ಇಂಡಿಯನ್ ಪ್ರೀಮಿಯರ್ ಲೀಗ್ ಮುಂದೂಡಲ್ಪಟ್ಟಿದ್ದರಿಂದ ಆಸ್ಟ್ರೇಲಿಯಾ ಆಟಗಾರರು ಹಾಗೂ ಕೋಚಿಂಗ್ ಸಿಬ್ಬಂದಿಗಳು ಭಾರತದಿಂದ ಮಾಲ್ಡೀವ್ಸ್ಗೆ ತೆರಳಿದ್ದರು. ಭಾರತದಿಂದ ಆಸ್ಟ್ರೇಲಿಯಾಗೆ ವಿಮಾನಯಾನ ರದ್ದುಗೊಳಿಸಿದ್ದರಿಂದ ಐಪಿಎಲ್ನಲ್ಲಿ ಕಾಣಿಸಿಕೊಂಡಿದ್ದ ಆಸೀಸ್ ಆಟಗಾರರು, ಕೋಚ್, ಕಾಮೆಂಟೇಟರ್ಸ್ ಮಾಲ್ಡೀವ್ಸ್ನಲ್ಲಿ ಕ್ವಾರಂಟೈನ್ ಮುಗಿಸಿ ಆಸ್ಟ್ರೇಲಿಯಾಗೆ ತೆರಳಲಿದ್ದಾರೆ.
ಈ ನಡುವೆ ಭಾರತದಿಂದ ಮಾಲ್ಡೀವ್ಸ್ಗೆ ತೆರಳಿದ ಆಸ್ಟ್ರೇಲಿಯನ್ನರು ಇಬ್ಬರು ಬಾರ್ವೊಂದರಲ್ಲಿ ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಸನ್ ರೈಸರ್ಸ್ ತಂಡದ ಮಾಜಿ ನಾಯಕ ಡೇವಿಡ್ ವಾರ್ನರ್ ಮತ್ತು ಆಸ್ಟ್ರೇಲಿಯಾದ ಐಪಿಎಲ್ ಕಾಮೆಂಟೇಟರ್ ಮೈಕಲ್ ಸ್ಲೇಟರ್ ಕೈ ಕೈ ಮಿಲಾಯಿಸಿದ್ದಾರೆ ಎಂಬ ಸುದ್ದಿ ಭಾರಿ ಸದ್ದು ಮಾಡುತ್ತಿದೆ.
ಬಾರ್ನಲ್ಲಿ ಮಾತುಕತೆ ನಡುವೆ ವಾಗ್ವಾದ ಉಂಟಾಗಿದ್ದು, ಈ ವೇಳೆ ವಾರ್ನರ್-ಸ್ಲೇಟರ್ ಹೊಡೆದಾಡಿಕೊಂಡಿದ್ದಾರೆ. ತಕ್ಷಣವೇ ಸಿಬ್ಬಂದಿಗಳು ಹಾಗೂ ಜೊತೆಗಿದ್ದರು ಜಗಳವನ್ನು ನಿಯಂತ್ರಿಸಿದ್ದಾರೆ ಎಂದು ಹೇಳಲಾಗಿದೆ. ಈ ಸುದ್ದಿ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ