Aniruddha Jatkar: ಮೋದಿಗೆ 'ಜೊತೆ ಜೊತೆಯಲಿ' ನಟ ಅನಿರುದ್ಧ್ ಪತ್ರ! ಲೆಟರ್ನಲ್ಲೇನಿದೆ?
ಪ್ರಧಾನಿಗೆ ಪತ್ರದ ಮೂಲಕ ಅನಿರುದ್ಧ್ ಕೇಂದ್ರ ಸರ್ಕಾರ ರಾಜ್ಯಕ್ಕೆ ಕಿವಿ ಹಿಂಡುವ ಕೆಲಸ ಮಾಡಬೇಕು. ಇಲ್ಲಿನ ಜನಪ್ರತಿನಿಧಿಗಳು ಇಚ್ಛಾ ಶಕ್ತಿ ಪ್ರದರ್ಶಿಸಿದರೆ ಸ್ವಚ್ಛ ನಗರಿ ಬೆಂಗಳೂರು ಆಗಬಹುದು
ನಟ ಅನಿರುದ್ಧ್ (Aniruddha) ಸದ್ಯ ಜೊತೆ ಜೊತೆಯಲಿ (Jothe Jotheyali) ಧಾರಾವಾಹಿಯ ಮೂಲಕ ಮನೆಮಾತಾಗಿದ್ದಾರೆ. ಆದರೆ ಸಿನಿಮಾ ಸೀರಿಯಲ್ ಬಿಟ್ಟು ಆಗಾಗ ತಮ್ಮ ಇನ್ಸ್ಟಾಗ್ರಾಮ್ ಫೇಸ್ಬುಕ್, ಟ್ವಿಟ್ಟರ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳಲ್ಲಿ ಅವರು ಸಾಮಾಜಿಕ ಕಳಕಳಿಯ ವಿಚಾರಗಳನ್ನೂ ಹಂಚಿಕೊಳ್ಳಿತ್ತಾ ನಟ ಸುದ್ದಿ ಆಗುತ್ತಾ ಇರುತ್ತಾರೆ. ಐಟಿ ಹಬ್, ಗ್ರೀನ್ ಸಿಟಿ (Green City) ಹೀಗೆ ಇಡೀ ವಿಶ್ವದಲ್ಲಿಯೇ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಕೂಪವಾಗುತ್ತಿದೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು. ಕೇಂದ್ರ ಸರ್ಕಾರ (Central Government) ರಾಜ್ಯಕ್ಕೆ ಈ ಬಗ್ಗೆ ಸೂಕ್ತ ಕಾರ್ಯ ನಿರ್ವಹಿಸಲು ಕೂಡಲೇ ಆದೇಶ ಮಾಡಬೇಕು ಎಂದು ಪ್ರಧಾನಿಗೆ ಪತ್ರದ ಮೂಲಕ ಅನಿರುದ್ಧ್ ತಿಳಿಸಿದ್ದಾರೆ.
ಪ್ರಧಾನಿ ಮುಂದೆ ಸಮಸ್ಯೆಗಳ ಪಟ್ಟಿ ಇಟ್ಟಿದ್ದಾರೆ!
ಅವರು 2020 ನೇ ನವೆಂಬರ್ 7 ರಂದು ಆರಂಭಿಸಿದ 'ಸ್ವಚ್ಛತೆಯಲ್ಲಿ ನಾನು ಸಹಭಾಗಿ' ಅಭಿಯಾನದಡಿ ಜನರು ಅನಿರುದ್ಧ ಅವರಿಗೆ ಹೇಳಿಕೊಂಡ ಸಮಸ್ಯೆಗಳನ್ನು ಪ್ರಧಾನಿ ಮುಂದೆ ಇಟ್ಟಿದ್ದಾರೆ. ಬೆಂಗಳೂರಿನ ಬಗ್ಗೆ ತಾವು ಹಾಕುವ ಪ್ರತಿ ಸಮಸ್ಯೆಗೆ ಮರುದಿನವೇ ಉತ್ತರ ದೊರಕಿ ಬಿಬಿಎಂಪಿ ಅವರು ಅದನ್ನು ವ್ಯವಸ್ಥಿತವಾಗಿ ಸ್ವಚ್ಛಗೊಳಿಸುತ್ತಾರೆ ಎಂದು ಪೋಸ್ಟ್ ನಲ್ಲಿ ಹೇಳಿಕೊಂಡಿದ್ದಾರೆ. ಇನ್ನು ಅನಿರುದ್ಧ ಅವರು ತಮ್ಮ ಪತ್ರದಲ್ಲಿ ಅದೇ ರೀತಿ ಅವರು 'ಸುರಕ್ಷತೆಗಾಗಿ ನಾನು ಸಹಭಾಗಿ' ಎಂಬುವ ಸಂದೇಶದ ಅಡಿ ಬೆಂಗಳೂರು ನಗರದಲ್ಲಿ ಅವ್ಯವಸ್ಥೆ ಗೊಂಡಿರುವ ಪ್ರಮುಖ ಸಮಸ್ಯೆಗಳ ಪಟ್ಟಿಯನ್ನು ಮಾಡಿ ಕಳುಹಿಸಿದ್ದಾರೆ. ಘನ ತ್ಯಾಜ್ಯ ನಿರ್ವಹಣೆ ವಿಫಲ, ಹೂಳು ತುಂಬಿದ ಕೆರೆಗಳು, ಮರಗಳಲ್ಲಿ ವಿದ್ಯುತ್ ತಂತಿಗಳು, ಎಲ್ಲೆಂದರಲ್ಲಿ ಪೇಪರ್ ಅಂಟಿಸುವುದು, ಹಾಳಾದ ಫುಟ್ ಪಾತ್. ಹೀಗೆ ಹತ್ತು ಹಲವು ಸಮಸ್ಯೆಗಳನ್ನು ಪತ್ರದಲ್ಲಿ ಬರೆದಿದ್ದಾರೆ.
ಐಟಿ ಹಬ್, ಗ್ರೀನ್ ಸಿಟಿ ಹೀಗೆ ಇಡೀ ವಿಶ್ವದಲ್ಲಿಯೇ ಗಮನ ಸೆಳೆದ ಬೆಂಗಳೂರು ಇತ್ತೀಚೆಗೆ ಅವ್ಯವಸ್ಥೆಗಳ ಗೂಡಾಗುತ್ತಿದೆ. 'ಬ್ರ್ಯಾಂಡ್ ಬೆಂಗಳೂರು' ಉಳಿಸುವ ಬಗ್ಗೆ ಪತ್ರದಲ್ಲಿ ನಮೂದಿಸಿದ್ದಾರೆ. ಬೆಂಗಳೂರಿನ ಸಮಸ್ಯೆಯನ್ನು ಆಲಿಸಲು ಪ್ರತ್ಯೇಕವಾಗಿರುವ ಇಲಾಖೆಯನ್ನು ರಚಿಸಬೇಕು ಎಂದು ಪತ್ರದಲ್ಲಿ ನಮೂದಿಸಿದ್ದಾರೆ. 'ಬ್ರ್ಯಾಂಡ್ ಬೆಂಗಳೂರಿನ' ಹೆಸರನ್ನು ಉಳಿಸಿ ಎಂದು ಬರೆದಿದ್ದಾರೆ. ಪತ್ರ ಬರೆದಿರುವ ಬಗ್ಗೆ ಅನಿರುದ್ಧ ತಮ್ಮ ಸಾಮಾಜಿಕ ಜಾಲತಣದಲ್ಲಿ ಹಂಚಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯಕ್ಕೆ ಕಿವಿ ಹಿಂಡುವ ಕೆಲಸ ಮಾಡಬೇಕು
ಇಲ್ಲಿನ ಜನಪ್ರತಿನಿಧಿಗಳು ಇಚ್ಛಾ ಶಕ್ತಿ ಪ್ರದರ್ಶಿಸಿದರೆ ಸ್ವಚ್ಛ ನಗರಿ ಬೆಂಗಳೂರು ಆಗಬಹುದು ಎಂದು ಪ್ರಧಾನಿಗೆ ಪತ್ರದ ಮೂಲಕ ಅನಿರುದ್ಧ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇರುವ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ರಮ ಕೈಗೊಳ್ಳಲು ಸ್ಥಳಿಯ ಸರ್ಕಾರ ವಿಫಲವಾಗಿದೆ ಎಂದು ಬರೆದಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ಸೂಕ್ತ ಕ್ರಮವನ್ನು ಕೈಗೊಳ್ಳಬೇಕು ಎಂದು ಬರೆದಿದ್ದಾರೆ
ಕಳೆದ ವಾರವಷ್ಟೇ ಬ್ರ್ಯಾಂಡ್ ಬೆಂಗಳೂರು ಕಡೆ ಸರ್ಕಾರ ಗಮನಹರಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ಪತ್ರ ಬರೆದಿದ್ದರು.
ಬ್ರ್ಯಾಂಡ್ ಬೆಂಗಳೂರು ಬಗ್ಗೆ ಎಸ್.ಎಂ ಕೃಷ್ಣ ಮಾತು!
ವಿಶ್ವದಲ್ಲಿನ ವೇಗದ ಬೆಳವಣಿಗೆಗಳ ನಗರಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ನಗರದಲ್ಲಿನ ಮಳೆ ಅನಾಹುತಗಳು ಆತಂಕ ಹುಟ್ಟಿಸಿದೆ. ಇದು 'ಬ್ರ್ಯಾಂಡ್ ಬೆಂಗಳೂರು' ಹೆಸರಿಗೆ ಆತಂಕ ಸೃಷ್ಟಿಸಿದ್ದು, ಭವಿಷ್ಯತ್ತಿನಲ್ಲಿ ಇದರಿಂದ ಕೈಗಾರಿಕೆಗಳ ಸ್ಥಾಪನೆ ಮತ್ತು ರಾಜ್ಯಕ್ಕೆ ಬಂಡವಾಳ ಹೂಡುವ ಹೂಡಿಕೆದಾರರಿಗೆ ತಪ್ಪು ಸಂದೇಶ ರವಾನೆಯಾಗಲಿದೆ. ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು ಇದರಿಂದ ಹಲವು ಅವಾಂತರಗಳು ಘಟಿಸಿ ಜನಜೀವನಕ್ಕೆ ತೀವ್ರ ತೊಂದರೆಯನ್ನು ಉಂಟುಮಾಡಿದೆ. ಅದರಲ್ಲೂ ಅದರಿಂದ ಇಲ್ಲಿ ಪ್ರತಿಷ್ಟಾಪನೆಗೊಳ್ಳಬಹುದಾದ ಕೈಗಾರಿಕಾ ವಸಹಾತುಗಳು ಬೇರೆ ರಾಜ್ಯಗಳ ಪಾಲಗಿ ನಮ್ಮ ರಾಜ್ಯದ ಅಭಿವೃದ್ಧಿಗೆ ತೊಡಕಾಗಲಿದೆ ಎಂದು ಎಸ್.ಎಂ. ಕೃಷ್ಣ ಅವರು ಪತ್ರದಲ್ಲಿ ಕಳವಳವನ್ನು ವ್ಯಕ್ತಪಡಿಸಿದ್ದರು.
Published by:Swathi Nayak
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ