ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ ಮತ್ತೊಮ್ಮೆ ಅಬ್ಬರಿಸಿದರು. ರಾಜಸ್ಥಾನ್ ರಾಯಲ್ಸ್ ನೀಡಿದ 178 ರನ್ ಟಾರ್ಗೆಟ್ ಬೆನ್ನೆತಿದ ಆರ್ಸಿಬಿ ಕೊನೆಯ ಓವರ್ನಲ್ಲಿ ರೋಚಕ ಜಯ ಸಾಧಿಸಿತು. ಒಂದು ಹಂತದಲ್ಲಿ ರಾಜಸ್ಥಾನ್ ಪರ ವಾಲಿದ್ದ ಪಂದ್ಯದ ಗತಿಯನ್ನೇ ಎಬಿಡಿ ಬದಲಿಸಿದರು. ಕೊನೆಯ ಎರಡು ಓವರ್ಗಳಲ್ಲಿ ಆರ್ಸಿಬಿಗೆ 35 ರನ್ಗಳ ಅವಶ್ಯಕತೆಯಿತ್ತು. ಆದರೆ 19ನೇ ಓವರ್ನಲ್ಲಿ ಜಯದೇವ್ ಉನಾದ್ಕಟ್ಗೆ ಹ್ಯಾಟ್ರಿಕ್ ಸಿಕ್ಸ್ ಸಿಡಿಸುವ ಮೂಲಕ ಒಟ್ಟು 25 ರನ್ಗಳನ್ನು ಕಲೆಹಾಕಿದರು. ಕೊನೆಯ ಓವರ್ನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಆರ್ಸಿಬಿ 7 ವಿಕೆಟ್ಗಳ ಜಯ ತಂದುಕೊಟ್ಟರು.
ಈ ಭರ್ಜರಿ ಇನಿಂಗ್ಸ್ನಲ್ಲಿ ಕೇವಲ 22 ಎಸೆತಗಳಲ್ಲಿ 55 ರನ್ ಬಾರಿಸುವ ಮೂಲಕ ಮತ್ತೊಮ್ಮೆ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಎಬಿಡಿ ತಮ್ಮದಾಗಿಸಿಕೊಂಡರು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಅತೀ ಹೆಚ್ಚು (23 ಬಾರಿ) ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿನಲ್ಲೇ ಉಳಿಸಿಕೊಂಡಿದ್ದಾರೆ.
ಅಲ್ಲದೆ ರಾಜಸ್ಥಾನ್ ರಾಯಲ್ಸ್ ವಿರುದ್ಧ 15 ರನ್ಗಳಿಸುವುದರೊಂದಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ 4 ಸಾವಿರ ಪೂರೈಸಿದ ಎರಡನೇ ಬ್ಯಾಟ್ಸ್ಮನ್ ಎನಿಸಿಕೊಂಡರು. ಇದಕ್ಕೂ ಮುನ್ನ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದರು.
ಇನ್ನು ಐಪಿಎಲ್ನಲ್ಲಿ ಅತೀ ವೇಗವಾಗಿ ಹೆಚ್ಚು ಅರ್ಧಶತಕ ದಾಖಲಿಸಿದ ಬ್ಯಾಟ್ಸ್ಮನ್ಗಳ ಪಟ್ಟಿಯಲ್ಲಿ ಎಬಿಡಿ ಅಗ್ರಸ್ಥಾನ ಅಲಂಕರಿಸಿದ್ದಾರೆ. 25 ಕ್ಕಿಂತ ಕಡಿಮೆ ಎಸೆತಗಳಲ್ಲಿ ಹೆಚ್ಚು ಅರ್ಧಶತಕ ಸಿಡಿಸಿದ ಬ್ಯಾಟ್ಸ್ಮನ್ಗಳಲ್ಲಿ ಡಿವಿಲಿಯರ್ಸ್ ಈಗ ಮೊದಲ ಸ್ಥಾನಕ್ಕೇರಿದ್ದಾರೆ. ಹಾಗೆಯೇ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಅವರೊಂದಿಗೆ ಅಗ್ರಸ್ಥಾನವನ್ನು ಹಂಚಿಕೊಂಡಿದ್ದಾರೆ.
ಎಬಿಡಿ ಹಾಗೂ ವಾರ್ನರ್ ಐಪಿಎಲ್ನಲ್ಲಿ 8 ಬಾರಿ 25 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಇನ್ನು ನಂತರದ ಸ್ಥಾನದಲ್ಲಿ ಕೀರನ್ ಪೊಲಾರ್ಡ್ (7), ವಿರೇಂದ್ರ ಸೆಹ್ವಾಗ್ (6), ಕ್ರಿಸ್ ಗೇಲ್ ಮತ್ತು ಧೋನಿ 5 ಬಾರಿ 25 ಎಸೆತಗಳಿಗಿಂತ ಕಡಿಮೆ ಬಾಲ್ನಲ್ಲಿ ಹಾಫ್ ಸೆಂಚುರಿ ಬಾರಿಸಿದ್ದಾರೆ. ಹೀಗೆ ಪಂದ್ಯದಿಂದ ಪಂದ್ಯಕ್ಕೆ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಆರ್ಭಟದೊಂದಿಗೆ ದಾಖಲೆಗಳು ಸೃಷ್ಟಿಯಾಗುತ್ತಿವೆ.
POINTS TABLE:
SCHEDULE TIME TABLE:
ORANGE CAP:
PURPLE CAP:
RESULT DATA:
MOST SIXES:
ಇದನ್ನೂ ಓದಿ: IPL 2020: ರಾಹುಲ್ ಸಲಹೆಗೆ ಕೊಹ್ಲಿಯ ಕೌಂಟರ್..! ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ