Karnataka Budget 2023: ಹುಬ್ಬಳ್ಳಿ-ಧಾರವಾಡ 6 ಪಥಗಳ ಹೆದ್ದಾರಿಗೆ 1,200 ಕೋಟಿ ಘೋಷಣೆ

ಸಿಎಂ ಬಸವರಾಜ ಬೊಮ್ಮಾಯಿ

ಸಿಎಂ ಬಸವರಾಜ ಬೊಮ್ಮಾಯಿ

ಉತ್ತರ ಕರ್ನಾಟಕ ಭಾಗದಲ್ಲಿ ಮೀನು ಕೃಷಿಯನ್ನು ಉತ್ತೇಜಿಸಲು ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.

 • Share this:

  ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ  (CM Basavaraj Bommai Budget 2023) ತಮ್ಮ 2ನೇ ಬಜೆಟ್​ನಲ್ಲಿ ಉತ್ತರ ಕರ್ನಾಟಕಕ್ಕೆ (Uttara Karnataka) ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ. ಉತ್ತರ ಕರ್ನಾಟಕದ ಪ್ರಮುಖ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ (Upper Bhadra Project) ಹಂತ-3 ಕುರಿತು ಮಹತ್ವದ ಘೋಷಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ, (Hubballi Dharwad News) ಹಾವೇರಿಗೂ ಬಜೆಟ್​ನಲ್ಲಿ ಉತ್ತಮ ಕೊಡುಗೆ ಸಿಕ್ಕಿದೆ.


  ಉತ್ತರ ಕರ್ನಾಟಕದ ಊರುಗಳಿಗೆ ಬಂಪರ್ ಕೊಡುಗೆ
  ಹುಬ್ಬಳ್ಳಿ-ಧಾರವಾಡ 6 ಪಥಗಳ ಹೆದ್ದಾರಿಗೆ 1,200 ಕೋಟಿ ಅನುದಾನ ನೀಡಲಾಗಿದೆ. ಜೊತೆಗೆ ಹುಬ್ಬಳ್ಳಿ-ಹೊಸಪೇಟೆ-ಬಳ್ಳಾರಿ- ಆಂಧ್ರ ಗಡಿ ಹೆದ್ದಾರಿಗೆ 2,200 ಕೋಟಿ ಅನುದಾನ ನೀಡಲಾಗಿದೆ.


  ರೈತರು ಹಾಗೂ ಭೂಮಾಲೀಕರಿಗೆ ಶೀಘ್ರ ಭೂ ಪರಿಹಾರ
  ಹಲವಾರು ವರ್ಷಗಳಿಂದ ನೆನೆಗುದಿಯಲ್ಲಿದ್ದ ಭೂಸ್ವಾಧೀನಕ್ಕೆ ಏಕರೂಪ ದರ ನಿಗದಿಪಡಿಸುವ ಸಂಬಂಧದಲ್ಲಿ ಒಪ್ಪಂದದ ಐತೀರ್ಪನ್ನು ರಚಿಸುವ ಕುರಿತು ಪ್ರಸಕ್ತ ಸರ್ಕಾರವು ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ. ಇದರಿಂದ ರೈತರು ಹಾಗೂ ಭೂಮಾಲೀಕರಿಗೆ ಶೀಘ್ರ ಭೂ ಪರಿಹಾರ ದೊರೆಯಲಿದೆ ಎಂದು ವಿಶ್ಲೇಷಿಸಲಾಗಿದೆ.


  ಬಯಲುಸೀಮೆಯಲ್ಲಿ ಮೀನು ಕೃಷಿಗೆ ಪ್ರೋತ್ಸಾಹ
  ಉತ್ತರ ಕರ್ನಾಟಕ ಭಾಗದಲ್ಲಿ ಮೀನು ಕೃಷಿಯನ್ನು ಉತ್ತೇಜಿಸಲು ಹಾವೇರಿ ಜಿಲ್ಲೆಯಲ್ಲಿ ಹೊಸದಾಗಿ ಮೀನುಮರಿ ಉತ್ಪಾದನಾ ಮತ್ತು ಪಾಲನಾ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಲಾಗಿದೆ.


  ಪರಿಸರಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನ
  ಉತ್ತಮ ತಳಿಯ ಬಲಿತ ಬಿತ್ತನೆ ಮೀನು ಮರಿಗಳ ದಾಸ್ತಾನು (Ranching) ಪ್ರೋತ್ಸಾಹಿಸಲು 20 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು. ಸಾರ್ವಜನಿಕರಿಗೆ ಗುಣಮಟ್ಟದ ಮೀನು ಉತ್ಪನ್ನಗಳನ್ನು ಪೂರೈಸಲು ಪರಿಸರಸ್ನೇಹಿ ತ್ರಿಚಕ್ರ ಮೀನು ಮಾರಾಟ ವಾಹನಗಳನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಒದಗಿಸಲಾಗುವುದು.


  ತವರೂರಿಗೆ ಭರ್ಜರಿ ಕೊಡುಗೆ
  ತವರಿಗೆ ವಿಶೇಷ ಕೊಡುಗೆ ಕೊಡುಗೆಯನ್ನೇ ಸಿಎಂ ಬೊಮ್ಮಾಯಿ ನೀಡಿದ್ದಾರೆ. ಹಾವೇರಿ ಜಿಲ್ಲೆಯ ಸವಣೂರಿನಲ್ಲಿ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡುವುದಾಗಿ ಬಜೆಟ್​ನಲ್ಲಿ ಘೋಷಿಸಲಾಗಿದೆ.


  ಮೆಗಾ ಡೈರಿ ಸ್ಥಾಪನೆ
  ಹಾವೇರಿಯಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿ ಸ್ಥಾಪನೆಗೆ ಸರ್ಕಾರದಿಂದ 90 ಕೋಟಿ ರೂ. ಅನುದಾನ ನೀಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು, ಬಳ್ಳಾರಿ ಜಿಲ್ಲೆಯಲ್ಲಿ ದಿನಂಪ್ರತಿ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾಡೈರಿಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು. ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ.


  ಇದನ್ನೂ ಓದಿ: Karnataka Budget 2023-24 Live: ಸರ್ಕಾರಿ ಉದ್ಯೋಗಿಗಳ ಆಸೆಗೆ ತಣ್ಣೀರೆರಚಿದ ಬಜೆಟ್​, 7ನೇ ವೇತನ ಆಯೋಗದ ಬಗ್ಗೆ ಸಿಎಂ ಮೌನ
  ಪ್ರಸಕ್ತ ಸಾಲಿನಲ್ಲಿ ಪ್ರಗತಿಯಲ್ಲಿರುವ ಜಗಳೂರು, ಕಿತ್ತೂರು, ಬಾಳಂಬೀಡ, ಹರಪನಹಳ್ಳಿ, ಯಾದಗಿರಿ, ರಾಯಚೂರಿನ ವಿವಿಧ ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಈ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು. ಸಸಾಲಟ್ಟಿ-ಶಿವಲಿಂಗೇಶ್ವರ ಮಂಟೂರು ಮಹಾಲಕ್ಷ್ಮ ಮತ್ತು ಶ್ರೀ ವೆಂಕಟೇಶ್ವರ ಏತ ನೀರಾವರಿ ಯೋಜನೆ, ಪೂರಿಗಾಲಿ ಸೂಕ್ಷ್ಮ ನೀರಾವರಿ ಯೋಜನೆಗಳನ್ನು ಪ್ರಸಕ್ತ ಸಾಲಿನಲ್ಲಿ ಪೂರ್ಣಗೊಳಿಸಲು ಕ್ರಮವಹಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.


  ಇದನ್ನೂ ಓದಿ: Karnataka Budget 2023: ಕರ್ನಾಟಕ ರೈಲು ಜಾಲ ಅಭಿವೃದ್ಧಿಗೆ 7561 ಕೋಟಿ; ಯಾವ ಮಾರ್ಗಕ್ಕೆ ಎಷ್ಟು?


  ಕಲ್ಯಾಣ ಕರ್ನಾಟಕದ ಪ್ರಮುಖ ಸಂಪರ್ಕ ರಸ್ತೆಯಾದ 411 ಕಿ.ಮೀ. ಉದ್ದದ ಬೀದರ್-ಕಲಬುರಗಿ-ಬಳ್ಳಾರಿ ರಸ್ತೆಯನ್ನು ಚತುಷ್ಪಥ ಹೆದ್ದಾರಿಯನ್ನಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

  Published by:ಗುರುಗಣೇಶ ಡಬ್ಗುಳಿ
  First published: