Rainfall: ವರುಣನ ಅಬ್ಬರಕ್ಕೆ ತತ್ತರಿಸಿದ ಹಾಸನ; ಗೋಡೆ ಕುಸಿದು ಓರ್ವ ಸಾವು, ಮನೆಗಳಿಗೆ ನುಗ್ಗಿದ ನೀರು

ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಅನೇಕ ಕೆರೆಗಳು ಕೋಡಿ ಬಿದ್ದಿವೆ. ಗೋಡೆ ಕುಸಿದು ಓರ್ವ ಸಾವನ್ನಪ್ಪಿದ್ದಾನೆ. 15 ಲಕ್ಷ ರೂ ಮೌಲ್ಯದ ‌ಮೀನಿನ ಮರಿಗಳು ಚೆಲ್ಲಾಪಿಲ್ಲಿಯಾಗಿದ್ದು, ತೆಂಗಿನ ತೋಟಗಳು, ಹೋಲಗಳು ಜಲಾವೃತ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಕೊಡಿ ಹರಿದ ಕೆರೆ

ಕೊಡಿ ಹರಿದ ಕೆರೆ

  • Share this:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಹಾಸನ (Hassan) ಜಿಲ್ಲಾದ್ಯಂತ ವರಣು ಆರ್ಭಟಿಸುತ್ತಿದ್ದಾನೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದ (Heavy Rain) ಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿದ್ದು ಹಲವೆಡೆ ಕೆರೆಗಳು (Lake) ಕೋಡಿ ಬಿದ್ದಿದ್ದರೆ, ಮತ್ತೆ ಕೆಲವೆಡೆ ತೆಂಗಿನ ತೋಟ, ಹೊಲ, ಗದ್ದೆ, ಮನೆಗಳು (House) ಹಾಗೂ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಪಾದಾಚಾರಿ ಮೇಲೆ ಹಳೇಯ ಸರ್ಕಾರಿ ಶಾಲೆ ಗೋಡೆ ಕುಸಿದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಹೊಳೆನರಸೀಪುರ ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ,‌ ಎಂ.ಕೆ.ಹೊಸೂರು ಗ್ರಾಮದ ಶಿವಕುಮಾರ್ (28) ಮೃತ ದುರ್ದೈವಿ.

ಶಾಲಾ ಕಾಲೇಜಿಗೆ ರಜೆ ಘೋಷಣೆ

ನಿರಂತರ ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಆರ್.ಗಿರೀಶ್ ರಜೆ ಘೋಷಿಸಿದ್ದಾರೆ. ಚನ್ನರಾಯಪಟ್ಟಣ ತಾಲೂಕಿನಾದ್ಯಂತ ಅತಿ ಹೆಚ್ಚು ಮಳೆಯಾಗಿದೆ. ಹಿರೀಸಾವೆ ಗ್ರಾಮದ ದೊಡ್ಡಕೆರೆಗೆ ಒಂದೇ ದಿನ ಮೂರುವರೆ ಅಡಿ ನೀರು ಬಂದಿದ್ದರಿಂದ ಕೆರೆ ಭರ್ತಿಯಾಗಿ ಕೋಡಿ‌ ಬಿದ್ದಿ ಪರಿಣಾಮ ರಸ್ತೆಯ ಮೇಲೆ ಭಾರಿ ಪ್ರಮಾಣದ ನೀರು ಹರಿದು ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ. ಕೋಡಿ ಬಿದ್ದ ಕೆರೆಯಲ್ಲಿ ಮೀನು ಹಿಡಿಯಲು ಗ್ರಾಮಸ್ಥರು ಮುಗಿಬಿದ್ದಿದ್ದರು ನೀರನಲ್ಲಿ ಬರುವ ಮೀನಿಗಾಗಿ ಸೊಳ್ಳೆಪರದೆ ಹಿಡಿದು ನಾ‌ ಮುಂದು, ತಾ ಮುಂದು ಎಂದು ಮೀನು ಹಿಡಿದರು.

ಇದನ್ನೂ ಓದಿ: Heavy Rain: ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಗೆ ತತ್ತರಿಸಿದ ಬೆಂಗಳೂರು! ಜನಜೀವನ ಸಂಪೂರ್ಣ ಅಸ್ತವ್ಯಸ್ತ

ಎರಡೂವರೆ ದಶಕದ ಬಳಿಕ ತುಂಬಿದ ಕೆರೆ

ದೊಡ್ಡಕೆರೆ ಎರಡೂವರೆ ದಶಕದ ಬಳಿಕ ತುಂಬಿದ್ದು,  ಕೆಲವರು ತುಂಬಿದ ಕೆರೆ ನೀರಿನಲ್ಲಿ ಆಟವಾಡಿದರು. ಗ್ರಾ.ಪಂ. ಸದಸ್ಯ ಚಂದ್ರು ಎಂಬುವವರು, 27 ಲಕ್ಷಕ್ಕೆ ಟೆಂಡರ್ ಪಡೆದು 15 ಲಕ್ಷ ಮೌಲ್ಯದ 8 ಲಕ್ಷ ಮೀನು ಮರಿಗಳನ್ನು ಕೆರೆಗೆ ಬಿಟ್ಟಿದ್ದರು. ದಿಢೀರ್ ಮಳೆಯಿಂದ ಕೆರೆ ಕೋಡಿ ಬಿದ್ದು, ಮೀನಿನ ಮರಿಗಳು ಕೋಡಿಯಲ್ಲಿ ಹೋಗಿವೆ, ಸರ್ಕಾರ ನೆರವು ನೀಡಬೇಕೆಂದು ಮನವಿ ಮಾಡಿದರು.

ಹತ್ತು ಹಳ್ಳಿಗಳಿಗೆ ಸಂಪರ್ಕ ಖಡಿತ

ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಸಾವೆ ಗ್ರಾಮದ ದೊಡ್ಡಕೆರೆ ಕೋಡಿ ಬಿದ್ದಿದ್ದು ಕೊಳೆನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ಮೇಲೆ ಭಾರಿ ಪ್ರಮಾಣದ ನೀರು ಹರಿಯುತ್ತದೆ. ಇದರಿಂದಾಗಿ ಸುಮಾರು ಹತ್ತು ಹಳ್ಳಿಗಳಿಗೆ ಸಂಪರ್ಕ ಖಡಿತಗೊಂಡಿದ್ದು ಗ್ರಾಮಸ್ಥರು ಓಡಾಡಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಿರು ಸೇತುವೆ ನಿರ್ಮಾಣ ಮಾಡುವಂತೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಹಲವು ಭಾರಿ ಮನವಿ ಮಾಡಿದ್ದರು ಯಾರು ಇತ್ತ ಗಮನಹರಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

ಇನ್ನೂ ಹಾಸನ ನಗರದಲ್ಲೂ ಕಳೆದ ರಾತ್ರಿಯಿಂದ  ಮಳೆರಾಯ ಅಬ್ಬರಿಸಿದ ಪರಿಣಾಮ ಬನಶಂಕರಿ ಬಡಾವಣೆಯ ಕೆಲವು ಮನೆಗಳು ಹಾಗೂ ವಸತಿ ಪ್ರದೇಶಗಳಿಗೆ ನೀರು ನುಗ್ಗಿ ಜನರು ತೀವ್ರ ತೊಂದರೆ ಅನುಭವಿಸಿದರು. ಕೆಲ ವಾಹನಗಳೂ ನೀರಿನಲ್ಲಿ ಸಿಲುಕಿಕೊಂಡಿದ್ದರಿಂದ ಚಾಲಕರು ಮತ್ತು ಮಾಲೀಕರು ಪರದಾಡಿದರು.

ಇದನ್ನೂ ಓದಿ: Bengaluru Rain: ಮಹಾಮಳೆಗೆ ಮುಳುಗಿದ ಮಹಾನಗರಿ! ಬೆಂಗಳೂರಿನ ಮಳೆ ಅವಾಂತರದ ಚಿತ್ರಗಳು ಇಲ್ಲಿವೆ

ಹೆಚ್ಚಾಗಿದೆ ಹೇಮಾವತಿ ನಾಲೆಯ ಒಳಹರಿವು

ಮಲೆನಾಡು ಭಾಗದಲ್ಲಿ ಜೋರು ಮಳೆಯಾಗುತ್ತಿದ್ದು ಹೇಮಾವತಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ನಿನ್ನೆ 420 ಕ್ಯೂಸೆಕ್ ಇದ್ದ ಒಳ ಹರಿವು, ಇಂದು 1266  ಕ್ಯೂಸೆಕ್‌ಗೆ ಏರಿಕೆಯಾಗಿದೆ. ಇಂದು ಬೆಳಗ್ಗೆಯಿಂದಲೇ ನಿರಂತರವಾಗಿ ಮಳೆಯಾದ್ದರಿಂದ ಜನರು ಮನೆಯಿಂದ ಹೊರ ಬರದ ಪರಿಸ್ಥಿತಿ ನಿರ್ಮಾಣವಾಗಿತ್ತು.
Published by:Pavana HS
First published: