news18-kannada Updated:November 5, 2020, 7:16 PM IST
IPL
ಇಂಡಿಯನ್ ಪ್ರೀಮಿಯರ್ ಲೀಗ್ನ ಲೀಗ್ ಹಂತದ ಪಂದ್ಯಗಳು ಮುಗಿದಿವೆ. ಲೀಗ್ ಹಂತದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇ ಆಫ್ ಅವಕಾಶಗಿಟ್ಟಿಸಿಕೊಂಡಿದೆ. ಈ 14 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿರುವ ಆಟಗಾರರನ್ನೊಳಗೊಂಡ ಐಪಿಎಲ್ ಲೀಗ್ ಇಲೆವೆನ್ ತಂಡವನ್ನು ಆಸ್ಟ್ರೇಲಿಯಾದ ಮಾಜಿ ಸ್ಪಿನ್ನರ್ ಬ್ರಾಡ್ ಹಾಗ್ ಪ್ರಕಟಿಸಿದ್ದಾರೆ. ಆದರೆ ಈ ಬಳಗದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಟೀಮ್ನ ಕಪ್ತಾನ ಕೆಎಲ್ ರಾಹುಲ್ ಅವನ್ನು ಕೈಬಿಟ್ಟಿರುವುದು ಅಚ್ಚರಿ ತಂದಿದೆ.
ಪ್ರಸಕ್ತ ಟೂರ್ನಿಯಲ್ಲಿ ಕೆಎಲ್ ರಾಹುಲ್ 14 ಪಂದ್ಯಗಳಿಂದ 670 ರನ್ ಸಿಡಿಸಿ ರನ್ ಸರದಾರನಾಗಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಆರ್ಸಿಬಿ ನಾಯಕ ಕೊಹ್ಲಿ 460 ರನ್ ಕಲೆಹಾಕಿದ್ದಾರೆ. ಇದಾಗ್ಯೂ ಈ ಇಬ್ಬರನ್ನೂ ಹಾಗ್ ಆಯ್ಕೆ ಮಾಡಿಲ್ಲ ಯಾಕೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿದೆ. ಇನ್ನು ಈ ತಂಡದಲ್ಲಿ ಆರಂಭಿಕರಾಗಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಓಪನರ್ ಶಿಖರ್ ಧವನ್ (525 ರನ್) ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭಿಕ ಮಯಾಂಕ್ ಅಗರ್ವಾಲ್ (424 ರನ್)ಗೆ ಸ್ಥಾನ ನೀಡಲಾಗಿದೆ.
ಮೂರನೇ ಕ್ರಮಾಂಕದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಧಾರಸ್ತಂಭ ಸೂರ್ಯಕುಮಾರ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದ್ದು, ನಾಲ್ಕನೇ ಕ್ರಮಾಂಕದಲ್ಲಿ ಆರ್ಸಿಬಿಯ ಸ್ಪೋಟಕ ಬ್ಯಾಟ್ಸ್ಮನ್ ಎಬಿ ಡಿವಿಲಿಯರ್ಸ್ ಹಾಗೂ 5ನೇ ಕ್ರಮಾಂಕದಲ್ಲಿ ಕೆಕೆಆರ್ ಕಪ್ತಾನ ಇಯಾನ್ ಮೋರ್ಗನ್ ಅವರನ್ನು ಹಾಗ್ ಆರಿಸಿದ್ದಾರೆ.
ಇನ್ನು ಆಲ್ರೌಂಡರ್ ಆಗಿ ಮುಂಬೈ ಇಂಡಿಯನ್ಸ್ ತಂಡದ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದಿದ್ದು, ವೇಗದ ಬೌಲಿಂಗ್ ವಿಭಾಗದಲ್ಲಿ ರಾಜಸ್ಥಾನ್ ರಾಯಲ್ಸ್ ವೇಗಿ ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ (ಮುಂಬೈ ಇಂಡಿಯನ್ಸ್) ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೊಹಮ್ಮದ್ ಶಮಿಗೆ ಸ್ಥಾನ ನೀಡಲಾಗಿದೆ. ಹಾಗೆಯೇ ಸ್ಪಿನ್ನರ್ಗಳಾಗಿ ಸನ್ರೈಸರ್ಸ್ ಹೈದರಾಬಾದ್ ತಂಡದ ರಶೀದ್ ಖಾನ್ ಹಾಗೂ ಆರ್ಸಿಬಿಯ ಯಜುವೇಂದ್ರ ಚಹಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಬ್ರಾಡ್ ಹಾಗ್ ಅವರ ಲೀಗ್ ಹಂತದ ಬೆಸ್ಟ್ ಪ್ಲೇಯಿಂಗ್ ಇಲೆವೆನ್ ಹೀಗಿದೆ:
ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಸೂರ್ಯಕುಮಾರ್ ಯಾದವ್, ಎಬಿ ಡಿವಿಲಿಯರ್ಸ್, ಇಯಾನ್ ಮೋರ್ಗನ್, ಹಾರ್ದಿಕ್ ಪಾಂಡ್ಯ, ಜೋಫ್ರ ಆರ್ಚರ್, ರಶೀದ್ ಖಾನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಹಲ್
POINTS TABLE:
SCHEDULE TIME TABLE:
ORANGE CAP:
PURPLE CAP:
RESULT DATA:
MOST SIXES:
ಇದನ್ನೂ ಓದಿ:
IPL 2020: ಇಲ್ಲಿವರೆಗೂ ಈತ ಹೇಳಿದ ಭವಿಷ್ಯ ನಿಜವಾಗಿದೆ: ಈ ಬಾರಿ ಕಪ್ ಗೆಲ್ಲುವ ತಂಡವನ್ನೂ ತಿಳಿಸಿದ್ದಾನೆ..!
Published by:
zahir
First published:
November 5, 2020, 7:00 PM IST