CSK vs SRH| ಇಂದಿನ ಪಂದ್ಯದಲ್ಲಿ ಚೆನ್ನೈಯನ್ನು ಮಣಿಸಲಿದೆಯೇ ಗೆಲುವಿನ ಟ್ರ್ಯಾಕ್​ಗೆ ಮರಳಿರುವ ಸನರೈಸರ್ಸ್​ ಹೈದ್ರಾಬಾದ್​

ಕಳೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಜಾಸನ್ ರಾಯ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಹೊಸ ಭರವಸೆ ನೀಡಿದ್ದಾರೆ. ಅಲ್ಲದೆ, ಸನ್​ರೈಸರ್ಸ್​ ಬ್ಯಾಟಿಂಗ್​ಗೆ ಬಲವಾಗಿದ್ದಾರೆ.

ಚೆನ್ನೈ-ಹೈದ್ರಾಬಾದ್.

ಚೆನ್ನೈ-ಹೈದ್ರಾಬಾದ್.

 • Share this:
  ಕಳೆದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್​ (Rajastan Royals) ವಿರುದ್ಧ ಅದ್ದೂರಿ ಗೆಲುವು ಸಾಧಿಸುವ ಮೂಲಕ ಗೆಲುವಿನ ಟ್ರ್ಯಾಕ್​ಗೆ ಮರಳಿರುವ ಸನ್​ರೈಸರ್ಸ್​ ಹೈದ್ರಾಬಾದ್ (Sunrisers Hyderabad) ತಂಡ ಇಂದು ಮತ್ತೊಂದು ಸವಾಲಿಗೆ ಅಣಿಯಾಗಿದೆ. ಸತತ ಸೋಲಿನಿಂದ ಕಂಗೆಟ್ಟಿದ್ದ ಹೈದ್ರಾಬಾದ್​ ಕಳೆದ ಪಂದ್ಯದಲ್ಲಿ ಬೌಲರ್​ಗಳ ಉತ್ತಮ ಕೊಡುಗೆ ಮತ್ತು ಆರಂಭಿಕ ಬ್ಯಾಟ್ಸ್​ಮನ್ ಜಾಸನ್ ರಾಯ್ (Jason Roy) ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕೊನೆಗೂ ಒಂದು ಗೆಲುವು ಸಾಧಿಸಿತ್ತು. ಆದರೆ, ಎಸ್​ಆರ್​ಹೆಚ್​ (SRH) ತಂಡ ಇಂದಿನ ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಚೆನ್ನೈ ಸೂಪರ್​ ಕಿಂಗ್ಸ್​ (Chennai Super Kings) ತಂಡವನ್ನು ಎದುರುಗೊಳ್ಳಲಿದ್ದು, ಇಂದಿನ ಪಂದ್ಯದಲ್ಲೂ ಗೆಲುವು ಸಾಧಿಸಲಿದೆಯೇ? ಎಂಬ ಕುತೂಹಲ ಮನೆ ಮಾಡಿದೆ. ಇನ್ನೂ ಟೂರ್ನಿ ಆರಂಭದಿಂದಲೂ ಭರ್ಜರಿ ಫಾರ್ಮ್​ನಲ್ಲಿರುವ ಚೆನ್ನೈ ಸೂಪರ್​ ಕಿಂಗ್ಸ್​ ಇಂದಿನ ಪಂದ್ಯದಲ್ಲೂ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಲಿದೆ ಎನ್ನಲಾಗುತ್ತಿದೆ.

  ಹೊಸ ಹುಮ್ಮಸ್ಸಿನಲ್ಲಿ ಸನ್​ರೈಸರ್ಸ್​;

  ಕೇನ್ ವಿಲಿಯಮ್ಸನ್ ನೇತೃತ್ವದ ಸನ್​ರೈಸರ್ಸ್​ ಹೈದ್ರಾಬಾದ್ ತಂಡಕ್ಕೆ ಆರಂಭಿಕ ಬ್ಯಾಟ್ಸ್​ಮನ್​ಗಳ ಫಾರ್ಮ್ ದೊಡ್ಡ ತಲೆ ನೋವಾಗಿ ಪರಿಣಮಿಸಿತ್ತು. ಆಸ್ಟ್ರೇಲಿಯಾದ ಎಡಗೈ ಬ್ಯಾಟ್ಸ್​ಮನ್​ ಡೇವಿಡ್ ವಾರ್ನರ್ ಅವರ ಕಳಪೆ ಫಾರ್ಮ್ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಆದರೆ, ಇದೀಗ ವಾರ್ನರ್ ಸ್ಥಾನವನ್ನು ಇಂಗ್ಲೆಂಡ್ ತಂಡದ ಬಲಗೈ ಬ್ಯಾಟ್ಸ್​ಮನ್ ಜಾಸನ್ ರಾಯ್ ತುಂಬಿದ್ದಾರೆ.

  ಅಲ್ಲದೆ, ಕಳೆದ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ್ದ ಜಾಸನ್ ರಾಯ್ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುವ ಮೂಲಕ ಹೊಸ ಭರವಸೆ ನೀಡಿದ್ದಾರೆ. ಅಲ್ಲದೆ, ಸನ್​ರೈಸರ್ಸ್​ ಬ್ಯಾಟಿಂಗ್​ಗೆ ಬಲವಾಗಿದ್ದಾರೆ. ಇವರ ಜೊತೆಗೆ ಕೇನ್ ವಿಲಿಯಮ್ಸನ್ ಮತ್ತು ಜಾಸನ್ ಹೋಲ್ಡರ್​ ಸಹ ಉತ್ತಮ ಪ್ರದರ್ಶನ ನೀಡಿದರೆ ಹೈದ್ರಾಬಾದ್ ತಂಡ ದೊಡ್ಡ ಮತ್ತ ಪೇರಿಸುವುದರಲ್ಲಿ ಯಾವುದೇ ಸಂದೇಹ ಇಲ್ಲ. ಇನ್ನೂ ಭುವನೇಶ್ವರ್ ಕುಮಾರ್, ರಶೀದ್ ಖಾನ್ ಅವರನ್ನು ಹೊಂದಿರುವ ಸನ್​ರೈಸರ್ಸ್​ ಹೈದ್ರಾಬಾದ್ ಬೌಲಿಂಗ್ ಪಡೆ ಬಲಿಷ್ಠವಾಗಿಯೇ ಇದೆ ಎಂಬುದರಲ್ಲಿ ಎರಡು ಮಾತಿಲ್ಲ.

  ಚೆನ್ನೈ ತಂಡಕ್ಕೆ ಮರಳುತ್ತಾರಾ ಬ್ರಾವೋ?

  ಮೂರು ಬಾರಿ ಐಪಿಎಲ್ ಪ್ರಶಸ್ತಿ ಗೆದ್ದಿರುವ ಚೆನ್ನೈ ಅತ್ಯಂತ ಬಲಿಷ್ಠ ತಂಡ. ಈ ವರ್ಷದ ಟೂರ್ನಿಯಲ್ಲೂ ಸಹ ಚೆನ್ನೈ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದೆ. ಆರಂಭಿಕರಾಗಿ ಫಾಪ್ ಡುಪ್ಲೆಸಿಸ್ ಮತ್ತು ರಿತುರಾಜ್ ಗಾಯಕ್ವಾಡ್ ಅದ್ಬುತ ಪ್ರದರ್ಶ ನೀಡುತ್ತಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಮೋಯಿನ್ ಅಲಿ, ಸುರೇಶ್ ರೈನಾ, ರವೀಂದ್ರ ಜಡೇಜಾ ಮತ್ತು ನಾಯಕ ಎಂಎಸ್ ಧೋನಿ ತಂಡದ ಆಸ್ತಿ.

  ಇದನ್ನೂ ಓದಿ: IPL Dream 11| ಐಪಿಎಲ್ ಡ್ರೀಮ್ 11 ಫ್ಯಾಂಟಸಿ ಆಟದಲ್ಲಿ 1 ಕೋಟಿ ರೂ. ಗೆದ್ದ ಬಿಹಾರದ ಮಧುಬನಿ ಜಿಲ್ಲೆಯ ಕ್ಷೌರಿಕ!

  ಬೌಲಿಂಗ್​ ವಿಭಾಗದಲ್ಲೂ ಚೆನ್ನೈ ತಂಡ ಸಾಕಷ್ಟು ಬಲಿಷ್ಠವಾಗಿಯೇ ಇದೆ. ಇನ್ನೂ ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಆಲ್​ರೌಂಡರ್​ ಡ್ವೇನ್ ಬ್ರಾವೋ  ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗುತ್ತಿದೆ. ಒಂದು ವೇಳೆ ಅವರು ಕಣಕ್ಕಿಳಿದರೆ ಚೆನ್ನೈ ಮತ್ತಷ್ಟು ಬಲಿಷ್ಠವಾಗಲಿದೆ ಎಂಬುದರಲ್ಲಿ ಎರಡು ಮಾತಿಲ್ಲ.

  ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರು ಕೈ ಜೋಡಿಸಬೇಕು. ಲಾಕ್​​ಡೌನ್​ ನಿಯಮಗಳನ್ನು ಕಟ್ಟುನಿಟ್ಟಿನಿಂದ ಪಾಲಿಸಿ ಸೋಂಕಿನಿಂದ ತಮ್ಮನ್ನು ತಾವು ಕಾಪಾಡಿಕೊಳ್ಳುವ ಪ್ರತಿಜ್ಞೆ ತೆಗೆದುಕೊಳ್ಳಬೇಕು. ನಾವು ಸುರಕ್ಷಿತವಾಗಿ ಇದ್ದು, ನಮ್ಮಿಂದ ಇತರರಿಗೆ ಸೋಂಕು ಹಬ್ಬದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು.
  Published by:MAshok Kumar
  First published: