• ಹೋಂ
  • »
  • ನ್ಯೂಸ್
  • »
  • Explained
  • »
  • BJP Government: ಕಾಶಿ ಯಾತ್ರೆ ಹೋಗುವವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಿಗ್ ಆಫರ್

BJP Government: ಕಾಶಿ ಯಾತ್ರೆ ಹೋಗುವವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ಬಿಗ್ ಆಫರ್

ಕಾಶಿ

ಕಾಶಿ

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಸರ್ಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ.

  • Share this:

ಬೆಂಗಳೂರು, ಜೂ. 27: ಕಾಶಿ ಯಾತ್ರೆ (Kashi Yatra) ಮಾಡುವ ಅಭಿಲಾಷೆ ಯಾವ ಹಿಂದೂಗೆ ಇಷ್ಟ ಇರಲ್ಲ ಹೇಳಿ? ಎಲ್ಲರಿಗೂ ಜೀವನದಲ್ಲಿ ಒಂದು ಬಾರಿಯಾದರೂ ಕಾಶಿ ಯಾತ್ರೆ ಮಾಡುವ ಮನಸ್ಸಿರುತ್ತದೆ. ಆದರೆ ಹಣ ಹೊಂದಿಸಲಾಗದೆ ಯಾತ್ರೆ ಮಾಡುವುದರಿಂದ ಹಿಂದೆ ಸರಿಯುವವರೂ ಬಹಳಷ್ಟು ಜನರು. ಅಂಥವರಿಗೆ ಇದೀಗ ರಾಜ್ಯ ಬಿಜೆಪಿ ಸರ್ಕಾರ (BJP Government) ಸಂತಸದ ಸುದ್ದಿ ಕೊಟ್ಟಿದೆ. ಇನ್ಮುಂದೆ ಹಣವಿಲ್ಲ ಎಂದು ಕಾಶಿ ಯಾತ್ರೆಯಿಂದ ಹಿಂದೆ ಸರಿಯುವ ಅಗತ್ಯವಿಲ್ಲ. ಯಾಕೆಂದರೆ ಕಾಶಿಗೆ ಹೋಗಿ ಬರಲು ರಾಜ್ಯ ಸರ್ಕಾರ ಧನ ಸಹಾಯ ಮಾಡಲಿದೆ. ಈ ಬಗ್ಗೆ ಅಧಿಕೃತವಾಗಿ ಮುಜರಾಯಿ ಇಲಾಖೆ (Mujarai Department) ಇವತ್ತು ಆದೇಶ ಮಾಡಿದ್ದು, ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಅವರು ಹೊರಡಿಸಿರುವ ಆದೇಶದಲ್ಲೇನಿದೆ? ನೀವು ಕಾಶಿ ಯಾತ್ರೆ ಮಾಡಲು ಸರ್ಕಾರದ ಆರ್ಥಿಕ ಸಹಾಯ (Financial Assistance) ಪಡೆಯಲು ಮಾಡಬೇಕಾಗಿದ್ದು ಏನು? ಮುಂದಿದೆ ಸಂಪೂರ್ಣ ಮಾಹಿತಿ.


ಕಾಶಿ ಯಾತ್ರೆಗೆ ಸರ್ಕಾರದ ಸಹಾಯಧನ ಯಾಕೆ?


‘ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆ ಕಾಶಿ ಕಾರೀಡಾರ್​ಗೆ ರಾಜ್ಯದ ಜನರು ಭೇಟಿ ನೀಡುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಈ ಹಿಂದೆಯೆ ಬಜೆಟ್​ನಲ್ಲಿ ಘೋಷಿಸಲಾಗಿದ್ದ ಮಹತ್ವಾಕಾಂಕ್ಷಿ ಕಾಶಿ ಯಾತ್ರೆ ಯೋಜನೆಗೆ ಅಂತಿಮ ಆದೇಶ ಹೊರಡಿಸಿದ್ದೇವೆ’ ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.


‘ಪ್ರಧಾನಿ ನರೇಂದ್ರ ಮೋದಿ ಅವರ ಮುತುವರ್ಜಿಯಿಂದ ಕಾಶಿಯನ್ನು ಅಭಿವೃದ್ದಿಗೊಳಿಸಲಾಗಿದೆ. ಜೊತೆಗೆ ಕಾಶಿ ಯಾತ್ರೆ ಮಾಡುವುದು ಬಹಳಷ್ಟು ಜನರ ಜೀವನದ ಅಭಿಲಾಷೆಯೂ ಆಗಿರುತ್ತದೆ. ಹೀಗಾಗಿ ಈ ಯೋಜನೆ ಜಾರಿಗೆ ತಂದಿದ್ದೇವೆ’ ಎಂದು ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಾರ್ಗಸೂಚಿಗಳನ್ನೂ ಹೊರಡಿಸಿದ್ದಾರೆ.


ಇದನ್ನೂ ಓದಿ: Fly Over: ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಬೆಂಗಳೂರಿನಲ್ಲಿ 4 ಹೊಸ ಫ್ಲೈ ಓವರ್, ಎಲ್ಲೆಲ್ಲಿ ನಿರ್ಮಾಣವಾಗಲಿದೆ ಮೇಲ್ಸೇತುವೆ?


ಈಗಾಗಲೇ ಕಾಶಿ ಯಾತ್ರೆ ಮಾಡಿದವರೂ ಸಹಾಯ ಪಡೆಯಬಹುದು


ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಪೂರ್ವಾನ್ವಯವಾಗುವಂತೆ ಆದೇಶ ಮಾಡಲಾಗಿದೆ. ಹೀಗಾಗಿ ಈಗಾಗಲೇ ಅಂದರೆ 2022ರ ಏಪ್ರಿಲ್‌ 1ರಿಂದ ಇಲ್ಲಿಯವರೆಗೆ ಕಾಶಿ ಯಾತ್ರೆ ಮಾಡಿದವರೂ ಸಹ ಸೂಕ್ತ ದಾಖಲೆಗಳನ್ನು ಸಲ್ಲಿಸುವ ಮೂಲಕ ಸಹಾಯಧನ ಪಡೆಯಬಹುದಾಗಿದೆ. ಆದರೆ ಜೂನ್ 30, 2022ರ ನಂತರ ಕಾಶಿ ಯಾತ್ರೆ ಮಾಡುವವರು ಮೊದಲೇ ಸರ್ಕಾರದಿಂದ ಅನುಮತಿ ಪಡೆಯಬೇಕು.


ಕಾಶಿ ಯಾತ್ರೆ ಧನ ಸಹಾಯ ಪಡೆಯಲು ಇರುವ ಮಾರ್ಗಸೂಚಿಗಳು


1. ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ. ಸಹಾಯ ಧನವಾಗಿ ನೀಡಲಾಗುವುದು.


2. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಕೆಳಕಂಡ ಯಾವುದಾದರೂ ಒಂದು ದಾಖಲೆಗಳನ್ನು ಕಡ್ಡಾಯವಾಗಿ ಒದಗಿಸತಕ್ಕದ್ದು.


3. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ಗುರುತಿನ ಚೀಟಿ ಅಥವಾ ಆಧಾರ್‌ ಕಾರ್ಡ್ ಅಥವಾ ರೇಷನ್ ಕಾರ್ಡ್ ಈ ಮೂರರಲ್ಲಿ ಒಂದು ದಾಖಲೆ ಅತ್ಯಗತ್ಯವಾಗಿ ಬೇಕು.


4. ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ವರ್ಷದ ಏಪ್ರಿಲ್‌ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರಬೇಕು. 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆ ಒದಗಿಸುವುದು ಅಗತ್ಯ.


ಇದನ್ನೂ ಓದಿ: Mann Ki Baat: ತುರ್ತು ಪರಿಸ್ಥಿತಿ ಸಂದರ್ಭ ಪ್ರಜಾಪ್ರಭುತ್ವ ಅಳಿಸುವ ಪ್ರಯತ್ನ, ಮೋದಿ ಮಾತುಗಳು


5. ಕಳೆದ ಏಪ್ರಿಲ್ 1 ರಿಂದ ದಿನಾಂಕ ಬರುವ ಜೂನ್​30 ರವರೆಗೆ ಕಾಶಿ ವಿಶ್ವನಾಥನ ದರ್ಶನಕ್ಕೆ ತೆರಳಿದ ಯಾತ್ರಾರ್ಥಿಗಳು ದಾಖಲೆಗಳೊಂದಿಗೆ (ಕಾಶಿ ವಿಶ್ವನಾಥ ಸ್ವಾಮಿ ದೇವಾಲಯಕ್ಕೆ ತೆರಳಲು ಮುಂಗಡವಾಗಿ ಕಾಯ್ದಿರಿಸಿದ ಮತ್ತು ಹಿಂದಿರುಗಿದ ಬಗ್ಗೆ ಕಾಯ್ದಿರಿಸಿದ ಟಿಕೇಟ್, ಛಾಯಾಚಿತ್ರ ಪೂಜಾ ರಶೀದಿ, ಅಥವಾ ದೇವಾಲಯಕ್ಕೆ ತೆರಳಿ ಮರಳಿದ ಬಗ್ಗೆ ಯಾವುದಾದರೂ ಇತರೆ ದಾಖಲೆ)ಗಳನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಕಛೇರಿಗೆ ಸಲ್ಲಿಸಿ ಆರ್ಥಿಕ ಸಹಾಯ ಪಡೆಯಬಹುದು.


6. ಜುಲೈ 1, 2022ರಿಂದ ಅನ್ವಯವಾಗುವಂತೆ ಯಾತ್ರಾರ್ಥಿಗಳು ಕಾಶಿ ಯಾತ್ರೆ ಕೈಗೊಂಡಿರುವ ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ಕಛೇರಿಯಿಂದ ಬಯೋಮೆಟ್ರಿಕ್‌ ದೃಢೀಕರಣದೊಂದಿಗೆ, ಆನ್‌ಲೈನ್‌ ಅಥವಾ ಮುದ್ಧಾಂ/ನೊಂದಾಯಿತ ಅಂಚೆ ಮೂಲಕ, ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಛೇರಿಗೆ ಸಲ್ಲಿಸಬೇಕು. ಒಂದು ವೇಳೆ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ದೃಢೀಕರಣ ಇಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.


7. ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗುವುದಿಲ್ಲ.


8. ಸರ್ಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳ ಬ್ಯಾಂಕ್‌ ಖಾತೆಯು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಾಗಿರಬೇಕು ಮತ್ತು ಕಡ್ಡಾಯವಾಗಿ ಆಧಾರ್ ಲಿಂಕ್‌ ಆಗಿರತಕ್ಕದ್ದು,


9. ಸದರಿ ಸಹಾಯಧನವನ್ನು ಯಾತ್ರೆಯನ್ನು ಪೂರ್ಣಗೊಳಿಸಿ ಸಂಬಂಧಿಸಿದ ದಾಖಲೆಗಳನ್ನು ನಿಗಧಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ ಒದಗಿಸಿದ ನಂತರ ಸದರಿ ಅರ್ಜಿಗಳನ್ನು ಧಾರ್ಮಿಕ ದತ್ತಿ ಆಯುಕ್ತರು ಸ್ವೀಕರಿಸಿ, ಪರಿಶಿಲಿಸಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದು.


ಕಾಶಿ ಯಾತ್ರೆಗೆ ವಿಶೇಷ ರೈಲು

top videos


    ಕಾಶಿ ಯಾತ್ರೆ ಮಾಡುವವರಿಗೆ ಮುಜರಾಯಿ ಇಲಾಖೆ ಮತ್ತೊಂದು ಯೋಜನೆಯನ್ನು ಜಾರಿಗೆ ತರುತ್ತಿದೆ. ಕೇಂದ್ರ ಸರಕಾರದ ‘ಭಾರತ ಗೌರವ’ ಯೋಜನೆಯಡಿ ಮುಜರಾಯಿ ಇಲಾಖೆಯು ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

    First published: