• ಹೋಂ
  • »
  • ನ್ಯೂಸ್
  • »
  • Explained
  • »
  • Congress Guarantee: ಕಾಂಗ್ರೆಸ್ ಭರವಸೆ ಈಡೇರೋದು ‘ಗ್ಯಾರಂಟಿ’ನಾ? ಕೊಟ್ಟ ಮಾತು ಉಳಿಸಿಕೊಳ್ಳಲು ಬೇಕು 62 ಸಾವಿರ ಕೋಟಿ!

Congress Guarantee: ಕಾಂಗ್ರೆಸ್ ಭರವಸೆ ಈಡೇರೋದು ‘ಗ್ಯಾರಂಟಿ’ನಾ? ಕೊಟ್ಟ ಮಾತು ಉಳಿಸಿಕೊಳ್ಳಲು ಬೇಕು 62 ಸಾವಿರ ಕೋಟಿ!

ಕಾಂಗ್ರೆಸ್‌ನ 5 ಗ್ಯಾರಂಟಿ

ಕಾಂಗ್ರೆಸ್‌ನ 5 ಗ್ಯಾರಂಟಿ

ಕರ್ನಾಟಕದ ಜನರೂ ‘ಗ್ಯಾರಂಟಿ’ ನಿರೀಕ್ಷೆಯಲ್ಲಿದ್ದಾರೆ. ಆದರೆ ಕಾಂಗ್ರೆಸ್ ಗ್ಯಾರಂಟಿಗಳನ್ನು ಈಡೇರಿಸೋದು ಅಷ್ಟು ಸುಲಭವೇ? ಭರವಸೆ ಈಡೇರಿಸೋಕೆ ಎಷ್ಟು ಹಣ ಬೇಕಾಗಬಹುದು? ಒಂದು ವೇಳೆ ಕೊಟ್ಟ ಮಾತು ಈಡೇರಿಸದಿದ್ದರೆ ಏನಾಗಬಹುದು?

  • News18 Kannada
  • 4-MIN READ
  • Last Updated :
  • Karnataka, India
  • Share this:

ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಅಭೂತಪೂರ್ವ ಗೆಲುವು ಸಾಧಿಸಿದೆ. ಬರೋಬ್ಬರಿ 135 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ (BJP), ಜೆಡಿಎಸ್ (JDS) ಹಾಗೂ ಇತರರಿಗೂ ಬಿಸಿ ಮುಟ್ಟಿಸಿದೆ. ಈ ಅದ್ಭುತ ಗೆಲುವಿಗೆ ಕಾಂಗ್ರೆಸ್ ಘೋಷಿಸಿರುವ 5 ಗ್ಯಾರಂಟಿ (5 guarantee) ಯೋಜನೆಗಳ ಪಾಲೂ ದೊಡ್ಡದಿದೆ. ಚುನಾವಣೆಗೂ ಮುನ್ನವೇ ರಾಜ್ಯದ ಜನಸಾಮಾನ್ಯರು, ಗೃಹಿಣಿಯರು, ನಿರುದ್ಯೋಗಿಗಳು, ರೈತರು ಸೇರಿದಂತೆ ಹಲವು ವರ್ಗಗಳವನ್ನು ಗುರುಯಾಗಿಸಿಕೊಂಡು 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ಮೊದಲ ಪತ್ರಿಕಾಗೋಷ್ಠಿಯಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge), ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಜನರಿಗೆ ಕೊಟ್ಟ ಗ್ಯಾರಂಟಿ ಭರವಸೆಗಳನ್ನು ಈಡೇರಿಸೋದಾಗಿ ಹೇಳಿದ್ದರು. ಕರ್ನಾಟಕದ (Karnataka) ಜನರೂ ಇದೀಗ ಅದೇ ನಿರೀಕ್ಷೆಯಲ್ಲಿದ್ದಾರೆ. ಆದರೆ ಕಾಂಗ್ರೆಸ್ ಗ್ಯಾರಂಟಿಗಳನ್ನು ಈಡೇರಿಸೋದು ಅಷ್ಟು ಸುಲಭವೇ? ಭರವಸೆ ಈಡೇರಿಸೋಕೆ ಎಷ್ಟು ಹಣ ಬೇಕಾಗಬಹುದು? ಒಂದು ವೇಳೆ ಗ್ಯಾರಂಟಿ ಈಡೇರದಿದ್ದರೆ ಏನಾಗಬಹುದು? ಇಲ್ಲಿದೆ ಒಂದಷ್ಟು ಮಾಹಿತಿ…  


ಕಾಂಗ್ರೆಸ್‌ನ 5 ಗ್ಯಾರಂಟಿಗಳು


ಈ ಬಾರಿಯ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಜನರ ಮುಂದೆ ಭರ್ಜರಿ 5 ಗ್ಯಾರಂಟಿಗಳನ್ನು ಇಟ್ಟಿತ್ತು.


  1. ಗೃಹಜ್ಯೋತಿ ಅಂದರೆ ಎಲ್ಲಾ ಮನೆಗಳಿಗೂ 200 ಯೂನಿಟ್‌ ಉಚಿತ ಕರೆಂಟ್

  2. ಗೃಹಲಕ್ಷ್ಮಿ ಅಂದರೆ ಪ್ರತಿ ಮನೆ ಯಜಮಾನಿಗೂ ಪ್ರತಿ ತಿಂಗಳು ₹2000

  3. ಅನ್ನಭಾಗ್ಯ ಅಂದರೆ ಬಿಪಿಎಲ್‌ ಕುಟುಂಬಗಳಿಗೆ 10 ಕೆಜಿ ಆಹಾರ ಧಾನ್ಯ

  4. ಯುವನಿಧಿ ಅಂದರೆ ಎರಡು ವರ್ಷಗಳ ಕಾಲಕ್ಕೆ ನಿರುದ್ಯೋಗಿ ಭತ್ಯೆ - ಪದವೀಧರರಿಗೆ ತಿಂಗಳಿಗೆ ₹3000 ಮತ್ತು ಡಿಪ್ಲೋಮಾ ಮಾಡಿದವರಿಗೆ ತಿಂಗಳಿಗೆ ₹1500

  5. ಸಖಿ ಅಂದರೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಸಾಮಾನ್ಯ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೂ ಉಚಿತ ಪ್ರಯಾಣ



ಕಾಂಗ್ರೆಸ್‌ನ ಇತರೇ ಭರವಸೆಗಳು


ಅಂಗನವಾಡಿ ಕಾರ್ಯಕರ್ತೆಯರ ವೇತನ 11,500 ರೂ ದಿಂದ 15,000 ರೂಗೆ ಹೆಚ್ಚಳ. ಮಿನಿ ಅಂಗನವಾಡಿ ಕಾರ್ಯಕರ್ತೆಯರ ವೇತನ 10 ಸಾವಿರ ರೂಪಾಯಿಗೆ ಏರಿಕೆ ಮತ್ತು ವಿಶ್ರಾಂತಿ ವೇತನ 2 ಲಕ್ಷ ರೂ ನೀಡುವುದು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ 8,000 ರೂಗೆ ಹೆಚ್ಚಳ. ಬಿಸಿಯೂಟದ ಅಡುಗೆಯವರಿಗೆ ಮಾಸಿಕ ಗೌರವಧನ 6,000 ರೂಗೆ ಏರಿಕೆ. ಪೊಲೀಸ್ ಇಲಾಖೆಯಲ್ಲಿ ಶೇ 33ರಷ್ಟು ಮಹಿಳೆಯರ ನೇಮಕಾತಿ. ಶೇ 1ರಷ್ಟು ತೃತೀಯ ಲಿಂಗಿಗಳಿಗೆ ಅವಕಾಶ. ರಾತ್ರಿ ಪಾಳಿ ಸಿಬ್ಬಂದಿಗೆ 5 ಸಾವಿರ ರೂ ವಿಶೇಷ ಮಾಸಿಕ ಭತ್ಯೆ ಮತ್ತು ಎಲ್ಲ ಪೊಲೀಸರಿಗೆ ವರ್ಷಕ್ಕೆ ಒಂದು ತಿಂಗಳ ಹೆಚ್ಚುವರಿ ವೇತನ ಇತ್ಯಾದಿ ಭರವಸೆ ನೀಡಿತ್ತು.


ಇದನ್ನೂ ಓದಿ: Congress ಗೆಲುವಿಗೆ ಕಾರಣ ಸಿದ್ದು-ಡಿಕೆಶಿಯೂ ಅಲ್ಲ, ರಾಹುಲ್-ಖರ್ಗೆಯೂ ಅಲ್ಲ! ರಣತಂತ್ರದ ಹಿಂದಿರೋದು ಇವರೇ!


ಮೊದಲ ಸಂಪುಟದಲ್ಲೇ ಗ್ಯಾರಂಟಿ ಈಡೇರಿಕೆ


ಇನ್ನು ಭರ್ಜರಿ ಮತಗಳಿಸಿರುವ ಕಾಂಗ್ರೆಸ್ ತಾನು ಪ್ರಣಾಳಿಕೆಯಲ್ಲಿ ಘೋಷಿಸಿದ 5 ಗ್ಯಾರಂಟಿಗಳನ್ನು ಈಡೇರಿಸುವ ಭರವಸೆ ನೀಡಿದೆ. ಮೊದಲ ಸಂಪುಟ ಸಭೆಯಲ್ಲೇ ಐದೂ ಗ್ಯಾರಂಟಿಗಳನ್ನು ಈಡೇರಿಸುವುದಾಗಿ ಮಲ್ಲಿಕಾರ್ಜುನ್ ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಭರವಸೆ ನೀಡಿದ್ದಾರೆ.


ಗ್ಯಾರಂಟಿ ಈಡೇರಿಕೆಗೆ ವಾರ್ಷಿಕ 62 ಸಾವಿರ ಕೋಟಿ ರೂಪಾಯಿ ಬೇಕು!


ಅಂದಹಾಗೆ ಈ ‘ಗ್ಯಾರಂಟಿ’ಗಳು ಕರ್ನಾಟಕ ರಾಜ್ಯಕ್ಕೆ ನಷ್ಟವಾಗುವುದು ಖಚಿತ ಅಂತ ಹೇಳಲಾಗುತ್ತಿದೆ. ಎಕನಾಮಿಕ್ ಟೈಮ್ಸ್ ಪ್ರಕಾರ, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಭರವಸೆ ಈಡೇರಿಕೆಗಾಗಿ ವರ್ಷಕ್ಕೆ 62,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಬೇಕಾಗುತ್ತದೆ.


ರಾಜ್ಯ ಬಜೆಟ್‌ನಲ್ಲಿ ವಿತ್ತೀಯ ಕೊರತೆ


ಉಚಿತಗಳ ವೆಚ್ಚವು ಹಿಂದಿನ ಹಣಕಾಸು ವರ್ಷದಲ್ಲಿ ವಿತ್ತೀಯ ಕೊರತೆಯ ಸಮೀಪದಲ್ಲಿದೆ. ಕರ್ನಾಟಕದ ಬಜೆಟ್ 2023-24 ರಲ್ಲಿ, ವಿತ್ತೀಯ ಕೊರತೆಯು ರೂ.60,581 ಕೋಟಿ ಎಂದು ನಿರೀಕ್ಷಿಸಲಾಗಿತ್ತು, ಇದು ಒಟ್ಟು ರಾಜ್ಯದ ಆಂತರಿಕ ಉತ್ಪನ್ನದ (GSDP) 2.60% ಆಗಿದೆ. ಇದನ್ನು ಪರಿಗಣಿಸಿದರೆ, ಉಚಿತಗಳಿಗೆ ತಗಲುವ ವೆಚ್ಚವು ಹೆಚ್ಚುವರಿ ಖರ್ಚಿಗೆ ಕಾರಣವಾಗುತ್ತದೆ.


ಬಜೆಟ್‌ ಅಂದಾಜಿಗಿಂತ ಹೆಚ್ಚು


ದೊಡ್ಡ ರಾಜ್ಯಗಳ ಪೈಕಿ ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕವು ಅತ್ಯಧಿಕ ಬೆಳವಣಿಗೆ ದರವನ್ನು ದಾಖಲಿಸಿದೆ. 2022-23ಕ್ಕೆ, ಆದಾಯ ಸಂಗ್ರಹಣೆಯ ಗುರಿಯನ್ನು 72,000 ಕೋಟಿ ರೂಪಾಯಿಗೆ ನಿಗದಿಪಡಿಸಲಾಗಿತ್ತು. ಇದರ ವಿರುದ್ಧ (ಜಿಎಸ್‌ಟಿ ಪರಿಹಾರವನ್ನು ಹೊರತುಪಡಿಸಿ) ರೂ.83,010 ಕೋಟಿಯ ಆದಾಯ ಸಂಗ್ರಹವನ್ನು ಜನವರಿ ಅಂತ್ಯದ ವೇಳೆಗೆ ಸಾಧಿಸಲಾಗಿದೆ. ಇದು ಬಜೆಟ್ ಅಂದಾಜುಗಿಂತ 15% ರಷ್ಟು ಹೆಚ್ಚು ಎನ್ನಲಾಗಿದೆ.


ಇದನ್ನೂ ಓದಿ: BJP Defeat: ಬಿಜೆಪಿ ಹೀನಾಯ ಸೋಲಿಗೆ ಕಾರಣಗಳೇನು? ಅತಿ ವಿಶ್ವಾಸವೋ, 40 ಪರ್ಸೆಂಟ್ ಆರೋಪವೋ?


ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ!


ಇನ್ನು ಈ 5 ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ ಅಂತ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಮೊದಲ ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ದರಾಗಿ ಇದ್ದು ಮೊದಲ ಕ್ಯಾಬಿನೆಟ್‌ನಲ್ಲಿ ಜಾರಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಆಯಾ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಹೀಗಾಗಿ ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದಿದ್ದಾರೆ.

top videos
    First published: