ಚೀನಾ ದಾಳಿಯಿಂದ ಗಾಯಗೊಂಡ ನಾಲ್ವರು ಸೈನಿಕರ ಸ್ಥಿತಿ ಗಂಭೀರ!

ದಾಳಿ ವೇಳೆ ಸಾಕಷ್ಟು ಸೈನಿಕರು ಗಾಯಗೊಂಡಿದ್ದರು. ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಅನೇಕರು ತೀವ್ರವಾಗಿಗಾಯಗೊಂಡಿದ್ದರು. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

 • Share this:
  ಮಂಗಳವಾರ (ಜೂ.17): ಚೀನಾ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಗಾಯಗೊಂಡವರ ಪೈಕಿ ನಾಲ್ಕು ಸೈನಿಕರ ಸ್ಥಿತಿ ಗಂಭೀರವಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.ಮಂಗಳವಾರ ಭಾರತ ಮತ್ತು ಚೀನಾ ನಡುವೆ ಘರ್ಷಣೆ ಏರ್ಪಟ್ಟಿತ್ತು. ಲಡಾಕ್​ನ ಗಾಲ್ವನ್ ​ ಕಣಿವೆ ಭಾಗದಲ್ಲಿ ಎರಡು ದೇಶಗಳ ಸೇನೆಯ ನಡುವೆ ಗುಂಡಿನ ಕಾಳಕ ನಡೆಡಿತ್ತು. ಗುಂಡಿನ ಚಕಮಕಿ ವೇಳೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದರು.

  ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಆದರೆ, ಚೀನಾ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರದ ಮೂಲಗಳು ಖಚಿತಪಡಿಸಿವೆ.

  ಇನ್ನು ದಾಳಿ ವೇಳೆ ಸಾಕಷ್ಟು ಸೈನಿಕರು ಗಾಯಗೊಂಡಿದ್ದರು. ಇವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಪೈಕಿ ಅನೇಕರು ತೀವ್ರವಾಗಿಗಾಯಗೊಂಡಿದ್ದರು. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇವರಿಗೆ ವಿಶೇಷ ಚಿಕಿತ್ಸೆ ನೀಡಲಾಗುತ್ತಿದೆ.

  ಇದನ್ನೂ ಓದಿ: ಗಾಲ್ವಾನ್ ಕಣಿವೆಯಲ್ಲಿ ಪರಿಸ್ಥಿತಿ ಉದ್ವಿಘ್ನ: ಭಾರತ-ಚೀನಾ ಗಡಿಯಲ್ಲಿ ರೈಲು ಸಂಚಾರ ರದ್ದು

  ಲಡಾಖ್​ನ ಪ್ಯಾಂಗೋಂಗ್ ಟ್ಸೋ ಸರೋವರದ ಬಳಿ ಇರುವ ಎಲ್​ಎಸಿ ಗಡಿಭಾಗದಲ್ಲಿ ಕಳೆದ ಒಂದು ತಿಂಗಳಿನಿಂದ ಚೀನಾ ಸೈನಿಕರು ಆಕ್ರಮಣಕಾರಿ ರೀತಿಯಲ್ಲಿ ವರ್ತಿಸುತ್ತಿದ್ದಾರೆರೆ. ಅದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರೂ ಕೂಡ ಪ್ರತಿರೋಧ ತೋರುತ್ತಿದ್ದಾರೆ. ಸರೋವರದ ಬಳಿಯ ಗಡಿಭಾಗದ ಒಂದು ಆಯಕಟ್ಟಿನ ಜಾಗದಲ್ಲಿ ಭಾರತ ರಸ್ತೆ ನಿರ್ಮಿಸುತ್ತಿದೆ. ಹಾಗೆಯೇ, ಗಾಲ್ವನ್ ಕಣಿವೆಯಲ್ಲಿ ಡರ್ಬುಕ್-ಶಯೋಕ್-ದೌಲತ್ ಬೇಗ್ ಓಲ್ಡೀ ರಸ್ತೆಯನ್ನು ಸಂಪರ್ಕಿಸುವ ಮತ್ತೊಂದು ರಸ್ತೆಯನ್ನೂ ನಿರ್ಮಿಸಲಾಗುತ್ತಿದೆ. ಇದು ಚೀನೀಯರ ಕೆಂಗಣ್ಣಿಗೆ ಕಾರಣವಾಗಿದೆ. ಈ ರಸ್ತೆ ನಿರ್ಮಾಣ ಕಾರ್ಯಕ್ಕೆ ಚೀನೀಯರು ತೀವ್ರ ಆಕ್ಷೇಪಣೆ ವ್ಯಕ್ತಪಡಿಸುತ್ತಿದ್ದಾರೆ.
  First published: