IPL 2020: ಐಪಿಎಲ್​ 2020ರ ಕೊನೆಯ ಡಬಲ್ ಹೆಡರ್: ಇಂದು ಯಾವ ಪಂದ್ಯ?: ಇಲ್ಲಿದೆ ಮಾಹಿತಿ

ಇಂದು ನಡೆಯಲಿರುವ ಮತ್ತೊಂದು ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ತೂಗುಯ್ಯಲೆಯಲ್ಲಿರುವ ಪ್ಲೇಆಫ್ ಪ್ರವೇಶದ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಕೋಲ್ಕತ್ತಾ ನೈಟ್‌ರೈಡರ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಸೆಣೆಸಾಟ ನಡೆಸಲಿವೆ.

CSK vs KXIP

CSK vs KXIP

 • Share this:
  13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ನ ಕೊನೆಯ ಡಬಲ್ ಹೆಡರ್ ಪಂದ್ಯ ಇಂದು ನಡೆಯಲಿದೆ. ಅಬುಧಾಬಿಯಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಎಂ. ಎಸ್ ಧೋನಿ ಅವರ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಕೆ. ಎಲ್ ರಾಹುಲ್ ನಾಯಕತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಮುಖಾಮುಖಿ ಆಗುತ್ತಿದೆ. ಮತ್ತೊಂದು ಪಂದ್ಯ ದುಬೈನಲ್ಲಿ ಜರುಗಲಿದ್ದು ಇಯಾನ್ ಮಾರ್ಗನ್ ಅವರ ಕೋಲ್ಕತ್ತಾ ನೈಟ್ ರೈಡರ್ಸ್​ ತಂಡ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣೆಸಾಟ ನಡೆಸಲಿವೆ.

  ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಸಿಎಸ್​ಕೆಗೆ ಇದು ಔಪಚಾರಿಕ ಪಂದ್ಯವಾದರೆ, ರಾಹುಲ್ ಪಡೆ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಪ್ಲೇ ಆಫ್ ಹಂತಕ್ಕೇರಲು ಪಂಜಾಬ್​ಗೆ ಈ ಪಂದ್ಯ ನಿರ್ಣಾಯಕವಾಗಲಿದೆ. 13 ಪಂದ್ಯಗಳಿಂದ 12 ಪಾಯಿಂಟ್ಸ್ ಪಡೆದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಪಂಜಾಬ್ ಇಂದಿನ ಪಂದ್ಯ ಗೆದ್ದರಷ್ಟೇ ಸಾಲದು ಇತರ ತಂಡಗಳ ಫಲಿ​ತಾಂಶ​ಕ್ಕಾಗಿ ಕಾಯ​ಬೇ​ಕಾ​ಗು​ತ್ತದೆ.

  RCB vs SRH, IPL 2020: ಆರ್​ಸಿಬಿ ಪ್ಲೇ ಆಫ್ ಹಾದಿ ಕಠಿಣ: ಎಸ್​ಆರ್​ಹೆಚ್​ಗೆ 5 ವಿಕೆಟ್​ಗಳ ಜಯ

  ಸತತ 5 ಗೆಲುವಿನ ಬಳಿಕ ರಾಜಸ್ಥಾನ ರಾಯಲ್ಸ್ ಎದುರು ಸೋಲಿಗೆ ಶರಣಾಗಿರುವ ಪಂಜಾಬ್ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದೆ. ಆದರೆ, ಬೌಲಿಂಗ್​ನಲ್ಲಿ ಕಮಾಲ್ ಮಾಡುವ ಆಟಗಾರರು ಯಾರೂಇಲ್ಲ. ಕ್ರಿಸ್ ಗೇಲ್ ಕಳೆದ ಪಂದ್ಯದಲ್ಲಿ ಅಬ್ಬರಿಸಿ 99 ರನ್ ಸಿಡಿಸಿದ್ದರು. ಮಯಾಂಕ್ ಅಗರ್ವಾಲ್ ಇಂದಿನ ಪಂದ್ಯಕ್ಕೆ ಲಭ್ಯರಾಗುವ ಸಾಧ್ಯತೆ ಇದೆ.

  ಇತ್ತ ಯುವ ಕ್ರಿಕೆಟಿಗರಿಗೆ ಅವಕಾಶ ನೀಡುತ್ತಿರುವ ಧೋನಿ ಈ ಪಂದ್ಯದಲ್ಲೂ ಕೆಲ ಬದಲಾವಣೆಯೊಂದಿಗೆ ಕಣಕ್ಕಿಳಿಯುವುದು ಖಚಿತ. ಕಳೆದ ಪಂದ್ಯದಲ್ಲಿ ಋತುರಾಜ್ ಗಾಯಕ್ವಾಡ್ ಮಿಂಚಿದ್ದರು. ಹೀಗಾಗಿ ಪಂಜಾಬ್ ವಿರುದ್ಧವೂ ಸಿಡಿಯುವ ಕಾತುರದಲ್ಲಿದ್ದಾರೆ. ರವೀಂದ್ರ ಜಡೇಜಾ ಬ್ಯಾಟಿಂಗ್- ಬೌಲಿಂಗ್​ನಲ್ಲಿ ತಮ್ಮ ಕೈಲಾದಷ್ಟು ಪ್ರಯತ್ನ ಹಾಕುತ್ತಿದ್ದಾರೆ. ದೀಪಕ್ ಚಹಾರ್, ಇಮ್ರಾನ್ ತಾಹಿರ್ ಹಾಗೂ ಸ್ಯಾಮ್ ಕುರ್ರನ್ ಮೇಲೆ ಹೆಚ್ಚಿನ ನಿರೀಕ್ಷಿ ಇದೆ.

  ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 22 ಬಾರಿ ಮುಖಾಮುಖಿ ಆಗಿದ್ದು ಚೆನ್ನೈ ಸೂಪರ್ ಕಿಂಗ್ಸ್​ 13 ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ 9 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಇತಿಹಾಸವಿದೆ.

  ಇನ್ನೂ ಇಂದು ನಡೆಯಲಿರುವ ಮತ್ತೊಂದು ಪಂದ್ಯ ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ತೂಗುಯ್ಯಲೆಯಲ್ಲಿರುವ ಪ್ಲೇಆಫ್ ಪ್ರವೇಶದ ಆಸೆಯನ್ನು ಜೀವಂತವಾಗಿರಿಸಿಕೊಳ್ಳಲು ಕೋಲ್ಕತ್ತಾ ನೈಟ್‌ರೈಡರ್ಸ್‌ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಸೆಣೆಸಾಟ ನಡೆಸಲಿವೆ.

  ರಾಜಸ್ಥಾನ ತಂಡ 13 ಪಂದ್ಯಗಳಿಂದ 12 ಅಂಕ ಪಡೆದು ಪಾಯಿಂಟ್ಸ್ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇತ್ತ ಕೋಲ್ಕತ್ತಾ ಕೂಡ 13 ಪಂದ್ಯಗಳಿಂದ 12 ಅಂಕ ಪಡೆದು ಪಾಯಿಂಟ್ಸ್ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದ್ದು, ಉತ್ತಮ ರನ್​ರೇಟ್​ನೊಂದಿಗೆ ಪಂದ್ಯ ಗೆಲ್ಲಬೇಕಾದ ಒತ್ತಡದಲ್ಲಿದೆ.

  ಕೆಕೆಆರ್ ತಂಡದಲ್ಲಿ ನಿತೀಶ್ ರಾಣ, ನಾಯಕ ಮಾರ್ಗನ್ ಹೊರತುಪಡಿಸಿ ಯಾವುದೇ ಬ್ಯಾಟ್ಸ್​ಮನ್​ಗಳು ಮಿಂಚುತ್ತಿಲ್ಲ. ಅಲ್ಲದೆ ಕೆಕೆಆರ್ ಈ ಬಾರಿಯ ಐಪಿಎಲ್​ನಲ್ಲಿ ಹೇಳಿಕೊಳ್ಳುವಂತಹ ಉತ್ತಮ ಆರಂಭವನ್ನೂ ಪಡೆದಿಲ್ಲ. ಇಂದಿನ ಪಂದ್ಯ ಮಹತ್ವದ್ದಾಗಿದ್ದು, ಆರಂಭಿಕ ಆಟಗಾರರ ಮೇಲೆ ಹೆಚ್ಚು ಜವಾಬ್ದಾರಿ ಇದೆ. ವರುಣ್ ಚಕ್ರವರ್ತಿ ಮಾತ್ರ ಬೌಲಿಂಗ್​ನಲ್ಲಿ ಉತ್ತಮ ಸ್ಪೆಲ್ ಮಾಡುತ್ತಿದ್ದಾರೆ. ಪ್ಯಾಟ್ ಕಮ್ಮಿನ್ಸ್​, ಲೂಕಿ ಫರ್ಗ್ಯುಸನ್​, ಕಮಲೇಶ್‌ ನಾಗರಕೋಟಿ, ಸುನೀಲ್ ನರೈನ್ ಮೇಲೆ ಹೆಚ್ಚು ನಿರೀಕ್ಷೆ ಇದೆ.

  ರಾಜಸ್ಥಾನ ತಂಡ ಉತ್ತಮ ಲಯದಲ್ಲಿದ್ದು ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ. ಬೆನ್ ಸ್ಟೋಕ್ಸ್​ ಹಾಗೂ ಸಂಜು ಸ್ಯಾಮ್ಸನ್ ಫಾರ್ಮ್​ಗೆ ಬಂದಿರುವುದು ತಂಡದ ಬ್ಯಾಟಿಂಗ್ ಬಲವನ್ನು ಮತ್ತಷ್ಟು ಹೆಚ್ಚಿಸಿದೆ. ಆದರೆ, ಬೌಲಿಂಗ್​ನಲ್ಲಿ ಸಂಘಟಿತ ಪ್ರದರ್ಶನ ನೀಡುವ ಅಗತ್ಯವಿದೆ.

  ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 21 ಬಾರಿ ಮುಖಾಮುಖಿ ಆಗಿದ್ದು ಕೋಲ್ಕತ್ತಾ ನೈಟ್ ರೈಡರ್ಸ್​​ 11 ಹಾಗೂ ರಾಜಸ್ಥಾನ್ ರಾಯಲ್ಸ್ 10 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಇತಿಹಾಸವಿದೆ.
  Published by:Vinay Bhat
  First published: