• Home
 • »
 • News
 • »
 • explained
 • »
 • Explained: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದ ರಿತುರಾಜ್ ಅವಸ್ಥಿ ಜೀವನ ಪರಿಚಯ

Explained: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕವಾದ ರಿತುರಾಜ್ ಅವಸ್ಥಿ ಜೀವನ ಪರಿಚಯ

ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ

ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ

Justice rituraj Awasthi: 2009ರ ಏ. 13 ರಿಂದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಆಗಿ ಕಾರ್ಯನಿರ್ವಹಿಸುತ್ತಿರುವ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್‌ ಕಳೆದ ತಿಂಗಳು ಶಿಫಾರಸು ಮಾಡಿತ್ತು. ನ್ಯಾ. ರಿತುರಾಜ್‌ ಅವಸ್ಥಿ ಅವರ ಸೇವಾವಧಿಯಲ್ಲಿ  2022ರ ಜು. 2ಕ್ಕೆ ಮುಕ್ತಾಯವಾಗಲಿದೆ. 

ಮುಂದೆ ಓದಿ ...
 • Share this:

  ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಆಗಿದ್ದ ನ್ಯಾ. ಎ.ಎಸ್. ಓಕಾ (Justice A S Oka) ಅವರು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕವಾದ ನಂತರ ಇದೀಗ ಅಲಹಾಬಾದ್‌ ಹೈಕೋರ್ಟ್‌ ಹಿರಿಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ (Justice Rituraj Awasthi) ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ (Karnataka High Court Chief Justice) ಕೇಂದ್ರ ಸರ್ಕಾರ ನೇಮಿಸಿ ಶನಿವಾರ ಅಧಿಸೂಚನೆ ಹೊರಡಿಸಿದೆ. ಹಿರಿಯ ನ್ಯಾಯಮೂರ್ತಿಗಳಾಗಿದ್ದ ಎಂಟು ಮಂದಿಗೆ ಮುಖ್ಯ ನ್ಯಾಯಮೂರ್ತಿಗಳಾಗಿ ಪದೋನ್ನತಿ ನೀಡಲಾಗಿದ್ದು ಅವರಲ್ಲಿ ಅವಸ್ಥಿ ಕೂಡ ಒಬ್ಬರು.


  ನ್ಯಾ. ಅವಸ್ಥಿ ಅವರು ಹುಟ್ಟಿದ್ದು 1960ರಲ್ಲಿ. ಲಖನೌ ವಿಶ್ವವಿದ್ಯಾಲಯದಲ್ಲಿ ಕಾನೂನು ಪಡೆದ ಬಳಿಕ 1987ರಲ್ಲಿ ವಕೀಲರಾಗಿ ಸೇವೆ ಆರಂಭಿಸಿದರು. ಅಲಾಹಾಬಾದ್‌ ಹೈಕೋರ್ಟ್‌ ಲಖನೌ ಪೀಠದ ನ್ಯಾಯಮೂರ್ತಿಯಾಗಿ ಹಲವು ವರ್ಷ ಕರ್ತವ್ಯ ನಿರ್ವಹಿಸಿದ ನ್ಯಾ. ಅವಸ್ಥಿ ಅವರು ಶಿಕ್ಷಣ, ಸಿವಿಲ್‌ ವಿಚಾರಗಳಲ್ಲಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದಾರೆ. ರಿತುರಾಜ್‌ ಅವಸ್ಥಿ ಲಖನೌದಲ್ಲಿ ಈ ಮೊದಲು ಭಾರತದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆಗಿ ಸೇವೆ ಸಲ್ಲಿಸುತ್ತಿದ್ದರು. 2009ರಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದರು. ಖಾಯಂ ನ್ಯಾಯಮೂರ್ತಿಯಾಗಿ ಸೇವೆ ಆರಂಭಿಸಿದ್ದು 2010ರಲ್ಲಿ.


  ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಎ ಎಸ್‌ ಓಕಾ ಅವರು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. ಆ ಬಳಿಕ ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಾಗಿ ಸತೀಶ್‌ ಚಂದ್ರ ಶರ್ಮಾ ನೇಮಕವಾಗಿದ್ದರು. ಸತೀಶ್‌ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲಾಗಿದೆ.


  ಸಿವಿಲ್, ಶಿಕ್ಷಣ ಹಾಗೂ ಸೇವಾ ವಿಷಯಗಳಲ್ಲಿ ಹೆಚ್ಚಿನ ಪರಿಣತಿ


  ಅಲಹಾಬಾದ್‌ ಹೈಕೋರ್ಟ್‌ ನ ಹಿರಿಯ ನ್ಯಾಯಮೂರ್ತಿ ಆಗಿ ಸೇವೆ ಸಲ್ಲಿಸಿ, ಇದೀಗ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿರುವ ರಿತುರಾಜ್‌ ಅವಸ್ಥಿ 1960 ಜು. 3ರಂದು ಜನಿಸಿದರು. ಲಖನೌ ವಿಶ್ವವಿದ್ಯಾಲಯದಿಂದ 1986 ರಲ್ಲಿ ಕಾನೂನು ಪದವಿ ಪಡೆದು, 1987ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡರು. ಸಿವಿಲ್, ಶಿಕ್ಷಣ ಹಾಗೂ ಸೇವಾ ವಿಷಯಗಳಲ್ಲಿ ಹೆಚ್ಚಿನ ಪರಿಣತಿ ಹೊಂದಿರುವ ನ್ಯಾ. ರಿತುರಾಜ್ ಅವಸ್ಥಿ ಅವರು ಕೇಂದ್ರ ಸರಕಾರದ ಪರ ಸಹಾಯಕ ಸಾಲಿಸಿಟರ್‌ ಜನರಲ್‌ ಆಗಿಯೂ ಸೇವೆ ಸಲ್ಲಿಸಿದ್ದಾರೆ. 2009ರ ಏ. 13 ರಿಂದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಆಗಿ ಕಾರ್ಯನಿರ್ವಹಿಸುತ್ತಿರುವ ಅವರನ್ನು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ಸುಪ್ರೀಂ ಕೋರ್ಟ್‌ ಕಳೆದ ತಿಂಗಳು ಶಿಫಾರಸು ಮಾಡಿತ್ತು. ನ್ಯಾ. ರಿತುರಾಜ್‌ ಅವಸ್ಥಿ ಅವರ ಸೇವಾವಧಿಯಲ್ಲಿ  2022ರ ಜು. 2ಕ್ಕೆ ಮುಕ್ತಾಯವಾಗಲಿದೆ.


  ಇದನ್ನು ಓದಿ: 41 year old virgin looking for girlfriend; 5 ವರ್ಷದಿಂದ ವರ್ಜಿನ್ ಗೆಳತಿ ಹುಡುಕುತ್ತಿರುವ ವ್ಯಕ್ತಿ; ಈತನ ಷರತ್ತು ಕೇಳಿ ಹುಡುಗಿಯರು ಶಾಕ್!


  ಯಾರಿಗೆಲ್ಲಾ ಮುಖ್ಯನ್ಯಾಯಮೂರ್ತಿಯಾಗಿ ಪದೋನ್ನತಿ?


  ಕೊಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಾಜೇಶ್ ಬಿಂದಾಲ್ ಅವರನ್ನು ಅಲಹಾಬಾದ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.


  ಮೇಘಾಲಯ ಹೈಕೋರ್ಟ್ ನ್ಯಾಯಮೂರ್ತಿಯಾಗಿದ್ದ ರಂಜಿತ್ ವಿ. ಮೊರೆ ಅವರನ್ನು, ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.


  ಕರ್ನಾಟಕದ ನ್ಯಾಯಮೂರ್ತಿಯಾಗಿದ್ದ ಸತೀಶ್ ಚಂದ್ರ ಶರ್ಮಾ ಅವರನ್ನು ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.


  ಮಧ್ಯಪ್ರದೇಶ ನ್ಯಾಯಮೂರ್ತಿ ಪ್ರಕಾಶ್  ಶ್ರೀವಾಸ್ತವ ಅವರನ್ನು ಕೊಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.


  ಹಿಮಾಚಲ ಪ್ರದೇಶ ನ್ಯಾಯಮೂರ್ತಿ ಆರ್.ವಿ. ಮಲಿಮಠ್ ಅವರನ್ನು ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.


  ಅಲಹಾಬಾದ್ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದೆ.


  ಕರ್ನಾಟಕ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರನ್ನು ಗುಜರಾತ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.


  ಛತ್ತೀಸ್​ಗಢದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

  Published by:HR Ramesh
  First published: