DC vs MI Prediction: ಮುಂಬೈ-ಡೆಲ್ಲಿ ನಡುವೆ ಮೊದಲ ಕ್ವಾಲಿಫೈಯರ್: ಗೆದ್ದ ತಂಡ ಫೈನಲ್​ಗೆ ಎಂಟ್ರಿ

ಬೌಲಿಂಗ್​ನಲ್ಲಿ ಜಸ್​ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್ ಬಿಟ್ಟರೆ ಮತ್ಯಾರು ಅಷ್ಟೊಂದು ವಿಕೆಟ್ ಟೇಕರ್ ಆಗಿ ಗೋಚರಿಸುತ್ತಿಲ್ಲ. ಕಳೆದ ಪಂದ್ಯದಲ್ಲಿ ಇವರಿಬ್ಬರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಮುಂಬೈಗೆ ಹೈದರಾಬಾದ್​ನ ಒಂದೂ ವಿಕೆಟ್ ಕೀಳಲು ಸಾಧ್ಯವಾಗಲಿಲ್ಲ.

5ನೇ ಬಾರಿ ಟ್ರೋಫಿ ಗೆಲ್ಲುವ ಹಂಬಲದಲ್ಲಿ ಮುಂಬೈ ಇದ್ದರೆ, ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿರುವ ಡೆಲ್ಲಿ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕುವ ಇರಾದೆ ಹೊಂದಿದೆ. ಹೀಗಾಗಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

5ನೇ ಬಾರಿ ಟ್ರೋಫಿ ಗೆಲ್ಲುವ ಹಂಬಲದಲ್ಲಿ ಮುಂಬೈ ಇದ್ದರೆ, ಇದೇ ಮೊದಲ ಬಾರಿ ಫೈನಲ್ ಪ್ರವೇಶಿಸಿರುವ ಡೆಲ್ಲಿ ಚೊಚ್ಚಲ ಟ್ರೋಫಿಗೆ ಮುತ್ತಿಕ್ಕುವ ಇರಾದೆ ಹೊಂದಿದೆ. ಹೀಗಾಗಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.

 • Share this:
  ದುಬೈ (ನ. 05): 13ನೇ ಆವೃತ್ತಿಯ ಐಪಿಎಲ್​ನಲ್ಲಿಂದು ಮಹತ್ವದ ಮೊದಲ ಕ್ವಾಲಿಫೈಯರ್ ಪಂದ್ಯ ನಡೆಯಲಿದೆ. ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಮುಖಾಮುಖಿ ಆಗಲಿದ್ದು, ಗೆದ್ದ ಟೀಂ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

  ಮುಂಬೈ ಲೀಗ್​ನಲ್ಲಿ ಒಟ್ಟು 14 ಪಂದ್ಯವನ್ನಾಡಿದೆ. 9 ರಲ್ಲಿ ಗೆದ್ದು 5 ಪಂದ್ಯದಲ್ಲಿ ಸೋಲು ಅನುಭವಿಸಿದೆ. ಅಂಕಪಟ್ಟಿಯಲ್ಲಿ ಒಟ್ಟು 18 ಅಂಕ ಗಳಿಸಿ ಅಗ್ರಸ್ಥಾನಿಯಾಗಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್​ ಲೀಗ್​ನಲ್ಲಿ ಒಟ್ಟು 14 ಪಂದ್ಯವನ್ನಾಡಿದೆ. 8 ಪಂದ್ಯದಲ್ಲಿ ಗೆದ್ದರೆ 6 ಪಂದ್ಯದಲ್ಲಿ ಸೋಲು ಅನುಭವಿಸಿದೆ. ಒಟ್ಟು 16 ಅಂಕ ಗಳಿಸಿದ ಟಾಪ್​ ಸೆಕೆಂಡ್​ ತಂಡ.

  Happy Birthday Virat Kohli: ವಿರಾಟ್ ಕೊಹ್ಲಿ​ ಅಬ್ಬರಿಸಿದ ಈ ಐದು ಪಂದ್ಯಗಳನ್ನು ಯಾರೂ ಮರೆಯುವಂತಿಲ್ಲ

  ಮುಂಬೈ ಕಳೆದ ಪಂದ್ಯದಲ್ಲಿ ಸನ್‌ರೈಸರ್ಸ್ ವಿರುದ್ಧ 10 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತ್ತು. ಇದರ ಹೊರತಾಗಿಯೂ ಪಾಯಿಂಟ್ಸ್‌ ಟೇಬಲ್‌ನಲ್ಲಿ ಮೊದಲನೇ ಸ್ಥಾನದಲ್ಲಿಯೇ ಉಳಿದಿತ್ತು. ಇನ್ನೂ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಕಳೆದ ಪಂದ್ಯದಲ್ಲಿ ಜಯಿಸಿದ್ದ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ಸ್ ಟೇಬಲ್​ನಲ್ಲಿ‌ ಎರಡನೇ ಸ್ಥಾನದೊಂದಿಗೆ ಮುಂಬೈ ಇಂಡಿಯನ್ಸ್ ವಿರುದ್ಧ ಸೆಣಸಲು ಸಜ್ಜಾಗಿದೆ.

  ಮುಂಬೈಗೆ ನಾಯಕ ರೋಹಿತ್ ಶರ್ಮಾ ತಂಡಕ್ಕೆ ಕಮ್​ಬ್ಯಾಕ್ ಮಾಡಿದ್ದು ಬ್ಯಾಟಿಂಗ್ ಬಲ ಇನ್ನಷ್ಟು ಹೆಚ್ಚಿಸಿದೆ. ಆದರೆ, ಕಳೆದ ಪಂದ್ಯದಲ್ಲಿ ಬೇಗನೆ ನಿರ್ಗಮಿಸಿದ್ದರು. ಕ್ವಿಂಟನ್ ಡಿಕಾಕ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ ಹಾಗೂ ಕೀರೊನ್ ಪೊಲಾರ್ಡ್​ ಭರ್ಜರಿ ಫಾರ್ಮ್​ನಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ವಿಶ್ರಾಂತಿ ಬಳಿಕ ಇಂದು ಕಣಕ್ಕಿಳಿಯಲಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಮುಂಬೈಗೆ ಯಾವುದೇ ತಲೆನೋವಿಲ್ಲ.

  ಆದರೆ, ಬೌಲಿಂಗ್​ನಲ್ಲಿ ಜಸ್​ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್ ಬಿಟ್ಟರೆ ಮತ್ಯಾರು ಅಷ್ಟೊಂದು ವಿಕೆಟ್ ಟೇಕರ್ ಆಗಿ ಗೋಚರಿಸುತ್ತಿಲ್ಲ. ಕಳೆದ ಪಂದ್ಯದಲ್ಲಿ ಇವರಿಬ್ಬರಿಗೆ ವಿಶ್ರಾಂತಿ ನೀಡಲಾಗಿತ್ತು. ಹೀಗಾಗಿ ಮುಂಬೈಗೆ ಹೈದರಾಬಾದ್​ನ ಒಂದೂ ವಿಕೆಟ್ ಕೀಳಲು ಸಾಧ್ಯವಾಗಲಿಲ್ಲ. ರಾಹುಲ್ ಚಹಾರ್ ಸ್ಪಿನ್ ಮೋಡಿ ಇನ್ನಷ್ಟು ಕೆಲಸಮಾಡಬೇಕಿದೆ.

  Womens T20 Challenge 2020: ಸುಷ್ಮಾ-ಸೂನೆ ಮಿಂಚಿಂಗ್: ಸೂಪರ್​ ನೋವಾಸ್ ವಿರುದ್ಧ ಗೆದ್ದು ಬೀಗಿದ ವೆಲಾಸಿಟಿ

  ಇತ್ತ ಡೆಲ್ಲಿಗೆ ಪೃಥ್ವಿ ಶಾ ಕಳಪೆ ಬ್ಯಾಟಿಂಗ್ ತಲೆನೋವಾಗಿ ಪರಿಣಮಿಸಿದೆ. ಶಿಖರ್ ಧವನ್ ಹಾಗೂ ಅಜಿಂಕ್ಯಾ ರಹಾನೆ ಫಾರ್ಮ್​ಗೆ ಮರಳಿರುವುದು ಸಂತಸದ ಸಂಗತಿ. ಆದರೆ, ಕಳೆದ ಕೆಲವು ಪಂದ್ಯಗಳಿಂದ ನಾಯಕ ಅಯ್ಯರ್, ರಿಷಭ್ ಪಂತ್ ಹಾಗೂ ಮಾರ್ಕಸ್ ಸ್ಟಾಯಿನಿಸ್ ನಿರೀಕ್ಷೆಗೆ ತಕ್ಕಂತೆ ಬ್ಯಾಟ್ ಬೀಸುತ್ತಿಲ್ಲ.

  ಕ್ಯಾಪಿಟಲ್ಸ್ ಬೌಲಿಂಗ್​ ಪಡೆ ಉತ್ತಮವಾಗಿದೆ. ಕಗಿಸೊ ರಬಾಡ, ನೋರ್ಟ್ಜೆ, ಅಕ್ಷರ್​​ ಪಟೇಲ್, ಆರ್. ಅಶ್ವಿನ್  ​ ಎದುರಾಳಿಗಳನ್ನು ಕಟ್ಟಿಹಾಕುವ ಸಾಮರ್ಥ್ಯ ಹೊಂದಿದ್ದಾರೆ. ಇಂದಿನ ಪಂದ್ಯದಲ್ಲಿ ಗೆಲುವು ಸಾಧಿಸಿದ ತಂಡ 2020ರ ಇಂಡಿಯನ್ ಪ್ರೀಮಿಯರ್​ ಲೀಗ್​ನ ಫೈನಲ್​ ಹಂತಕ್ಕೆ ಎಂಟ್ರಿ ಕೊಡಲಿದೆ.

  ಉಭಯ ತಂಡಗಳು ಐಪಿಎಲ್ ಇತಿಹಾಸದಲ್ಲಿ ಈವರೆಗೆ26 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಮುಂಬೈ ಇಂಡಿಯನ್ಸ್ 14 ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.
  Published by:Vinay Bhat
  First published: