IPL

  • associate partner
HOME » NEWS » Ipl » IPL 2020 DC VS RCB LIVE CRICKET SCORE DELHI CAPITALS VS ROYAL CHALLENGERS BANGALORE RCB LOST KOHLI WICKET VB 2

DC vs RCB, IPL 2020 Live Score: ಆರ್​ಸಿಬಿ 5 ವಿಕೆಟ್ ಪತನ: ಕ್ರೀಸ್​ನಲ್ಲಿ ಎಬಿಡಿ

IPL 2020, Delhi Capitals vs Royal Challengers Bangalore Live Score: ಉಭಯ ತಂಡಗಳು ಐಪಿಎಲ್​ನಲ್ಲಿ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್​ 09 ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಇತಿಹಾಸವಿದೆ.

news18-kannada
Updated:November 2, 2020, 8:57 PM IST
DC vs RCB, IPL 2020 Live Score: ಆರ್​ಸಿಬಿ 5 ವಿಕೆಟ್ ಪತನ: ಕ್ರೀಸ್​ನಲ್ಲಿ ಎಬಿಡಿ
DC vs RCB Live Score Updates
  • Share this:
ಅಬುಧಾಬಿ (ನ. 02): ಇಲ್ಲಿನ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್​ನ 55ನೇ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಸೆಣೆಸಾಟ ನಡೆಸುತ್ತಿವೆ. ಈ ರೋಚಕ ಕಾದಾಟದಲ್ಲಿ ಗೆದ್ದ ತಂಡ ಎರಡನೇ ಟೀಂ ಆಗಿ ಪ್ಲೇ ಆಫ್ ಪ್ರವೇಶ ಪಡೆಯಲಿದೆ.

ಸದ್ಯ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದಿರುವ ಆರ್​ಸಿಬಿ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡಿತು. ನಿಧಾನಗತಿಯಲ್ಲಿ ರನ್ ಕಲೆಹಾಕಲು ಪ್ರಾರಂಭಿಸಿದ ಓಪನರ್​ಗಳು 5ನೇ ಓವರ್​ನಲ್ಲಿ ಜೋಶ್ ಫಿಲಿಪ್(12) ವಿಕೆಟ್ ಕಳೆದುಕೊಂಡಿತು. ಈ ಸಂದರ್ಭ ಒಂದಾದ ದೇವದತ್ ಪಡಿಕ್ಕಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಜೊತೆಯಾಟ ಆಡಿದರು.

ಆರಂಭಿಕ ಆಘಾತದಿಂದ ತಂಡವನ್ನು ಪಾರುಮಾಡಿದ ಈ ಜೋಡಿ 57 ರನ್​ಗಳ ಕಾಣಿಕೆ ನೀಡಿತು. ಆದರೆ, ಅಶ್ವಿನ್ ಬೌಲಿಂಗ್​ನಲ್ಲಿ ಸಿಕ್ಸ್​ ಸಿಡಿಸಲು ಎಡವಿದ ಕೊಹ್ಲಿ 24 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಬಾರಿಸಿ 29 ರನ್​ಗೆ ಔಟ್ ಆದರು. ಬಳಿಕ ಪಡಿಕ್ಕಲ್ ಹಾಗೂ ಎಬಿ ಡಿವಿಲಿಯರ್ಸ್​ 19 ಎಸೆತಗಳಲ್ಲಿ 30 ರನ್ ಚಚ್ಚಿದರು.

ಆಕರ್ಷಕ ಅರ್ಧಶತಕ ಸಿಡಿಸಿ ಪಡಿಕ್ಕಲ್ ಔಟ್ ಆದರು. 41 ಎಸೆತಗಳಲ್ಲಿ 5 ಬೌಂಡರಿ ಬಾರಿಸಿ 50 ರನ್ ಗಳಿಸಿದರು. ಕ್ರಿಸ್ ಮೊರೀಸ್ ಮತ್ತೊಮ್ಮೆ ವೈಫಲ್ಯ ಅನುಭವಿಸಿ ಸೊನ್ನೆ ಸುತ್ತಿದರು.

ಇಂದಿನ ಪಂದ್ಯಕ್ಕೆ ಡೆಲ್ಲಿ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಅಜಿಂಕ್ಯ ರಹಾನೆ, ಅಕ್ಷರ್ ಪಟೇಲ್ ಹಾಗೂ ಡೆನಿಯಲ್ ಸ್ಯಾಮ್ಸ್ ಕಮ್​ಬ್ಯಾಕ್ ಮಾಡಿದ್ದಾರೆ.

ಇತ್ತ ಆರ್​ಸಿಬಿ ತಂಡದಲ್ಲೂ ಎರಡು ಬದಲಾವಣೆ ಮಾಡಲಾಗಿದೆ. ಗುರುಕೀರತ್ ಸಿಂಗ್ ಬದಲು ಶಿವಂ ದುಬೆ ಹಾಗೂ ನವ್​ದೀಪ್ ಸೈನಿ ಬದಲು ಶಹ್ಬಾಜ್ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ.

ರಾಯಲ್ ಚಾಲೆಂಜರ್ಸ್​ ಬೆಂಗಳೂರು: ದೇವದತ್ ಪಡಿಕ್ಕಲ್, ಜೋಷ್ ಫಿಲಿಪ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್‌ (ವಿ.ಕೀ), ಶಿವಂ ದುಬೆ, ಕ್ರಿಸ್ ಮೊರೀಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ಶಹ್ಬಾಜ್ ಅಹ್ಮದ್, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್.ಡೆಲ್ಲಿ ಕ್ಯಾಪಿಟಲ್ಸ್: ಶಿಖರ್ ಧವನ್, ಪೃಥ್ವಿ ಶಾ, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್, ಮಾರ್ಕಸ್ ಸ್ಟೊಯಿನಿಸ್, ಡೆನಿಯಲ್ ಸ್ಯಾಮ್ಸ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕಗಿಸೊ ರಬಡಾ, ಆನ್ರಿಚ್ ನಾರ್ಟ್ಜೆ.





ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 13 ಪಂದ್ಯಗಳನ್ನಾಡಿದ್ದು, 7 ಪಂದ್ಯಗಳಲ್ಲಿ ಗೆಲುವು ಹಾಗೂ 6 ಪಂದ್ಯಗಳಲ್ಲಿ ಸೋಲನ್ನು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇತ್ತ ಡೆಲ್ಲಿ ಕೂಡ ಇದೇ ಸ್ಥಿತಿಯಲ್ಲಿದ್ದು ರನ್​ರೇಟ್ ಆಧಾರದ ಮೇಲೆ ಮೂರನೇ ಸ್ಥಾನದಲ್ಲಿದೆ.

ಆರ್​ಸಿಬಿಗೆ ಇದು ಲೀಗ್ ಹಂತದ ಕೊನೆಯ ಪಂದ್ಯವಾಗಿದೆ. ಹೀಗಾಗಿ ಈ ಪಂದ್ಯವನ್ನು ಜಯಿಸಿದರೆ ನೇರವಾಗಿ ಮೊದಲ ಕ್ವಾಲಿಫೈಯರ್ ಪಂದ್ಯವನ್ನಾಡಲು ಕೊಹ್ಲಿ ಪಡೆ ಅರ್ಹತೆಯನ್ನು ಗಿಟ್ಟಿಸಿಕೊಳ್ಳಲಿದೆ. ಅಯ್ಯರ್ ಪಡೆ ಕೂಡ ಇದೇ ಲೆಕ್ಕಚಾರದಲ್ಲಿದೆ. ಸೋತ ತಂಡಕ್ಕೆ ಪ್ಲೇ ಆಫ್ ಹಾದಿ ಮತ್ತಷ್ಟು ಕಠಿಣವಾಗಲಿದ್ದು, ಇತರೆ ತಂಡಗಳ ಪ್ರದರ್ಶನ ಮುಖ್ಯವಾಗಲಿದೆ.

ಕಳೆದ ಪಂದ್ಯದಲ್ಲಿ ಆರ್​ಸಿಬಿ ತಂಡ ಹೈದರಾಬಾದ್ ವಿರುದ್ಧ ಹೀನಾಯ ಸೋಲುಕಂಡಿತ್ತು. ತಂಡದಲ್ಲಿ ಬದಲಾವಣೆ ಮಾಡಿದ್ದರೂ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಸಂಪೂರ್ಣ ವಿಫಲವಾಗಿತ್ತು.

ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ನಾಯಕ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್‌ ಮಧ್ಯಮ ಕ್ರಮಾಂಕದಲ್ಲಿ ರನ್ ಗಳಿಸುತ್ತಿಲ್ಲ. ಆರಂಭಿಕ ಹಂತದಲ್ಲಿ ಪಡಿಕಲ್ ಸಿಡಿಯಬೇಕಿದೆ. ಕ್ರಿಸ್ ಮಾರಿಸ್ ಕೂಡ ನಿಸ್ತೇಜ ನಿರ್ವಹಣೆ ಮುಂದುವರಿಸಿದ್ದಾರೆ.

ಉಭಯ ತಂಡಗಳು ಐಪಿಎಲ್​ನಲ್ಲಿ ಈವರೆಗೆ 24 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಇದರಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ 09 ಹಾಗೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಇತಿಹಾಸವಿದೆ.
Published by: Vinay Bhat
First published: November 2, 2020, 7:03 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories