಾಗಗಳ ಪ್ರಾಧ್ಯಪಾಕರು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಡಿಜಿಟಲ್ ಮಿಡೀಯಾ ಹಾಗು ಫಿಲ್ಮಂ ಮೇಕಿಂಗ್ ವಿಭಾಗದ ಮುಖ್ಯಸ್ಥರಾದ ಮಾಧವ ಹೊಳ್ಳ ಸ್ವಾಗತಿಸಿ, ವಿದ್ಯಾರ್ಥಿ ಸುಮನ ವಂದಿಸಿದರು, ಗೌತಮ್ ಕಾರ್ಯಕ್ರಮವನ್ನು ನಿರೂಪಿಸಿದರು.
ಎಂ.ಕೆ ಮಠ
ಕನ್ನಡದ ಹಲವಾರು ಸಿನಿಮಾಗಳಲ್ಲಿ ಎಂ.ಕೆ ಮಠ ನಟಿಸಿದ್ದಾರೆ. ಸಿನಿಮಾ ಮಾತ್ರವಲ್ಲದೆ ಸಿರೀಯಲ್ಗಳಲ್ಲೂ ಬಣ್ಣ ಹಚ್ಚುವ ಮೂಲಕ ಗುರುತಿಸಿಕೊಂಡಿದ್ದಾರೆ. ಕನ್ನಡದ ಹೆಸರಾಂತ ನಟರೊಂದಿಗೆ ಸ್ಕ್ರೀನ್ ಶೇರ್ ಮಾಡಿಕೊಂಡಿರುವ ಇವರು ಇಂದಿಗೂ ಪಾತ್ರಕ್ಕೆ ತಕ್ಕಂತೆ ಬೇಡಿಕೆಯ ನಟರಾಗಿ ಗುರುತಿಸಿಕೊಂಡಿದ್ದಾರೆ.
ರಾಮ ರಾಮ ರೇ, ಒಂದಲ್ಲಾ ಎರಡಲ್ಲಾ ಹೀಗೆ ಅನೇಕ ಸಿನಿಮಾಗಳಲ್ಲಿ ಎಂ.ಕೆ ಮಠ ಅವರು ನಟಿಸಿದ್ದಾರೆ. ಈ ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ವಿಭಿನ್ನವಾಗಿ ಸದ್ದು ಮಾಡಿವೆ. ಹೊಸಬರು ಮತ್ತು ಹೊಸತನವನ್ನು ನೀಡುವ ಮೂಲಕ ಕನ್ನಡಿಗರಿಗೆ ಉತ್ತಮ ಸಂದೇಶ ನೀಡಿದ ಸಿನಿಮಾವಾಗಿದೆ.
ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಮಾಡಿರುವವರಿಗೆ ಎಸ್ಡಿಎಂ ಕಾಲೇಜಿನಲ್ಲಿ ಉದ್ಯೋಗವಕಾಶ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ (Sri Dharmastala Manjunatheshwara College Ujire) ಪತ್ರಿಕೋದ್ಯಮ (journalism) ವಿಭಾಗದಲ್ಲಿ ಖಾಲಿ ಇರುವ ಕೆಲ ಡಿಜಿಟಲ್ ಮೀಡಿಯಾ ಹಾಗೂ ಫಿಲ್ಮ್ ಮೇಕಿಂಗ್ ವಿಷಯದ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಮತ್ತು ಆಸಕ್ತ ಅಬ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಆಸಕ್ತ ಅಭ್ಯರ್ಥಿಗಳು ಮೇ 31ರ ಮೊದಲು ಆನ್ಲೈನ್ ಮೂಲಕ ಅರ್ಜಿ ಹಾಕಬಹುದಾಗಿದೆ.
ದಕ್ಷಿಣ ಕನ್ನಡದ ಉಜಿರೆಯಲ್ಲಿ ಖಾಲಿ ಇರುವ ಕೆಲ ಬೋಧಕ ಹುದ್ದೆಗಳ ಭರ್ತಿಗೆ ಎಸ್ಡಿಎಂ ಕಾಲೇಜು ಅರ್ಜಿ ಆಹ್ವಾನಿಸಿದ್ದು, ಪತ್ರಿಕೋದ್ಯಮದಲ್ಲಿ ಪದವಿ ಪಡೆದಿರುವ ಅಥವಾ ಅದಕ್ಕೆ ಸಮನಾದ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಇನ್ನು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಉತ್ತಮ ವೇತನ ನೀಡಲಾಗುತ್ತದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ