• ಹೋಂ
  • »
  • ನ್ಯೂಸ್
  • »
  • Explained
  • »
  • Explained: ಏನಿದು ಅಗ್ನಿಪಥ್ ಯೋಜನೆ? ಭಾರತದ ರಕ್ಷಣೆಯಲ್ಲಿ ಇದರ ಮಹತ್ವವೇನು?

Explained: ಏನಿದು ಅಗ್ನಿಪಥ್ ಯೋಜನೆ? ಭಾರತದ ರಕ್ಷಣೆಯಲ್ಲಿ ಇದರ ಮಹತ್ವವೇನು?

ಭಾರತೀಯ ಸೇನಾಪಡೆ

ಭಾರತೀಯ ಸೇನಾಪಡೆ

ಭಾರತದ ಭದ್ರತೆಯನ್ನು ಬಲಪಡಿಸಲು ಕೇಂದ್ರ ಸರ್ಕಾರ ಹೊರ ತಂದಿರುವ ಹೊಸ ಯೋಜನೆಯೇ ಅಗ್ನಿಪಥ್. ಇನ್ನು ಮುಂದೆ ಸೇನೆಯ ಮೂರೂ ವಿಭಾಗಗಳಲ್ಲಿ ಸೇವೆ ಸಲ್ಲಿಸುವ ನವ ಯುವಕ–ಯುವತಿಯರಿಗೆ ಅವಕಾಶವನ್ನು ನೀಡುವ ಹಾಗೂ ಮಿಲಿಟರಿಯ ಹೊಸ ನೇಮಕಾತಿ ಮಾದರಿ ‘ಅಗ್ನಿಪಥ್’ ಯೋಜನೆ ಜಾರಿಯಾಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ...

ಮುಂದೆ ಓದಿ ...
  • Share this:

ಭಾರತದ ರಕ್ಷಣೆಗೆ (defense of India) ಕೇಂದ್ರ ಸರ್ಕಾರ (Central Government) ಹೆಚ್ಚಿನ ಕೊಡುಗೆ ನೀಡುತ್ತಿದೆ. ವಿಶ್ವದಲ್ಲೇ ಸೇನೆಗಾಗಿ (Military) ಅತೀ ಹೆಚ್ಚು ವೆಚ್ಚ ಮಾಡುತ್ತಿರುವ ದೇಶಗಳಲ್ಲಿ ಭಾರತಕ್ಕೆ ಮೂರನೇ ಸ್ಥಾನವಿದೆ. ಇದೀಗ ಸೇನೆಯ ಸಶಸ್ತ್ರ ಪಡೆಗಳನ್ನು (Armed Forces) ಪರಿವರ್ತಿಸುವ ಗುರಿಯನ್ನು ಹೊಂದಿರುವ “ಅಗ್ನಿಪಥ್” (Agnipath) ಯೋಜನೆಯನ್ನು ಸರ್ಕಾರ ಇಂದು ಘೋಷಿಸಿದೆ. ಈ ಯೋಜನೆಯನ್ನು ಅನಾವರಣಗೊಳಿಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, (Defense Minister Rajnath Singh) ಇದು ಸಶಸ್ತ್ರ ಪಡೆಗಳಿಗೆ ಯುವ ಪ್ರೊಫೈಲ್ ಅನ್ನು ಒದಗಿಸುವ ಪರಿವರ್ತಕ ಉಪಕ್ರಮವಾಗಿದೆ ಅಂತ ಹೇಳಿದ್ದಾರೆ. "ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಯುವಕರಿಗೆ ಅಗ್ನಿವೀರ್ (Agniveer) ಆಗಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶವನ್ನು ಒದಗಿಸಲು ಸರ್ಕಾರ ಈ ಯೋಜನೆ ರೂಪಿಸಿದೆ.


ಏನಿದು ಅಗ್ನಿಪಥ್ ಯೋಜನೆ?


ಭಾರತದ ಭದ್ರತೆಯನ್ನು ಬಲಪಡಿಸಲು ಕೇಂದ್ರ ಸರ್ಕಾರ ಹೊರ ತಂದಿರುವ ಹೊಸ ಯೋಜನೆಯೇ ಅಗ್ನಿಪಥ್. ಇನ್ನು ಮುಂದೆ ಸೇನೆಯ ಮೂರೂ ವಿಭಾಗಗಳಲ್ಲಿ ಸೇವೆ ಸಲ್ಲಿಸುವ ನವ ಯುವಕ–ಯುವತಿಯರಿಗೆ ಅವಕಾಶವನ್ನು ನೀಡುವ ಹಾಗೂ ಮಿಲಿಟರಿಯ ಹೊಸ ನೇಮಕಾತಿ ಮಾದರಿ ‘ಅಗ್ನಿಪಥ್’ ಯೋಜನೆ ಜಾರಿಯಾಗಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ‘ಅಗ್ನಿಪಥ’ಕ್ಕೆ ಪ್ರಧಾನಿ ನರೇಂದ್ರ ಮೋದಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.


ಅಗ್ನಿ ಪಥ್‌ಗೆ ಅಗ್ನಿ ವೀರ್ಸ್‌ಗಳ ನೇಮಕ


"ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಯುವಕರಿಗೆ ಅಗ್ನಿವೀರ್ ಆಗಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶವನ್ನು ಒದಗಿಸಲು ಸರ್ಕಾರ ಈ ಯೋಜನೆ ರೂಪಿಸಿದೆ. 'ಅಗ್ನಿವೀರ್ಸ್'ಗೆ ಉತ್ತಮ ವೇತನ ಪ್ಯಾಕೇಜ್ ಮತ್ತು 4 ವರ್ಷಗಳ ಸೇವೆಯ ನಂತರ ನಿರ್ಗಮನ ನಿವೃತ್ತಿ ಪ್ಯಾಕೇಜ್ ನೀಡಲಾಗುವುದು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.


ಇದನ್ನೂ ಓದಿ: Explained: ರೇವ್ ಪಾರ್ಟಿ ಎಂದರೇನು? ಬೆಂಗಳೂರಲ್ಲಿ ಡ್ರಗ್ಸ್ ಪಾರ್ಟಿಗಳು ನಡೆಯೋದು ಹೇಗೆ? ಇಲ್ಲಿದೆ ಸ್ಫೋಟಕ ಮಾಹಿತಿ


ಭವಿಷ್ಯದ ಸಿದ್ಧ ಸೈನಿಕನ ನಿರ್ಮಾಣ


ಲೆಫ್ಟಿನೆಂಟ್ ಜನರಲ್ ಅನಿಲ್ ಪುರಿ ಅವರು ಅಗ್ನಿವೀರ್ ಈ ಭವಿಷ್ಯದ ಸಿದ್ಧ ಸೈನಿಕನ ಭಾಗವಾಗಲಿದ್ದಾರೆ ಎಂದು ಹೇಳಿದ್ದಾರೆ. ಅಗ್ನಿಪಥ ಯೋಜನೆಯಲ್ಲಿ ಭಾರತೀಯ ಯುವಕರಿಗೆ ಅಗ್ನಿವೀರ್ ಆಗಿ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶವನ್ನು ಒದಗಿಸಲಾಗುವುದು" ಎಂದು ರಾಜನಾಥ್ ಸಿಂಗ್ ಹೇಳಿದರು. ಭಾರತದ ಭದ್ರತೆಯನ್ನು ಬಲಪಡಿಸಲು ಅಗ್ನಿಪಥ್ ಯೋಜನೆಯನ್ನು ತರಲಾಗಿದೆ ಎಂದು ಅವರು ಹೇಳಿದರು. 'ಅಗ್ನಿವೀರ್ಸ್'ಗೆ ಉತ್ತಮ ವೇತನ ಪ್ಯಾಕೇಜ್ ಮತ್ತು 4 ವರ್ಷಗಳ ಸೇವೆಯ ನಂತರ ನಿರ್ಗಮನ ನಿವೃತ್ತಿ ಪ್ಯಾಕೇಜ್ ನೀಡಲಾಗುವುದು ಎಂದು ರಕ್ಷಣಾ ಸಚಿವರು ಹೇಳಿದ್ದಾರೆ.


ಅಗ್ನಿಪಥ್ ಸೇರಲು ಅರ್ಹತೆಗಳೇನು?


ನೂತನ ಅಗ್ನಿಪಥ್ ಯೋಜನೆ ಪ್ರಕಾರ ಸೇನೆಯ ಮೂರು ವಿಭಾಗಗಳಲ್ಲಿ ಆಸಕ್ತ ಯುವಕ–ಯುವತಿಯರು ತರಬೇತಿಯೂ ಸೇರಿದಂತೆ ನಾಲ್ಕು ವರ್ಷದ ಮಟ್ಟಿಗೆ ‘ಅಗ್ನಿವೀರ್’ ಎಂಬ ಹೆಸರಿನ ಯೋಧರಾಗಿ ಕೆಲಸ ಮಾಡಬಹುದಾಗಿದೆ. ನಾಲ್ಕು ವರ್ಷದಲ್ಲಿ ಮೊದಲು 6 ತಿಂಗಳು ಕಠಿಣ ತರಬೇತಿ ಇರುತ್ತದೆ. 10 ನೇ ತರಗತಿ ಹಾಗೂ ಪಿಯುಸಿ ಪಾಸಾದವರು ಅಗ್ನಿವೀರರಾಗಲು ಅರ್ಹರು. ಇದಕ್ಕೆ ದೇಶದಾದ್ಯಂತ ಮೆರಿಟ್ ಅಧಾರದ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಇರಲಿದೆ. 17.5 ವರ್ಷ ಮೇಲ್ಪಟ್ಟ 34 ವರ್ಷ ವಯಸ್ಸಿನ ಒಳಗಿನ ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢವಾಗಿರುವ ಯುವಕ ಯುವತಿಯರು ಅಗ್ನಿವೀರರಾಗಲು ಅರ್ಜಿ ಸಲ್ಲಿಸಬಹುದು.


ಅಗ್ನಿವೀರರಿಗೆ ಸಂಬಳ ಎಷ್ಟು?


ಅಗ್ನಿವೀರರಾದ ಪ್ರತಿಯೊಬ್ಬರಿಗೆ ನಾಲ್ಕು ವರ್ಷದ ಅವಧಿಗೆ ಮಾತ್ರ ವರ್ಷಕ್ಕೆ  4.62 ಲಕ್ಷದಿಂದ 6.92 ಲಕ್ಷದವರೆಗೆ ಸಂಬಳದ ಪ್ಯಾಕೇಜ್ ಇರುತ್ತದೆ. ಅಂದರೆ ತಿಂಗಳಿಗೆ 30 ಸಾವಿರ ರೂಪಾಯಿಗಳಿಂದ 40 ಸಾವಿರವರೆಗೆ ಸಂಬಳ ಸಿಗಲಿದೆ. ಇದರಲ್ಲಿ ಉಚಿತವಾಗಿ ವೈದ್ಯಕೀಯ ವಿಮೆ ದೊರೆಯುತ್ತದೆ. ನಾಲ್ಕು ವರ್ಷ ಸೇವೆ ಸಲ್ಲಿಸಿ ಬಿಡುಗಡೆ ಹೊಂದುವ ಅಗ್ನಿವೀರರಿಗೆ ಸುಮಾರು 11.70 ಲಕ್ಷ ಸೇವಾ ನಿಧಿಯಾಗಿ ಕೊಡಲಾಗುತ್ತದೆ. ಇದಕ್ಕೆ ತೆರಿಗೆ ಇರುವುದಿಲ್ಲ. ಗಮನಿಸಬೇಕಾದ ಅಂಶವೆಂದರೆ ಅಗ್ನಿವೀರರು ನಿವೃತ್ತರಾದ ಮೇಲೆ ಅವರಿಗೆ ಪಿಂಚಣಿ ಇರುವುದಿಲ್ಲ.


45 ಸಾವಿರ ಯುವಕ-ಯುವತಿಯರ ನೇಮಕಾತಿ


ಅಗ್ನಿಪಥ್ ಯೋಜನೆಯ ಪ್ರಕಾರ ಸುಮಾರು ಗರಿಷ್ಠ 45 ಸಾವಿರ ಯುವಕ ಯುವತಿಯರನ್ನು ಸೇವೆಗೆ ಸೇರಿಸಿಕೊಳ್ಳಲಾಗುತ್ತದೆ. ಇದರಲ್ಲಿ ಶೇ 25 ರಷ್ಟು ಅಗ್ನಿವೀರರು ಸೇನೆಯಲ್ಲಿ 15 ವರ್ಷ ಅಧಿಕಾರೇತರ ಶ್ರೇಣಿಯಲ್ಲಿ ಕೆಲಸ ಮಾಡುತ್ತಾರೆ. ಹೊರ ಬಂದವರಿಗೆ ದೇಶದ ಕಾರ್ಪೊರೇಟ್ ವಲಯ ಸೇರಿದಂತೆ ನಾನಾ ವಲಯಗಳಲ್ಲಿ ಸೇವೆ ಸಲ್ಲಿಸಲು ಆದ್ಯತೆ ನೀಡಲಾಗುತ್ತದೆ.


ಇದನ್ನೂ ಓದಿ:  National Herald Case: ಕೈ ಸುಡುತ್ತಿರುವುದೇಕೆ ನ್ಯಾಷನಲ್ ಹೆರಾಲ್ಡ್ ಕೇಸ್? ಅಷ್ಟಕ್ಕೂ ನೆಹರೂ ಕುಟುಂಬದ ವಿರುದ್ಧ ಏನಿದು ಆರೋಪ?


ಹುತಾತ್ಮರಾದರೆ ಕುಟುಂಬಸ್ಥರಿಗೆ 1 ಕೋಟಿ ಪರಿಹಾರ


ಅಗ್ನಿವೀರರು ತಮ್ಮ ನಾಲ್ಕು ವರ್ಷದ ಪಯಣದಲ್ಲಿ ಹುತಾತ್ಮರಾದರೆ ಅವರಿಗೆ ವಿಮೆ ಹೊರತುಪಡಿಸಿ 1 ಕೋಟಿ ಪರಿಹಾರ ನೀಡಲಾಗುವುದು. ಗಂಭೀರವಾಗಿ ಗಾಯಗೊಂಡರೆ 44 ಲಕ್ಷ ನೀಡಲಾಗುವುದು. ಮುಂದಿನ ಮೂರು ತಿಂಗಳಲ್ಲಿ ಅಗ್ನಿವೀರರ ನೇಮಕಾತಿ ಪ್ರಕ್ರಿಯೆ ಆರಂಭವಾಗುವುದು ಎನ್ನಲಾಗಿದೆ. ನೂತನ ಅಗ್ನಿಪಥ್ ಯೋಜನೆಯು ಯುವಕ ಯುವತಿಯರಿಗೆ ಉದ್ಯೋಗವಕಾಶಗಳನ್ನು ಕಲ್ಪಿಸಿ ಕೊಡುವುದಲ್ಲದೇ ಅವರಿಗೆ ಶಿಸ್ತು ಹಾಗೂ ದೇಶಪ್ರೇಮ ಬೆಳೆಸಲು ಪ್ರೋತ್ಸಾಹ ನೀಡುತ್ತದೆ ಎನ್ನಲಾಗಿದೆ.

Published by:Annappa Achari
First published: