ಕೊರೋನಾ ಎಫೆಕ್ಟ್​; ಭಿನ್ನವಾಗಿ ನಡೆಯಲಿದೆ ಈ ಬಾರಿಯ ಸಂಸತ್​ ಅಧಿವೇಶನ

ರಾಜ್ಯಸಭೆಯ ಸಭಾಪತಿ ಎಂ.‌ ವೆಂಕಯ್ಯನಾಯ್ಡು ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ ಸಚಿವಾಲಯದ ಅಧಿಕಾರಿಗಳ ಜೊತೆ ಹಲವು‌ ಸುತ್ತಿನ ಮಾತುಕತೆ ನಡೆಸಿ, ಹಲವು ಸಾಧ್ಯತೆಗಳನ್ನು ಪರಿಶೀಲಿದ್ದಾರೆ. ಈ ವೇಳೆ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸುವ ನಿರ್ಧಾರಕ್ಕೆ ಬಂದಿದ್ದಾರಂತೆ. 

ಮಾನ್ಸೂನ್ ಸೆಷನ್​

ಮಾನ್ಸೂನ್ ಸೆಷನ್​

  • Share this:
ನವದೆಹಲಿ ( ಆಗಸ್ಟ್​ 8) : ಕೊರೋನಾ ಹಿನ್ನಲೆಯಲ್ಲಿ ಜನರ ಜೀವನಶೈಲಿಯೇ ಬದಲಾಗಿದೆ. ಜೊತೆಗೆ ಸರ್ಕಾರದ ಯಂತ್ರದ ಶೈಲಿ ಕೂಡ. ಇದೇ ರೀತಿ ಈಗ ಇದೇ ಮೊದಲ ಬಾರಿಗೆ ಸಂಸತ್ ಅಧಿವೇಶನವೂ ಭಿನ್ನವಾಗಿ ನಡೆಯಲಿದೆ. ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನ  ಶಿಫ್ಟ್ ಮೂಲಕ ಅಥವಾ ದಿನ ಬಿಟ್ಟು ದಿನ ನಡೆಯಲಿದೆ.

ಕೊರೊನಾ ಕಾರಣಕ್ಕೆ ಈ ಬಾರಿಯ ಸಂಸತ್ತಿನ ಮುಂಗಾರು ಅಧಿವೇಶನವನ್ನು ಹೇಗೆ ನಡೆಸಬೇಕೆಂಬ ಗೊಂದಲ ಉಂಟಾಗಿತ್ತು. ಸಂಸತ್ ಸಚಿವಾಲಯದ ಅಧಿಕಾರಿಗಳು ವರ್ಚ್ಯುಯಲ್, ಸೆಮಿ ವರ್ಚ್ಯುಯಲ್, ಬೇರೆ ಬೇರೆ ಪ್ರದೇಶಗಳಲ್ಲಿ ಸಂಸದನ್ನು ಕೂರಿಸಿ, ಕೆಲವರನ್ನು ಮಾತ್ರ ಸೇರಿಸಿಕೊಂಡು ಎಂಬ ಹಲವು ಮಾದರಿಗಳನ್ನು ನೀಡಿದ್ದರು. ಆದರೆ ಅಂತಿಮವಾಗಿ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸಲು‌ ನಿರ್ಧರಿಸಲಾಗಿದೆ ಎಂದು ಗೊತ್ತಾಗಿದೆ.

ರಾಜ್ಯಸಭೆಯ ಸಭಾಪತಿ ಎಂ.‌ ವೆಂಕಯ್ಯನಾಯ್ಡು ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸಂಸತ್ ಸಚಿವಾಲಯದ ಅಧಿಕಾರಿಗಳ ಜೊತೆ ಹಲವು‌ ಸುತ್ತಿನ ಮಾತುಕತೆ ನಡೆಸಿ, ಹಲವು ಸಾಧ್ಯತೆಗಳನ್ನು ಪರಿಶೀಲಿದ್ದಾರೆ. ಈ ವೇಳೆ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸುವ ನಿರ್ಧಾರಕ್ಕೆ ಬಂದಿದ್ದಾರಂತೆ.

ಕಡೆಯದಾಗಿ ಸಂಸತ್ ಅಧಿವೇಶನ ನಡೆದಿದ್ದು ಮಾರ್ಚ್ 23ರಂದು. ಸಂಸತ್ತಿನ ನಿಯಮಾವಳಿಗಳ ಪ್ರಕಾರ 6 ತಿಂಗಳೊಳಗೆ ಮತ್ತೆ ಅಧಿವೇಶನ ನಡೆಸಲೇಬೇಕು. ಆದುದರಿಂದ ಕೊರೊನಾ ನಡುವೆಯೂ ಸೆಪ್ಟೆಂಬರ್ 22ರೊಳಗೆ ಅಧಿವೇಶನ ನಡೆಸಲೇಬೇಕಾದ ಒತ್ತಡ ನಿರ್ಮಾಣವಾಗಿತ್ತು. ಇದೇ ಹಿನ್ನಲೆಯಲ್ಲಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಅಧಿವೇಶನ ನಡೆಸುವ ಸಾಧ್ಯತೆಗಳು ದಟ್ಟವಾಗಿವೆ.

ಇದನ್ನೂ ಓದಿ: ಕೊಡಗಿನಲ್ಲಿ ನಿಲ್ಲದ ಪ್ರವಾಹ; ಆ. 11ರವರೆಗೆ ಆರೆಂಜ್ ಅಲರ್ಟ್​ ಘೋಷಣೆ

ಸದ್ಯಕ್ಕೆ ಒಪ್ಪಿಗೆ ಸಿಕ್ಕಿರುವ ಎರಡು ಮಾದರಿಗಳ ಪೈಕಿ ಶಿಫ್ಟ್ ನಲ್ಲಿ ಎಂದರೆ ಬೆಳಿಗ್ಗೆ ಒಂದು ಸದನ ಮತ್ತು (ಲೋಕಸಭೆ ಅಥವಾ ರಾಜ್ಯಸಭೆ) ಮಧ್ಯಾಹ್ನ ಇನ್ನೊಂದು ಸದನ ನಡೆಸುವುದು. ಅಥವಾ ಒಂದು ದಿನ ಲೋಕಸಭೆ ಇನ್ನೊಂದು ದಿನ ರಾಜ್ಯಸಭಾ ಕಲಾಪ ನಡೆಸುವುದು ಎಂದು‌ ನಿರ್ಧರಿಸಲಾಗಿದೆ. ಈ ಎರಡು ಮಾದರಿ ಪೈಕಿ ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕೆಂಬ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ.

ಸಾಮಾಜಿಕ ಅಂತರ ಕಾಪಾಡಿಕೊಂಡು ಅಧಿವೇಶನ ನಡೆಸಲು ಈ ರೀತಿ ಶಿಫ್ಟ್ ಅಥವಾ ದಿನ ಬಿಟ್ಟು ದಿನ ಅಧಿವೇಶನ ನಡೆಸಲು‌ ನಿರ್ಧರಿಸಲಾಗಿದ್ದು ಇದೇ ವೇಳೆ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರಿಗೆ ಆಸನದ ವ್ಯವಸ್ಥೆಯೂ ಭಿನ್ನವಾಗಿರಲಿದೆ. 542 ಸದಸ್ಯರನ್ನು ಹೊಂದಿರುವ ಲೋಕಸಭೆಯ ಅಧಿವೇಶನ ನಡೆಸಲು 168 ಸದಸ್ಯರಿಗೆ ಲೋಕಸಭೆಯಲ್ಲಿ, ಕೆಲವರಿಗೆ ಲೋಕಸಭೆಯ ಗ್ಯಾಲರಿಯಲ್ಲಿ, ಇನ್ನು ಕೆಲವರಿಗೆ ರಾಜ್ಯಸಭೆಯಲ್ಲಿ, ಮತ್ತೆ ಕೆಲವರಿಗೆ ರಾಜ್ಯಸಭಾ ಗ್ಯಾಲರಿಯಲ್ಲಿ ಆಸನದ ವ್ಯವಸ್ಥೆ ಮಾಡಲಾಗುತ್ತದೆ‌. ಇದೇ ರೀತಿ ರಾಜ್ಯಸಭೆಯ 241 ಸದಸ್ಯರಿಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ಆಸನದ ವ್ಯವಸ್ಥೆಯನ್ನು ಮಾಡಲಾಗುತ್ತದೆ ಎನ್ನಲಾಗಿದೆ.
Published by:Rajesh Duggumane
First published: