ಭಾರತದ ಚಿತ್ರರಂಗದಲ್ಲಿ ಕೆಜಿಎಫ್2 ಟೀಸರ್ ಹೊಸ ದಾಖಲೆ ನಿರ್ಮಿಸಿದೆ. ಬಿಡುಗಡೆಗೊಂಡ 24 ಗಂಟೆಗಳಲ್ಲಿ ಈ ಟೀಸರ್ 78 ಮಿಲಿಯನ್ಗೂ ಹೆಚ್ಚು ವೀಕ್ಷಣೆ ಪಡೆದಿದೆ. ಈ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಅಧಿಕ ವೀಕ್ಷಣೆ ಪಡೆದ ಸಿನಿಮಾ ಟೀಸರ್ ಇದಾಗಿದೆ. ತಮ್ಮ ಚಿತ್ರದ ಟೀಸರ್ ಈ ಮಟ್ಟಿನ ದಾಖಲೆಗೆ ರಾಕಿಂಗ್ ಸ್ಟಾರ್ ಯಶ್ ಸಂತಸ ವ್ಯಕ್ತಪಡಿಸಿದ್ದಾರೆ. ನಿಮ್ಮ ಪ್ರೀತಿ ಈ ಪ್ರೀತಿಗೆ ಅಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ. ಈ ಕುರಿತು ನನ್ನ ಈ ಹುಟ್ಟು ಹಬ್ಬದಂದು ಪ್ರಕಟವಾದ ಈ ಪ್ರೀತಿಗೆ ಎಲ್ಲೆ ಇಲ್ಲ. ಧನ್ಯವಾದಗಳು ಎಂದಿದ್ದಾರೆ. ಇನ್ನು ನಟ ಯಶ್ ಹುಟ್ಟುಹಬ್ಬಕ್ಕೆ ಶುಭಾಶಯಗಳ ಮಹಾಪೂರವನ್ನೇ ಅಭಿಮಾನಿಗಳು ಅರ್ಪಿಸಿದ್ದಾರೆ. ಅಷ್ಟೇ ಅಲ್ಲದೇ, ಬಾಲಿವುಡ್ನ ಹೃತಿಕ್ ರೋಷನ್ ಸೇರಿದಂತೆ ಅನೇಕ ಚಿತ್ರರಂಗದ ನಟ ನಟಿಯರು ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಕೆಜಿಎಫ್ ಮೂಲಕ ಯಶ್ ಕೀರ್ತಿ ಸ್ಯಾಂಡಲ್ವುಡ್ ದಾಟಿ ಹೊರಹೊಮ್ಮಿರುವುದಕ್ಕೆ ಇದು ಸಾಕ್ಷಿಯಾಗಿದೆ.
Your love for me has manifested as the best bday for me today. Thank you.. love you all ❤️
Posted by Yash on Friday, 8 January 2021
ಟೀಸರ್ಗೆ ಎಲ್ಲೆಡೆ ಮೆಚ್ಚುಗೆ ಹರಿದು ಬರುತ್ತಿದೆ. ನಿರೀಕ್ಷಿಗಿಂತ ಹೆಚ್ಚಾಗಿ ಟೀಸರ್ ಮೂಡಿ ಬಂದಿದೆ. ಈ ಮೂಲಕ ಚಿತ್ರದ ಕುತೂಹಲ ಇನ್ನಷ್ಟು ಹೆಚ್ಚಾಗಿದೆ. ಅಲ್ಲದೇ ಚಿತ್ರವನ್ನು ಬೇಗ ಬಿಡುಗಡೆಗೊಳಿಸಿ ಎಂದು ಕೂಡ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ