Hassan News: ಹಾಸನದ ರೈತರಿಗೆ ಬಂಪರ್ ಆಫರ್! ಈಗಲೇ ಹೀಗೆ ಅರ್ಜಿ ಸಲ್ಲಿಸಿ

ಆಸಕ್ತ ರೈತರು ಯಾವುದೇ ಸಂಶಯ ಹಾಗೂ ಮಾಹಿತಿಗಳಿಗಾಗಿ ಈ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ. ಇಲ್ಲಿದೆ ಈ ಯೋಜನೆಯ ಮಾಹಿತಿ ಮತ್ತು ಸಂಪರ್ಕ ಸಂಖ್ಯೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ರೈತರಿಗೊಂದು ಸಿಹಿ ಸುದ್ದಿ. ಈಗಾಗಲೇ ಹಲವು ಬೆಳೆಗಳನ್ನು ಬೆಳೆಯುತ್ತಿರುವ ರೈತರಿಗೆ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯು ಸಹಾಯಧನ ನೀಡಲು (Horticulture Department Subsidy) ಮುಂದಾಗಿದೆ. 2022 -23 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ (MGNREGA) ಇಲಾಖೆಯು ವೈಯಕ್ತಿಕ ಫಲಾನುಭವಿಗಳಿಗೆ ಸಹಾಯಧನ ನೀಡಲಿದೆ. ಹಾಗಿದ್ರೆ ಸಹಾಯಧನ (Farmers Subsidy) ಪಡೆಯುವುದು ಹೇಗೆ? ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಹೇಗೆ ಸಲ್ಲಿಸಬಹುದು? ಈ ಎಲ್ಲ ಪ್ರಶ್ನೆಗಳಿಗೆ ಇಲ್ಲಿ ಸುಲಭವಾಗಿ ಉತ್ತರ ಕಂಡುಕೊಳ್ಳಿ.  ಇತರ ಜಿಲ್ಲೆಗಳ ಕೃಷಿಕರು ಸಹ ತೋಟಗಾರಿಕಾ ಇಲಾಖೆಯ ಸಹಾಯಧನದ ಕುರಿತು ವಿಚಾರಿಸಿ.

  ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯು ವೈಯಕ್ತಿಕ ಫಲಾನುಭವಿಗಳಿಗೆ ಸಹಾಯಧನ ನೀಡಲು ಮುಂದಾಗಿದೆ. ಈ ಕೂಡಲೇ ರೈತರು ತಮ್ಮ ಸ್ಥಳೀಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

  ಯಾರೆಲ್ಲ ಅರ್ಜಿ ಸಲ್ಲಿಸಬಹುದು?
  ಈ ಕಾರ್ಯಕ್ರಮದಡಿ ಬಹುವಾರ್ಷಿಕ ಬೆಳೆಗಳಾದ ತೆಂಗು, ಮಾವು, ಸಪೋಟ, ಅಂಗಾಂಶ ಬಾಳೆ, ಗೇರು ಹಾಗೂ ತೆಂಗು ತೋಟದಲ್ಲಿ ಕಾಳು ಮೆಣಸು, ದಾಳಿಂಬೆ, ಸೀಬೆ, ಹೂ ಬೆಳೆಗಳಾದ ಗುಲಾಬಿ ಮತ್ತು ಮಲ್ಲಿಗೆ ಇತರೆ ಬಹುವಾರ್ಷಿಕ ಬೆಳೆಗಳನ್ನು ಬೆಳೆಯುವ ರೈತರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರಿಗೆ ಮಾರ್ಗಸೂಚಿ ಅನುಸಾರ ಸಹಾಯಧನ ನೀಡಲಾಗುತ್ತದೆ.

  ಅರ್ಜಿ ಸಲ್ಲಿಸುವುದು ಹೇಗೆ?
  ಹೊಳೆನರಸೀಪುರ ತಾಲೂಕಿನ ರೈತ ಫಲಾನುಭವಿಗಳು ಕೂಡಲೇ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಥವಾ ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ.

  ಯಾವ ರೈತರು ಅರ್ಹರು?
  ಸದರಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಸಲ್ಲಿಸುವ ರೈತರು ಸಣ್ಣ /ಅತಿಸಣ್ಣ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ ಸೇರಿದ ವರ್ಗದ ರೈತರಾಗಿರಬೇಕು. ಗ್ರಾಮ ಪಂಚಾಯಿತಿಯಿಂದ ನೀಡುವ ಉದ್ಯೋಗ ಚೀಟಿ ಹೊಂದಿರುವುದು ಕಡ್ಡಾಯವಾಗಿರುತ್ತದೆ.

  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
  ಆಸಕ್ತ ರೈತರು ಯಾವುದೇ ಸಂಶಯ ಹಾಗೂ ಮಾಹಿತಿಗಳಿಗಾಗಿ ಈ ಕೆಳಗಿನ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ.

  * ವೀರೇಶ್ ಬಿ. ಗಾಮದ್ - ಹಳೆಕೋಟೆ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ - 7259152426
  * ದೊಡ್ಡೇಗೌಡ ಹೆಚ್.ಎ., ಹಳ್ಳಿ- ಮೈಸೂರು ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ - 9972844710
  * ದೇವರಾಜ- ಕಸಬಾ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿ – 9591549225

  ಈ ಅಧಿಕಾರಿಗಳನ್ನು ನೇರವಾಗಿ ಸಂಪರ್ಕಿಸಲು ಹೊಳೆನರಸೀಪುರದ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.


  ಇದನ್ನೂ ಓದಿ: Shivalaya: ಅರಸೀಕೆರೆ ಹೆಸರ ಹಿಂದಿದೆ ಈ ರಹಸ್ಯ! 700 ವರ್ಷಗಳ ಹಿಂದಿನ ಶಿವಾಲಯವೇ ಅದ್ಭುತ

  ಈ ಪ್ರೋತ್ಸಾಹ ಧನವನ್ನು ಏಕೆ ನೀಡಲಾಗುತ್ತೆ?
  ತಾಲೂಕಿನಲ್ಲಿ ಅಂದಾಜು 5000 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಬೆಳೆಯುತ್ತಿದ್ದು, ಅಂತರ ಬೆಳೆಯಾಗಿ ಕೋಕೋ ಬೆಳೆಯುವುದರಿಂದ ರೈತರ ಆದಾಯ ಹೆಚ್ಚಿಸಬಹುದಾಗಿದೆ. ಕೋಕೋ ಎಲೆಗಳು ಉದುರುವಿಕೆ ಯಿಂದ ಹೆಚ್ಚಿನ ಪ್ರಮಾಣದ ಸಾವಯವ ಪದಾರ್ಥ ಮಣ್ಣಿಗೆ ಸೇರುತ್ತದೆ. ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ. ಆದ್ದರಿಂದ ಇಲಾಖೆಯಲ್ಲಿ ತೆಂಗಿನಲ್ಲಿ ಅಂತರ ಬೆಳೆಯಾಗಿ ಕೋಕೋ ಮತ್ತು ಕಾಳು ಮೆಣಸು ಬೆಳೆಯಲು ಈ ರೀತಿಯಾಗಿ ಸಹಾಯಧನವನ್ನು ವಿತರಿಸಲಾಗುತ್ತಿದೆ.

  ಕೃಷಿ ಉತ್ಪನ್ನ ಹೆಚ್ಚಿಸುವ ಉದ್ದೇಶ
  ಈ ಮೂಲಕ ರೈತರ ಆರ್ಥಿಕ ಅಭಿವೃದ್ಧಿಯ ಜೊತೆ ಜೊತೆಗೆ ಹೊಳೆನರಸೀಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದ ಕೃಷಿ ಉತ್ಪನ್ನ ತಯಾರಿಸುವ ಗುರಿಯನ್ನು ಇಲಾಖೆಯು ಹಾಕಿಕೊಂಡಿದೆ.

  ಇದನ್ನೂ ಓದಿ: Hassan: ಬೇರೆ ಜಿಲ್ಲೆಗಳಿಂದಲೂ ಈ ಸರ್ಕಾರಿ ಆಸ್ಪತ್ರೆ ಹುಡುಕಿ ಬರ್ತಾರೆ ಗರ್ಭಿಣಿಯರು!

  ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ರೈತರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯು ವೈಯಕ್ತಿಕ ಫಲಾನುಭವಿಗಳಿಗೆ ಸಹಾಯಧನ ನೀಡಲು ಮುಂದಾಗಿದೆ. ಈ ಕೂಡಲೇ ರೈತರು ತಮ್ಮ ಸ್ಥಳೀಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮೂಲಕ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
  Published by:guruganesh bhat
  First published: