ಭಾರತ ಮತ್ತು ಚೀನಾ ನಡುವೆ ಘರ್ಷಣೆ ಏರ್ಪಟ್ಟಿದ್ದು, ಲಡಾಕ್ನ ಗಾಲ್ವನ್ ಕಣಿವೆ ಭಾಗದಲ್ಲಿ ಎರಡು ದೇಶಗಳ ಸೇನೆಯ ನಡುವೆ ಗುಂಡಿನ ಕಾಳಕ ನಡೆದಿದೆ. ಗುಂಡಿನ ಚಕಮಕಿ ವೇಳೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಐ ಸರ್ಕಾರಿ ಮೂಲಗಳು ಖಚಿತಪಡಿಸಿವೆ.
ಇದಕ್ಕೂ ಮೊದಲು ಸೋಮವಾರ ರಾತ್ರಿ ಚೀನಾ ನಡೆಸಿದ ದಾಳಿಗೆ ಭಾರತೀಯ ಸೇನೆಯ ಓರ್ವ ಅಧಿಕಾರಿ ಸೇರಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದರು ಎಂದು ವರದಿಯಾಗಿತ್ತು. ಆದರೆ ಇದೀಗ ಚೀನಾ ದಾಳಿಗೆ ಭಾರತದ ಸುಮಾರು 20 ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಭಾರತೀಯ ಸೈನಿಕರ ಪ್ರತಿದಾಳಿಗೆ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ಹೇಳಿದೆ.
ಗಡಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹಾಗೂ ಸೇನೆಯ ಮೂರು ಪಡೆಗಳ ಮುಖ್ಯಸ್ಥರ ಜೊತೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಭೆ ನಡೆಸಿದ್ದಾರೆ. ಬಳಿಕ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ಅವರಿಗೆ ವಿವರಣೆ ನೀಡಿದ್ದಾರೆ.
ಇದನ್ನು ಓದಿ: ’ದೇಶಕ್ಕಾಗಿ ನನ್ನ ಮಗನ ತ್ಯಾಗಕ್ಕೆ ನಾನು ಹೆಮ್ಮೆಪಡುತ್ತೇನೆ’; ಚೀನಾ ಸೇನೆಯಿಂದ ಹತರಾದ ಕರ್ನಲ್ ಸಂತೋಷ್ ತಾಯಿಯ ನುಡಿ
ಭಾರತ ಮತ್ತು ಚೀನಾ ನಡುವೆ ಗಡಿ ರೇಖೆಯಲ್ಲಿ ಹಿಂಸಾಚಾರ ಮತ್ತು ಸಾವುಗಳ ವರದಿಗಳ ಬಗ್ಗೆ ನಾವು ಕಳವಳ ಹೊಂದಿದ್ದೇವೆ. ಎರಡೂ ದೇಶಗಳ ಗರಿಷ್ಠ ಸಂಯಮ ಕಾಯ್ದುಕೊಳ್ಳುವಂತೆ ನಾವು ಎರಡೂ ಕಡೆಯವರನ್ನು ಒತ್ತಾಯಿಸುತ್ತೇವೆ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಅಂಟೋನಿಯೊ ಗುಟೆರೆಸ್ ಮನವಿ ಮಾಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ