ದುಬೈ (ಅ. 10): 13ನೇ ಆವೃತ್ತಿಯ ಐಪಿಎಲ್ನ 25ನೇ ಪಂದ್ಯ ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 4 ವಿಕೆಟ್ ಕಳೆದುಕೊಂಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿರುವ ಆರ್ಸಿಬಿ ಆರಂಭದಲ್ಲೇ ಆ್ಯರೋನ್ ಫಿಂಚ್ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ದೀಪಕ್ ಚಹಾರ್ ಬೌಲಿಂಗ್ನಲ್ಲಿ ಫಿಂಚ್(2) ಬೌಲ್ಡ್ ಆದರು. ಆದರೆ, ಎರಡನೇ ವಿಕೆಟ್ಗೆ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಉತ್ತಮ ಆಟ ಪ್ರದರ್ಶಿಸಿದರು.
ಈ ಜೋಡಿ ಅರ್ಧಶತಕದ ಜೊತೆಯಾಟ ಆಡಿತು. ಆದರೆ, 11ನೇ ಓವರ್ನಲ್ಲಿ ಪಡಿಕ್ಕಲ್ 34 ಎಸೆತಗಳಲ್ಲಿ 33 ರನ್ ಗಳಿಸಿದ್ದಾಗ ಔಟ್ ಆಗಿ ಶಾಕ್ ನೀಡಿದರು. ಬಂದ ಬೆನ್ನಲ್ಲೇ ಎಬಿ ಡಿವಿಲಿಯರ್ಸ್ ಶೂನ್ಯಕ್ಕೆ ಔಟ್ ಆಗಿದ್ದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿತು. ವಾಷಿಂಗ್ಟನ್ ಸುಂದರ್ 10 ರನ್ಗೆ ಬ್ಯಾಟ್ ಕೆಳಗಿಟ್ಟರು.
ಸದ್ಯ ಕೊಹ್ಲಿ ಹಾಗೂ ಶಿವಂ ದುಬೆ ಕ್ರೀಸ್ನಲ್ಲಿದ್ದಾರೆ.
ಇಂದಿನ ಪಂದ್ಯಕ್ಕೆ ಆರ್ಸಿಬಿ ತಂಡದಲ್ಲಿ ಎರಡು ಮಹತ್ವದ ಬದಲಾವಣೆ ಮಾಡಲಾಗಿದ್ದು ಆಲ್ರೌಂಡರ್ ಕ್ರಿಸ್ ಮೊರೀಸ್ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ಗುರುಕೀರತ್ ಮನ್ಸಿಂಗ್ ಕೂಡ ಆಡುವ ಬಳಗದಲ್ಲಿ ಸ್ಥಾಬ ಪಡೆದುಕೊಂಡಿದ್ದಾರೆ. ಮೊಯೀನ್ ಅಲಿ ಮತ್ತು ಮೊಹಮ್ಮದ್ ಸಿರಾಜ್ ತಂಡದಿಂದ ಹೊರಗುಳಿದಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ವಿ.ಕೀ), ಶಿವಂ ದುಬೆ, ಗುರುಕೀರತ್ ಮನ್ ಸಿಂಗ್, ಕ್ರಿಸ್ ಮೊರೀಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವದೀಪ್ ಸೈನಿ, ಯಜುವೇಂದ್ರ ಚಾಹಲ್.
ಇತ್ತ ಸಿಎಸ್ಕೆ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು ಕೇದರ್ ಜಾಧವ್ ಬದಲು ಜಗದೀಶನ್ ಸ್ಥಾನ ಪಡೆದುಕೊಂಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್: ಶೇನ್
ವ್ಯಾಟ್ಸನ್,
ಫಾಪ್ ಡುಪ್ಲೆಸಿಸ್, ಅಂಬಟಿ ರಾಯುಡು, ಎಂಎಸ್
ಧೋನಿ (
ನಾಯಕ,
ವಿಕೆಟ್
ಕೀಪರ್),
ಎನ್. ಜಗದೀಶನ್, ಡ್ವೇನ್ ಬ್ರಾವೋ, ರವೀಂದ್ರ ಜಡೇಜಾ,
ಸ್ಯಾಮ್ ಕುರ್ರನ್, ದೀಪಕ್
ಚಹರ್,
ಶಾರ್ದೂಲ್ ಠಾಕೂರ್, ಕರ್ಣ್ ಶರ್ಮಾ.
ಹಿಂದಿನ ಪಂದ್ಯಗಳಲ್ಲಿ ಸೋಲನುಭವಿಸಿರುವ ಉಭಯ ತಂಡಗಳು ಗೆಲುವಿನ ಲಯಕ್ಕೆ ಮರಳಲು ಈ ಪಂದ್ಯ ಮುಖ್ಯವಾಗಿದೆ. ಹೀಗಾಗಿ ಹೈವೋಲ್ಟೇಜ್ ಪಂಧ್ಯ ನಿರೀಕ್ಷಿಸಲಾಗಿದೆ. ಟೂರ್ನಿ ಇತಿಹಾಸದಲ್ಲಿ ಸಿಎಸ್ಕೆ ತಂಡವೇ ಇದುವರೆಗೆ ಮೇಲುಗೈ ಸಾಧಿಸುತ್ತ ಬಂದಿದೆ. ಆದರೆ ಹಾಲಿ ಫಾರ್ಮ್ನಲ್ಲಿ ಆರ್ಸಿಬಿ ತಂಡವೇ ಫೇವರಿಟ್ ಎನಿಸಿದೆ.
ಈ ಬಾರಿಯ ಐಪಿಎಲ್ನಲ್ಲಿ ಒಟ್ಟು 6 ಪಂದ್ಯಗಳನ್ನಾಡಿರುವ ಎಂಎಸ್ ಧೋನಿ ಪಡೆ ಕೇವಲ 2 ಪಂದ್ಯಗಳನ್ನು ಗೆದ್ದು ಅಂಕಟ್ಟಿಯಲ್ಲಿ ಆರನೇ ಸ್ಥಾನದಲ್ಲಿದೆ. ಇತ್ತ ಆಡಿದ 5 ರಲ್ಲಿ 3 ಗೆಲುವುಗಳನ್ನು ದಾಖಲಿಸಿರುವ ಕೊಹ್ಲಿ ಸೈನ್ಯ 5ನೇ ಸ್ಥಾನದಲ್ಲಿದೆ.
ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಮತ್ತು ಬೆಂಗಳೂರು ತಂಡ ಇಲ್ಲಿಯವರೆಗೆ ಸಿಎಸ್ಕೆ ಮತ್ತು ಆರ್ಸಿಬಿ ತಂಡಗಳು 24 ಬಾರಿ ಮುಖಾಮುಖಿಯಾಗಿದ್ದು, ಚೆನ್ನೈ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ, ಆರ್ಸಿಬಿ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಯಾವುದೇ ಫಲಿತಾಂಶ ಕಂಡಿಲ್ಲ.
ಈ ಬಾರಿಯ ಟೂರ್ನಿಯಲ್ಲಿ ಗೆಲುವಿನೊಂದಿಗೆ ಉತ್ತಮ ಆರಂಭ ಪಡೆದುಕೊಂಡಿದ್ದ ಆರ್ಸಿಬಿ ಇದೀಗ ಮತ್ತೆ ಹಳೇಯ ಚಾಳಿಯನ್ನೆ ಮುಂದುವರಿಸಿದೆ. ಆರ್ಸಿಬಿ ಪ್ರತೀ ಕೂಟದಲ್ಲೂ ಅಚ್ಚರಿಯ ಹಾಗೂ ಕಳಪೆ ಪ್ರದರ್ಶನ ನೀಡುವುದು ಮಾಮೂಲು. ಒಮ್ಮೆ ಇನ್ನೂರರ ಗಡಿ ದಾಟುತ್ತದೆ, ಇನ್ನೊಮ್ಮೆ ನೂರರೊಳಗೆ ಗಂಟುಮೂಟೆ ಕಟ್ಟುತ್ತದೆ. ಆದರೆ, ಇಂದಿನ ಪಂದ್ಯದಲ್ಲಿ ಕೊಹ್ಲಿ ಪಡೆ ಗೆಲ್ಲುವ ಫೇವರಿಟ್ ತಂಡವಾಗಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ