ಕೆಜಿಎಫ್ ಸಿನಿಮಾ (KGF) ಬಳಿಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ರಾಕಿಂಗ್ ಸ್ಟಾರ್ ಯಶ್ (Rocking Star Yash) ದೇಶದಾದ್ಯಂತ ಅಭಿಮಾನಿ ಬಳಗ ಹೊಂದಿದ್ದಾರೆ. ರಾಕಿ ಭಾಯ್ ಹುಟ್ಟುಹಬ್ಬ ಆಚರಿಸಲು ಅಭಿಮಾನಿಗಳು ಕಾಯುತ್ತಿದ್ದಾರೆ. ಆದ್ರೆ ಈ ವರ್ಷ ಯಶ್ ಅಭಿಮಾನಿಗಳ (Fans) ಜೊತೆ ಹುಟ್ಟುಹಬ್ಬ ಆಚರಿಸಿಕೊಳ್ತಿಲ್ಲ ಎನ್ನುವ ಸುದ್ದಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಆದ್ರೆ ಇಂದೇ (ಜನವರಿ 06) ಅಭಿಮಾನಿಗಳನ್ನು ಯಶ್ ಭೇಟಿಯಾಗಿದ್ದು, ಫ್ಯಾನ್ಸ್ ಕೂಡ ಫುಲ್ ಖುಷ್ ಆಗಿದ್ದಾರೆ. ಈ ಬಾರಿ ಯಶ್ ತಮ್ಮ ಫ್ಯಾಮಿಲಿ (Family) ಜೊತೆ ಹುಟ್ಟುಹಬ್ಬ (Birthday) ಆಚರಿಸಿಕೊಳ್ಳಲಿದ್ದಾರೆ. ಇಂದೇ (ಜ.06) ಕುಟುಂಬದ ಜೊತೆ ದುಬೈಗೆ (Dubai) ತೆರಳಿದ್ದಾರೆ.
ಯಶ್ ಮನೆ ಬಳಿ ಅಭಿಮಾನಿಗಳ ದಂಡು
ಯಶ್ ಹುಟ್ಟುಹಬ್ಬಕ್ಕೆ ಮನೆಯಲ್ಲಿರೋದಿಲ್ಲ ಎಂದು ತಿಳಿಯುತ್ತಿದ್ದಂತೆ ರಾಕಿಂಗ್ ಸ್ಟಾರ್ ಯಶ್ ಮನೆ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ. ಅವ್ರು ಅಣ್ಣನನ್ನು ನೋಡ್ಬೇಕು ಅವ್ರಿಗೆ ಬರ್ತಡೇ ವಿಶ್ ಮಾಡ್ಬೇಕು ಎಂದು ಫ್ಯಾನ್ಸ್ ಪಟ್ಟು ಹಿಡಿದಿದ್ದರು. ಸಾಲುಗಟ್ಟಿ ನಿಂತಿದ್ದರು.
ಫ್ಯಾನ್ಸ್ ಭೇಟಿಯಾದ ಯಶ್
ನೆಚ್ಚಿನ ನಟನ ಹುಟ್ಟುಹಬ್ಬ ಅಂದ್ರೆ ಸಾಕು ಅಭಿಮಾನಿಗಳಿಗೆ ಅದು ದೊಡ್ಡಹಬ್ಬ, ಮದ್ಯರಾತ್ರಿಯೇ ಮನೆ ಬಳಿ ಕೇಕ್ ತಂದು ಕಟ್ ಮಾಡಿಸಿ ಸಂಭ್ರಮಿಸುತ್ತಾರೆ. ಕಟೌಟ್ ಗಳಿಗೆ ಹಾಲಿನ ಅಭಿಷೇಕ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಖುಷಿಪಡ್ತಾರೆ. ಈ ಬಾರಿ ಯಶ್ ಅಭಿಮಾನಿಗಳಿಗೆ ಕೊಂಚ ನಿರಾಸೆ ಉಂಟಾಗಿದೆ. ಆದ್ರೆ ಅಭಿಮಾನಿಗಳಿಗೆ ನಿರಾಸೆಯುಂಟು ಮಾಡಲು ಇಷ್ಟವಿಲ್ಲದೆ ಯಶ್ ಇಂದೇ ನಮ್ಮ ಮನೆ ಬಳಿ ಅಭಿಮಾನಿಗಳನ್ನು ಭೇಟಿಯಾಗಿದ್ದಾರೆ.
ಫ್ಯಾನ್ಸ್ ಭೇಟಿ ಬಳಿಕ ದುಬೈಗೆ ಯಶ್
ಮನೆ ಮುಂದೆ ಸಾಲುಗಟ್ಟಿ ನಿಂತಿದ್ದ ಅಭಿಮಾನಿಗಳನ್ನು ಭೇಟಿ ಮಾಡಿದ ಬಳಿಕ ಯಶ್, ಪತ್ನಿ ರಾಧಿಕಾ ಪಂಡಿತ್ ಹಾಗೂ ಇಬ್ಬರು ಮಕ್ಕಳ ಜೊತೆ ದುಬೈಗೆ ತೆರಳಿದ್ದಾರೆ ಎಂದು ಹೇಳಲಾಗ್ತಿದೆ. ಕೊನೆಗೂ ಅಭಿಮಾನಿಗಳಿಗೆ ನಿರಾಸೆ ಮಾಡಿದೆ ಭೇಟಿ ಮಾಡಿದ್ದಕ್ಕೆ ಫ್ಯಾನ್ಸ್ ಕೂಡ ಫುಲ್ ಖುಷ್ ಆಗಿದ್ದಾರೆ.
ಅಭಿಮಾನಿಗಳಿಗೆ ಪತ್ರ ಬರೆದ ಯಶ್!
'ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ, ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವೆಲ್ಲಾ ಕಾಯುತ್ತಿದ್ದೀರಾ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದೆ. ಇತ್ತೀಚಿನ ವರ್ಷಗಳಲ್ಲಿ, ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಬಿಸೋಕೆ ಶುರು ಮಾಡಿದ್ದೀರಿ' ಎಂದು ಯಶ್ ಬರೆದುಕೊಂಡಿದ್ದಾರೆ.
View this post on Instagram
'ವಿಭಿನ್ನವಾಗಿರೋದನ್ನು ನಿಮ್ಮ ಮುಂದೆ ತರುತ್ತೇನೆ'
ನಿಮಗಾಗಿ ವಿಭಿನ್ನವಾಗಿರೋದೆನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟಹಬ್ಬದ ನಿಮ್ಮ ಉಡುಗೊರೆ. ಈ ವರ್ಷದ ಹುಟ್ಟುಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ. ಇನ್ನಷ್ಟು ಸಮಯ ಕೊಡಿ, ವಿಭಿನ್ನವಾಗಿರೋದನ್ನ ನಿಮ್ಮ ಮುಂದೆ ತರಲು ಶ್ರದ್ದೆಯಿಂದ ಕೆಲಸ ಮಾಡುತ್ತೇನೆ ಎಂದು ರಾಕಿ ಭಾಯ್ ಪತ್ರ ಬರೆದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ