ಐಪಿಎಲ್ನ ಬಲಿಷ್ಠ ತಂಡವೆಂದೇ ಖ್ಯಾತಿ ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಎದುರಾಗಿದ್ದ ಕಂಟಕಗಳು ಒಂದೊಂದೇ ನಿವಾರಣೆಯಾಗುತ್ತಿದೆ. 13ನೇ ಆವೃತ್ತಿಯ ಟೂರ್ನಿಯನ್ನು ಭರ್ಜರಿಯಾಗಿಯೇ ಆರಂಭಿಸಿದ್ದ ಸಿಎಸ್ಕೆ ನಂತರದ ಎರಡು ಪಂದ್ಯಗಳಲ್ಲಿ ಸೋಲನುಭವಿಸಿತ್ತು. ಇದಕ್ಕೆ ಒಂದು ಕಾರಣ ತಂಡದ ಪ್ರಮುಖ ಬ್ಯಾಟ್ಸ್ಮನ್ನ ಅಲಭ್ಯತೆ. ಹೌದು, ಮುಂಬೈ ವಿರುದ್ಧದ ಮೊದಲ ಪಂದ್ಯದಲ್ಲಿ ಅಂಬಾಟಿ ರಾಯುಡು 48 ಎಸೆತಗಳಲ್ಲಿ 71 ರನ್ ಬಾರಿಸಿ ತಂಡಕ್ಕೆ ನೆರವಾಗಿದ್ದರು. ಆ ಬಳಿಕ ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದರು.
ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ರಾಯುಡು ಕಣಕ್ಕಿಳಿದಿರಲಿಲ್ಲ. ಈ ಅನುಪಸ್ಥಿತಿಯ ಪರಿಣಾಮ ಸಿಎಸ್ಕೆ 16 ರನ್ಗಳಿಂದ ಸೋಲುಂಡಿತು. ಇನ್ನು 3ನೇ ಪಂದ್ಯದಲ್ಲೂ ಧೋನಿ ಪಡೆ 44 ರನ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪರಾಜಯಗೊಂಡಿತು. ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ವೈಫಲ್ಯವೇ ಎರಡೂ ಪಂದ್ಯಗಳ ಸೋಲಿಗೆ ಮುಖ್ಯ ಕಾರಣವಾಯಿತು.
ಆದರೆ ಇದೀಗ ನಾಲ್ಕನೇ ಪಂದ್ಯಕ್ಕೆ ಅಂಬಾಟಿ ರಾಯುಡು ಫುಲ್ ಫಿಟ್ ಆಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಅ.2 ರಂದು ನಡೆಯಲಿರುವ ಪಂದ್ಯದಲ್ಲಿ ರಾಯುಡು ಕಣಕ್ಕಿಳಿಯುವುದು ಬಹುತೇಕ ಖಚಿತ. ಮೊಣಕಾಲು ನೋವಿನಿಂದ ಚೇತರಿಸಿಕೊಂಡಿರುವ ಸಿಎಸ್ಕೆ ಬ್ಯಾಟ್ಸ್ಮನ್ ನೆಟ್ನಲ್ಲಿ ಬ್ಯಾಟಿಂಗ್-ಫೀಲ್ಡಿಂಗ್ ಅಭ್ಯಾಸ ಪ್ರಾರಂಭಿಸಿದ್ದಾರೆ. ಹೀಗಾಗಿ ಎಸ್ಆರ್ಹೆಚ್ ವಿರುದ್ಧ ಚೆನ್ನೈ ಪಾಳಯದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಇನ್ನು ಗಾಯದ ಕಾರಣದಿಂದ ಮೊದಲ ಮೂರು ಪಂದ್ಯಗಳಿಂದ ಹೊರಗುಳಿದಿದ್ದ ವಿಂಡೀಸ್ ಆಲ್ರೌಂಡರ್ ಡ್ವೇನ್ ಬ್ರಾವೊ ಕೂಡ ಚೇತರಿಸಿಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಬ್ರಾವೊ ಕೂಡ ನೆಟ್ನಲ್ಲಿ ಅಭ್ಯಾಸ ಪ್ರಾರಂಭಿಸಿದ್ದು, ಹೀಗಾಗಿ ಮುಂದಿನ ಪಂದ್ಯಕ್ಕೆ ಲಭ್ಯವಿರಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಸನ್ರೈಸರ್ಸ್ ವಿರುದ್ಧದ 2 ಬದಲಾವಣೆಯೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ಕಣಕ್ಕಿಳಿಯುವುದು ಬಹುತೇಕ ಖಚಿತ. ಈ ಮೂಲಕ ತಮ್ಮ ಜಯದ ಲಯಕ್ಕೆ ಮರಳಲು ಧೋನಿಯ ಯೆಲ್ಲೋ ಆರ್ಮಿ ಸಕಲ ರೀತಿಯಲ್ಲೂ ಸನ್ನದ್ಧವಾಗುತ್ತಿದೆ.
POINTS TABLE:
SCHEDULE TIME TABLE:
ORANGE CAP:
PURPLE CAP:
RESULT DATA:
MOST SIXES:
KL Rahul: ಕನ್ನಡಿಗನ ಕಮಾಲ್: ಸಿಡಿಲಬ್ಬರದ ಒಂದು ಸೆಂಚುರಿಗೆ 8 ದಾಖಲೆಗಳು ಉಡೀಸ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ