ನವದೆಹಲಿ(ಜೂ.07): ಮುಂಬರುವ ಲೋಕಸಭೆ ಚುನಾವಣೆಗೆ (Lok Sabha Elections) ಸಂಬಂಧಿಸಿದಂತೆ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವೆ ಚೆಕ್‌ಮೇಟ್ ಆಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿಯನ್ನು (PM Narendra Modi) ಮೂರನೇ ಬಾರಿಗೆ ಅಧಿಕಾರಕ್ಕೆ ಬರದಂತೆ ತಡೆಯಲು ಒಂದೆಡೆ ವಿಪಕ್ಷಗಳ ಒಗ್ಗಟ್ಟಿನ ಕಸರತ್ತು ನಡೆಯುತ್ತಿದ್ದರೆ ಮತ್ತೊಂದೆಡೆ ಬಿಜೆಪಿ (BJP) ತನ್ನ ಮೈತ್ರಿಯ ಕುಟುಂಬವನ್ನು ಹೆಚ್ಚಿಸಿಕೊಳ್ಳುವಲ್ಲಿ ನಿರತವಾಗಿದೆ. ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಜತೆಗಿನ ದೋಸ್ತಿ ಒಪ್ಪಂದದ ನಂತರ 2024ರ ಚುನಾವಣೆಯಲ್ಲಿ ಎಚ್‌ಡಿ ದೇವೇಗೌಡರ (HD Devegowda) ಪಕ್ಷ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಳ್ಳಬಹುದು.
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ?
ಮೂಲಗಳನ್ನು ನಂಬುವುದಾದರೆ, 2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ ಕಸರತ್ತು ಆರಂಭವಾಗಿದೆ. ಬಿಜೆಪಿಯಿಂದ ನಾಲ್ಕು ಲೋಕಸಭಾ ಸ್ಥಾನಗಳಿಗೆ ಜೆಡಿಎಸ್ ಬೇಡಿಕೆ ಇಟ್ಟಿದೆ. ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಬಿಜೆಪಿ ಶೀಘ್ರದಲ್ಲೇ ನಿರ್ಧರಿಸಲಿದೆ ಎಂದು ನಂಬಲಾಗಿದೆ.
ಇದನ್ನೂ ಓದಿ: Rahul Gandhi: ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿಗೆ ಸಿಕ್ತಾ ಪೊಲಿಟಿಕಲ್ ಪವರ್?
ಕರ್ನಾಟಕ ರಾಜಕೀಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದ ರೀತಿಯಿಂದಾಗಿ ಬಿಜೆಪಿ ಮತ್ತು ಜೆಡಿಎಸ್ ಹತ್ತಿರವಾಗುತ್ತಿವೆ. ಈಗ ಇಬ್ಬರೂ ಒಟ್ಟಾಗಿ ಚುನಾವಣೆ ಎದುರಿಸಲು ತಯಾರಿ ನಡೆಸಿದ್ದಾರೆ. ಜೆಡಿಎಸ್ ಸಂಸ್ಥಾಪಕ ಎಚ್.ಡಿ.ದೇವೇಗೌಡರು ಕೂಡ ಮಂಗಳವಾರ ಈ ದಿಸೆಯಲ್ಲಿ ಇಂಗಿತ ವ್ಯಕ್ತಪಡಿಸಿದ್ದು, ಬಳಿಕ ಬಿಜೆಪಿ ಜತೆಗಿನ ಮೈತ್ರಿ ಚರ್ಚೆ ತೀವ್ರಗೊಂಡಿದೆ. ಆದರೆ, ಬಿಜೆಪಿ ಜತೆಗಿನ ಮೈತ್ರಿಯ ವರದಿಗಳನ್ನು ತಳ್ಳಿಹಾಕಿರುವ ಕುಮಾರಸ್ವಾಮಿ, 20 ವರ್ಷಗಳಿಂದ ರಾಷ್ಟ್ರೀಯ ಪಕ್ಷಗಳ ವಿರುದ್ಧ ತಮ್ಮ ಹೋರಾಟವಿದೆ ಎಂದು ಹೇಳಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಣಕ್ಕಿಳಿಯಲಾಗುವುದು ಎಂದು ಹೇಳಿದರು.
ಕರ್ನಾಟಕದ ಚುನಾವಣೆಯಿಂದಾಗಿ ಸಮೀಕರಣಗಳು ಬದಲಾಗಿವೆ
ಕರ್ನಾಟಕದಲ್ಲಿ ಒಟ್ಟು 28 ಲೋಕಸಭಾ ಸ್ಥಾನಗಳಿವೆ ಎಂಬುವುದು ಉಲ್ಲೇಖನೀಯ. 2019 ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳ ಪೈಕಿ ಬಿಜೆಪಿ 25 ಮತ್ತು ಅದರ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಒಂದು ಸ್ಥಾನವನ್ನು ಗೆದ್ದುಕೊಂಡರೆ, ಕಾಂಗ್ರೆಸ್-ಜೆಡಿಎಸ್ ತಲಾ ಒಂದು ಸ್ಥಾನವನ್ನು ಪಡೆದಿವೆ. ಆದರೆ, ಈಗ ವಿಧಾನಸಭಾ ಚುನಾವಣೆಯ ನಂತರ ರಾಜ್ಯದ ರಾಜಕೀಯ ಸಮೀಕರಣಗಳು ಬದಲಾಗಿವೆ.
ಲೋಕಸಭೆಯ ಚುನಾವಣೆಯ ಫಲಿತಾಂಶವನ್ನು ಗಮನಿಸಿದರೆ, ಕರ್ನಾಟಕದ 28 ಸ್ಥಾನಗಳಲ್ಲಿ ಕಾಂಗ್ರೆಸ್ 21 ರಲ್ಲಿ ಮುಂದಿದ್ದರೆ, ಬಿಜೆಪಿ ಕೇವಲ 4 ಸ್ಥಾನಗಳಲ್ಲಿ ಮಾತ್ರ ಮುಂದಿದೆ. ಇದಲ್ಲದೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಸ್ಥಾನಗಳಲ್ಲಿ ಸಮನಾಗಿದ್ದರೆ, ಜೆಡಿಎಸ್ ಒಂದು ಸ್ಥಾನದಲ್ಲಿ ಮುಂದಿದೆ. ಇದೇ ಕಾರಣಕ್ಕೆ ಬಿಜೆಪಿ-ಜೆಡಿಎಸ್ ಎರಡೂ ಮೈತ್ರಿ ಮಾಡಿಕೊಳ್ಳುವ ಮೂಲಕ ಕಾಂಗ್ರೆಸ್‌ಗೆ ಸವಾಲೊಡ್ಡಲು ಮುಂದಾಗಿವೆ.
ದೇವೇಗೌಡರಿಂದಲೂ ಸ್ನೇಹದ ಸೂಚನೆ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸಾಧನೆಯ ಪರಿಶೀಲನಾ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡರು ಬಿಜೆಪಿ ಜೊತೆಗಿನ ದೋಸ್ತಿಯನ್ನು ಸೂಚಿಸಿದ್ದಾರೆ. 2024ರಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಗೆ ಎಚ್.ಡಿ.ದೇವೇಗೌಡರು, ನಾನು ರಾಷ್ಟ್ರ ರಾಜಕಾರಣವನ್ನು ವಿಶ್ಲೇಷಿಸಬಲ್ಲೆ, ಆದರೆ ಅದರಿಂದ ಏನು ಪ್ರಯೋಜನ? ಬಿಜೆಪಿಯೊಂದಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಂಬಂಧ ಹೊಂದಿರದ ಯಾವುದೇ ಪಕ್ಷವು ದೇಶದಲ್ಲಿ ಇಲ್ಲ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್ ಎಂದಿಗೂ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿಲ್ಲ, ಆದರೆ ಡಿಎಂಕೆ ಎನ್‌ಡಿಎ ಭಾಗವಾಗಿಲ್ಲ ಎಂದು ವಾದಿಸಬಹುದು ಎಂದು ದೇವೇಗೌಡ ಹೇಳಿದರು. ಡಿಎಂಕೆ ಮುಖ್ಯಸ್ಥ ಎಂ ಕರುಣಾನಿಧಿ ಆರು ವರ್ಷಗಳ ಕಾಲ ಬಿಜೆಪಿಯನ್ನು ಬೆಂಬಲಿಸಿದ್ದರು ಮತ್ತು ಈಗ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದಿದ್ದಾರೆ. ಇದೇ ವೇಳೆ ಅವರು, 'ಯಾರು ಕೋಮುವಾದಿ, ಯಾರು ಕೋಮುವಾದಿ ಅಲ್ಲ. ನನಗೆ ಗೊತ್ತಿಲ್ಲ. ಈ ಬಗ್ಗೆ ಚರ್ಚೆಗೆ ಬರಲು ಬಯಸುವುದಿಲ್ಲ ಎಂದಿದ್ದಾರೆ. ಸದ್ಯ ಜೆಡಿಎಸ್ ಗಮನ ಬೆಂಗಳೂರು ಮುಂಬರುವ ಮಹಾನಗರ ಪಾಲಿಕೆ ಚುನಾವಣೆ ಮೇಲಿದೆ. ಶೀಗ್ರದಲ್ಲೇ ಈ ಚುನಾವಣೆ ನಡೆಯಲಿದೆ.
ಇದನ್ನೂ ಓದಿ: DCM: ಉಪಮುಖ್ಯಮಂತ್ರಿ ಅನ್ನೋದು ಅಧಿಕಾರವಿಲ್ಲದ ಅಲಂಕಾರಿಕ ಹುದ್ದೆಯೇ? ಡಿಸಿಎಂಗೆ ಯಾವ ಪವರ್ ಇರುತ್ತದೆ?
ನಮ್ಮ ಪಕ್ಷದ ಘಟಕವನ್ನು ದೊಡ್ಡ ಮಟ್ಟದಲ್ಲಿ ಮರುಸಂಘಟಿಸಲು ನಾವು ಯೋಜಿಸುತ್ತಿದ್ದೇವೆ ಎಂದು ಕರ್ನಾಟಕದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಬಾರಿ, ನಮ್ಮ ರಾಷ್ಟ್ರೀಯ ಅಧ್ಯಕ್ಷರ ಸೂಚನೆಯಂತೆ, ನಾವು ಸಮುದಾಯಕ್ಕೆ ಅನುಗುಣವಾಗಿ ಜವಾಬ್ದಾರಿಯನ್ನು ನೀಡಲು ಬಯಸುತ್ತೇವೆ ಮತ್ತು ಜನರಲ್ಲಿ ವಿಶ್ವಾಸ ಮೂಡಿಸಲು ಅವರೊಂದಿಗೆ ಕೆಲಸ ಮಾಡಲು ಬಯಸುತ್ತೇವೆ. ರಾಜ್ಯದ 30 ಜಿಲ್ಲೆಗಳ ಮುಖಂಡರ ಜತೆ ಪಕ್ಷ ಚರ್ಚೆ ಆರಂಭಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ