ಐಪಿಎಲ್ 2022ರ (IPL 2022) 42ನೇ ಪಂದ್ಯದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ (RCB vs GT) ತಂಡಗಳು ಮುಖಾಮುಖಿಯಾಗಿವೆ. ಟಾಸ್ (Toss) ಗೆದ್ದ ಆರ್ಸಿಬಿ (RCB) ಬ್ಯಾಟಿಂಗ್ ಆಯ್ದುಕೊಂಡಿತ್ತು. ಎಲ್ಲಾ ಪಂದ್ಯಗಳಲ್ಲೂ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿತ್ತು. ಈ ಟ್ರೆಂಡ್ ಫಾಲೋ ಮಾಡದ ಆರ್ಸಿಬಿ ಬ್ಯಾಟಿಂಗ್ ಆಯ್ದುಕೊಂಡಿತ್ತು. ಓಪನಿಂಗ್ ಬ್ಯಾಟಿಂಗ್ ಮಾಡಲು ಬಂದಿದ್ದ ವಿರಾಟ್ ಕೊಹ್ಲಿ (Virat Kohli) ಕೊನೆಗೂ ಕಮ್ ಬ್ಯಾಕ್ ಮಾಡಿದ್ದಾರೆ. ಮಿಂಚಿನ ಅರ್ಧಶತಕ ಸಿಡಿಸಿದ್ದಾರೆ. ಈ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ಮರಳಿ ಫಾರ್ಮ್ಗೆ ಬಂದಿದ್ದಾರೆ. ಆರಂಭಿಕರಾಗಿ ಕಣಕ್ಕಿಳಿದ ಕೊಹ್ಲಿ ಈ ಸೀಸನ್ ಮೊದಲ ಮೊದಲ ಅರ್ಧ ಶತಕ ಬಾರಿಸಿದ್ದಾರೆ.
ಕಿಂಗ್ ಕೊಹ್ಲಿಗೆ ಸಾಥ್ ಕೊಟ್ಟ ರಜತ್!
ವಿರಾಟ್ ಕೊಹ್ಲಿ 53 ಬಾಲ್ಗಳಲ್ಲಿ 58ರನ್ ಸಿಡಿಸಿ ಔಟ್ ಆದರು. 6 ಫೋರ್ ಹಾಗೂ ಒಂದು ಸಿಕ್ಸರ್ ಬಾರಿಸುವ ಮೂಲಕ ಫಾರ್ಮ್ಗೆ ಮರಳಿದ್ದಾರೆ. ಇನ್ನೂ ವಿರಾಟ್ ಜೊತೆ ಇನ್ನಿಂಗ್ಸ್ ಆರಂಭಿಸದ ನಾಯಕ ಫಾಪ್ ಡು ಪ್ಲೆಸಿಸ್ ಹೆಚ್ಚು ಹೊತ್ತು ಸ್ಕ್ರೀಜ್ನಲ್ಲಿ ನಿಲ್ಲಲಿಲ್ಲ. ಡಕ್ ಔಟ್ ಆಗಿ ಫಾಪ್ ಡು ಪ್ಲೆಸಿಸ್ ಪೆವಿಲಿಯನ್ ಸೇರಿಕೊಂಡರು. ಫಾಫ್ ಔಟಾದ ಬಳಿಕ ಸ್ಕ್ರೀಜ್ಗೆ ಬಂದಿದ್ದ ರಜತ್ ಪಟಿದರ್ ಆಕರ್ಷಕ ಆಟ ಪ್ರದರ್ಶಿಸಿದ್ದಾರೆ. ಒಂದು ಕಡೆ ವಿರಾಟ್ ಗುಜರಾತ್ ಟೈಟನ್ಸ್ ಬೌಲರ್ಗಳಿಗೆ ಬೆವರಿಳಿಸುತ್ತಿದ್ದರೆ, ಇತ್ತ ರಜತ್ ಕೂಡ ಬೌಲರ್ಗಳಿಗೆ ಕಾಟ ಕೊಟ್ಟರು. 32 ಬಾಲ್ಗಳಲ್ಲಿ 52 ರನ್ಗಳಿಸಿ ರಜತ್ ಆರ್ಸಿಬಿ ತಂಡಕ್ಕೆ ನೆರವಾದರು.
ಸವಾಲಿನ ಗುರಿ ನೀಡಿದ ಆರ್ಸಿಬಿ!
ಕಿಂಗ್ ಕೊಹ್ಲಿ ಕೊನೆಗೂ ಫಾರ್ಮ್ಗೆ ಮರಳುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದು ತುದಿಯಲ್ಲಿ ಯುವ ಪ್ರತಿಭಾನ್ವಿಯ ಬ್ಯಾಟರ್ ರಜತ್ ಪಾಟೀದರ್ (Rajat Patidar) ಬಾರಿಸಿದ ಆಕರ್ಷಕ ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವು 6 ವಿಕೆಟ್ ಕಳೆದುಕೊಂಡು 170 ರನ್ ಬಾರಿಸಿದ್ದು. ಗೆಲ್ಲಲು ಗುಜರಾತ್ ಟೈಟಾನ್ಸ್ (Gujarat Titans) ತಂಡಕ್ಕೆ ಸವಾಲಿನ ಗುರಿ ನೀಡಿದೆ.
ಇದನ್ನೂ ಓದಿ: ಬಲಿಷ್ಠ ರಾಜಸ್ಥಾನ್ ತಂಡಕ್ಕೆ ಮುಂಬೈ ಸವಾಲ್, ಹೇಗಿದೆ ಉಭಯ ತಂಡಗಳ ಬಲಾಬಲ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11
ಫಾಫ್ ಡು ಪ್ಲೆಸಿಸ್(ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟೀದರ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರಾರ್, ದಿನೇಶ್ ಕಾರ್ತಿಕ್, ಶಾಬಾಜ್ ಅಹಮ್ಮದ್, ಹರ್ಷಲ್ ಪಟೇಲ್, ವನಿಂದು ಹಸರಂಗ, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್ವುಡ್.
ಇದನ್ನೂ ಓದಿ: ಆರೆಂಜ್ ಕ್ಯಾಪ್ ರೇಸ್ನಲ್ಲಿ ನಾಲ್ವರು ಭಾರತೀಯರು, ಯಾರಿಗೆ ಒಲಿಯಲಿದೆ ಈ ಬಾರಿಯ ಅದೃಷ್ಟ?
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11
ವೃದ್ದಿಮಾನ್ ಸಾಹ, ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ (ನಾಯಕ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಸಾಯಿ ಸುದರ್ಶನ್, ಅಲ್ಜಾರಿ ಜೋಸೆಫ್, ಲಾಕಿ ಫಗ್ರ್ಯೂಸನ್, ಮೊಹಮ್ಮದ್ ಶಮಿ, ಪ್ರದೀಪ್ ಸಂಗ್ವಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ