ಲಡಾಖ್(ಜು.03): ಭಾರತ-ಚೀನಾ ನಡುವಿನ ಸಂರ್ಘದ ನಂತರ ಇಲ್ಲಿನ ಪರಿಸ್ಥಿತಿ ಅವಲೋಕಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬದಲಿಗೆ ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಲಡಾಖ್ಗೆ ಭೇಟಿ ನೀಡುತ್ತಿದ್ಧಾರೆ. ಇಂದು ಲಾಡಾಖ್ಗೆ ಭೇಟಿ ನೀಡಿ ಬಿಪಿನ್ ರಾವತ್ ಸದ್ಯದ ಪರಿಸ್ಥಿತಿ ಅವಲೋಕನ ಮಾಡಲಿದ್ಧಾರೆ ಎನ್ನಲಾಗುತ್ತಿದೆ.
ಗಾಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷದ ಬಳಿಕ ಮೊದಲ ಬಾರಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಡಾಖ್ಗೆ ತೆರಳಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ನಿನ್ನೆ ಈ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ರಕ್ಷಣಾ ಸಚಿವಾಲಯ ಮಾಹಿತಿ ನೀಡಿದೆ.
ಯೋಜನೆಯಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಮುಂಜಾನೆಯೇ ಲಡಾಖ್ಗೆ ಭೇಟಿ ನೀಡಬೇಕಿತ್ತು. ಇಲ್ಲಿನ ಲೇಹ್ ಆಸ್ಪತ್ರೆಗೆ ತೆರಳಿ ಚೀನಾದೊಂದಿಗೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ ಗಾಯಗೊಂಡ ಸೈನಿಕರನ್ನು ಯೋಗಕ್ಷೇಮವನ್ನು ವಿಚಾರಿಸಲಿದ್ದಾರೆ. ಜತೆಗೆ ಗಡಿಯಲ್ಲಿ ಸೈನಿಕ ಕಾರ್ಯಾಚರಣೆಗೆ ಸನ್ನದ್ಧಗೊಂಡಿರುವ ಸೇನೆಯನ್ನು ಪರಿಶೀಲಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಈ ಮಹತ್ವದ ಭೇಟಿಯನ್ನು ನಾನಾ ಕಾರಣಗಳಿಂದಾಗಿ ಮುಂದೂಡಲಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ