ಭಾರತ-ಚೀನಾ ಗಡಿ ಸಂಘರ್ಷ: ಜೂ.19ಕ್ಕೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ಈ ಸಂಬಂಧ ಈಗಾಗಲೇ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಮಹತ್ವದ ಸಭೆ ನಡೆಸಿದ್ದರು. ಇಲ್ಲಿ ದೇಶದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಬೇಕೆಂದು ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ.

ಪ್ರಧಾನಿ ನರೇಂದ್ರ ಮೋದಿ.

 • Share this:
  ನವದೆಹಲಿ(ಜೂ.17): ಪೂರ್ವ ಲಡಾಕ್​​​​ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ನಡುವೆ ಸಂಭವಿಸಿದ ಸಂಘರ್ಷದಲ್ಲಿ ದೇಶದ ಕಮಾಂಡಿಂಗ್​ ಅಧಿಕಾರಿ ಸೇರಿ 20 ಮಂದಿ ಯೋಧರು ಹುತಾತ್ಮರಾಗಿದ್ಧಾರೆ. ಈ ಮಾಹಿತಿ ಖಚಿತವಾಗುತ್ತಿದಂತೆಯೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಿರೋಧ ಪಕ್ಷದ ನಾಯಕರು ಮುಗಿಬಿದ್ದಿದ್ಧಾರೆ. ಈ ಬೆನ್ನಲ್ಲೀಗ ಪ್ರಧಾನಿ ನರೇಂದ್ರ ಮೋದಿಯವರೇ ಭಾರತ-ಚೀನಾ ಗಡಿ ವಿವಾದ ಸಂಬಂಧ ಚರ್ಚಿಸಲು ಸರ್ವಪಕ್ಷಗಳ ಸಭೆ ಕರೆದಿದ್ಧಾರೆ.


  ಇದೇ ಜೂನ್​​​ 19ನೇ ತಾರೀಕಿನಂದು ಸಂಜೆ 5 ಗಂಟೆಗೆ ಭಾರತ ಮತ್ತು ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರು ಸರ್ವಪಕ್ಷಗಳ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ದೇಶದ ಪ್ರಮುಖ ಪಕ್ಷಗಳ ರಾಷ್ಟ್ರೀಯ ನಾಯಕರು ಭಾಗಿಯಾಗಲಿದ್ದಾರೆ. ಈ ವಿಚಾರವನ್ನು ಖುದ್ದು ನರೇಂದ್ರ ಮೋದಿಯವರೇ ತಮ್ಮ ಟ್ವಿಟರ್​​ ಖಾತೆ ಮೂಲಕ ಹಂಚಿಕೊಂಡಿದ್ದಾರೆ.  ಈ ಸಂಬಂಧ ಈಗಾಗಲೇ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಜೈಶಂಕರ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಭಾರತೀಯ ಸೇನೆಯ ಮುಖ್ಯಸ್ಥ ಎಂಎಂ ನರವಣೆ ಮಹತ್ವದ ಸಭೆ ನಡೆಸಿದ್ದರು. ಇಲ್ಲಿ ದೇಶದ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಬೇಕೆಂದು ನಿರ್ಧಾರ ಮಾಡಲಾಗಿತ್ತು ಎನ್ನಲಾಗಿದೆ.

  ಭಾರತ ಮತ್ತು ಚೀನಾ ನಡುವೆ ಕಾಳಗ ಏರ್ಪಟ್ಟಿದೆ. ಇಲ್ಲಿನ ಪೂರ್ವ ಲಡಾಕ್​​​ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಉಭಯ ರಾಷ್ಟ್ರಗಳ ನಡುವಿನ ಘರ್ಷಣೆಯಲ್ಲಿ ಭಾರತದ 20 ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ. ಹಾಗೆಯೇ ಭಾರತ ಸೈನಿಕರು ನಡೆಸಿದ ಪ್ರತಿದಾಳಿಯಲ್ಲಿ ಚೀನಾದ 43 ಸೈನಿಕರು ಹತರಾಗಿದ್ದಾರೆ ಎಂದು ಎಎನ್​​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

  ಇದನ್ನೂ ಓದಿ: ಸೇನಾ ಹತ್ಯಾಕಾಂಡ: ಹುತಾತ್ಮ ಯೋಧರ ಕುರಿತು ನನಗಾದ ನೋವು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ - ರಾಹುಲ್​​ ಗಾಂಧಿ

  ಇದನ್ನೂ ಓದಿ: ಚೀನಾ ವಿರುದ್ಧ ಹೋರಾಡಿ ಹುತಾತ್ಮರಾದ ಯೋಧರ ತ್ಯಾಗವನ್ನು ಎಂದೂ ಮರೆಯುವುದಿಲ್ಲ; ರಕ್ಷಣಾ ಸಚಿವ ರಾಜನಾಥ್ ಸಿಂಗ್
  First published: