IPL 2020, DC vs RR: 1 ಬದಲಾವಣೆ ಸಾಧ್ಯತೆ: ಇಂದು ಕಣಕ್ಕಿಳಿಯುವ ತಂಡ ಹೀಗಿರಲಿದೆ

ಶಿಖರ್ ಧವನ್ ಫಾರ್ಮ್​ಗೆ ಮರಳಿರುವುದು ಡೆಲ್ಲಿ ಪಾಳಯದ ಚಿಂತೆಯನ್ನು ದೂರ ಮಾಡಿದೆ. ಆದರೆ ಮುಂಬೈ ವಿರುದ್ಧ ಕಳಪೆ ಫೀಲ್ಡಿಂಗ್ ಪ್ರದರ್ಶಿಸಿರುವುದು ಶ್ರೇಯಸ್ ಪಡೆಯ ಹೊಸ ಚಿಂತೆಗೆ ಕಾರಣವಾಗಿದೆ.

dc vs rr

dc vs rr

 • Share this:
  IPLನ 30ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಲಿದೆ. ಹಿಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್​ ಎದುರು ಶರಣಾಗಿದ್ದ ಡೆಲ್ಲಿ ಇಂದಿನ ಪಂದ್ಯದಲ್ಲಿ ಗೆಲುವು ದಾಖಲಿಸುವ ಮೂಲಕ ಮತ್ತೆ ಅಗ್ರಸ್ಥಾನಕ್ಕೇರುವ ತವಕದಲ್ಲಿದೆ. ಅತ್ತ ರಾಜಸ್ಥಾನ್ ರಾಯಲ್ಸ್ ಸತತ ಸೋಲಿನ ಸುಳಿಯಿಂದ ಹೊರಬಂದಿದ್ದು, ಜಯದ ಉತ್ಸಾಹವನ್ನು ಮುಂದುವರೆಸುವ ಇರಾದೆಯಲ್ಲಿದೆ. ಟೂರ್ನಿ ಆರಂಭದಿಂದಲೂ ಸಂಘಟಿತ ಪ್ರದರ್ಶನ ನೀಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್ ಇಂದಿನ ಪಂದ್ಯದಲ್ಲಿ ಫೇವರಿಟ್ ಎನಿಸಿದರೂ, ಸ್ಟಾರ್ ಆಟಗಾರರನ್ನೇ ಒಳಗೊಂಡಿರುವ ರಾಜಸ್ಥಾನ್ ರಾಯಲ್ಸ್ ಯಾವಾಗ ಬೇಕಿದ್ದರೂ ಪುಟಿದೇಳಬಹುದು. ಹೀಗಾಗಿ ದುಬೈ ಮೈದಾನದಲ್ಲಿ ಇಂದು ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

  ಗಾಯದ ಸಮಸ್ಯೆಯಿಂದಾಗಿ ಕಳೆದ ಪಂದ್ಯವನ್ನು ತಪ್ಪಿಸಿಕೊಂಡಿದ್ದ ವಿಕೆಟ್ ಕೀಪರ್ ರಿಷಭ್ ಪಂತ್ ಇಂದೂ ಕೂಡ ಅಲಭ್ಯರಾಗಲಿದ್ದಾರೆ. ಪಂತ್​ಗೆ ವೈದ್ಯರು ಒಂದು ವಾರಗಳ ಕಾಲ ವಿಶ್ರಾಂತಿ ಸೂಚಿಸಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಅವರ ಜಾಗದಲ್ಲಿ ಅಜಿಂಕ್ಯ ರಹಾನೆ ಕಣಕ್ಕಿಳಿಯುವ ಸಾಧ್ಯತೆಯಿದೆ. ಹಾಗೆಯೇ ವಿಕೆಟ್ ಕೀಪರ್ ಆಗಿ ಅಲೆಕ್ಸ್ ಕ್ಯಾರಿ ಅವಕಾಶ ಪಡೆಯಲಿದ್ದಾರೆ.

  ಇನ್ನು ಕಳೆದ ಪಂದ್ಯದಲ್ಲಿ ಶಿಖರ್ ಧವನ್ ಫಾರ್ಮ್​ಗೆ ಮರಳಿರುವುದು ಡೆಲ್ಲಿ ಪಾಳಯದ ಚಿಂತೆಯನ್ನು ದೂರ ಮಾಡಿದೆ. ಆದರೆ ಮುಂಬೈ ವಿರುದ್ಧ ಕಳಪೆ ಫೀಲ್ಡಿಂಗ್ ಪ್ರದರ್ಶಿಸಿರುವುದು ಶ್ರೇಯಸ್ ಪಡೆಯ ಹೊಸ ಚಿಂತೆಗೆ ಕಾರಣವಾಗಿದೆ. ಇದರ ಹೊರತಾಗಿ ಇಂದು ಕೂಡ ಮುಂಬೈ ವಿರುದ್ಧ ಆಡಿದ ತಂಡವೇ ಬಹುತೇಕ ಕಣಕ್ಕಿಳಿಯಲಿದೆ.

  ಇತ್ತ ರಾಜಸ್ಥಾನ್ ರಾಯಲ್ಸ್​ ಬೆನ್ ಸ್ಟೋಕ್ಸ್ ಆಗಮನದಿಂದ ಆಲ್​ರೌಂಡರ್ ವಿಭಾಗವನ್ನು ಮತ್ತಷ್ಟು ಬಲಿಷ್ಠಗೊಳಿಸಿದೆ. ಆದರೆ ಆರಂಭಿಕರ ವೈಫಲ್ಯ ಹಾಗೂ ಮಧ್ಯಮ ಕ್ರಮಾಂಕದ ವಿಫಲತೆ ಸ್ಮಿತ್ ಚಿಂತೆಯನ್ನು ಹೆಚ್ಚಿಸಿದೆ. ಮೊದಲೆರಡು ಪಂದ್ಯದಲ್ಲಿ ಅಬ್ಬರಿಸಿದ್ದ ಸ್ಮಿತ್ ಹಾಗೂ ಸ್ಯಾಮ್ಸನ್ ಮತ್ತೆ ಮೋಡಿ ಮಾಡಲು ಸಾಧ್ಯವಾಗದಿರುವುದು ರಾಜಸ್ಥಾನ್ ಸೋಲಿಗೆ ಪ್ರಮುಖ ಕಾರಣವಾಗಿದೆ. ಮತ್ತೊಂದೆಡೆ ಸತತ ವೈಫಲ್ಯದಿಂದ ಬಳಲುತ್ತಿರುವ ರಾಬಿನ್ ಉತ್ತಪ್ಪ ಅವರನ್ನು ಇಂದಿನ ಪಂದ್ಯದಿಂದ ಕೈ ಬಿಡುವ ಸಾಧ್ಯತೆಯಿದೆ. ಇವರ ಸ್ಥಾನದಲ್ಲಿ ಮನನ್ ವೋಹ್ರಾಗೆ ಅವಕಾಶ ನೀಡಬಹುದು.

  ಒಟ್ಟಿನಲ್ಲಿ ಇಂದಿನ ಪಂದ್ಯದ ಮೂಲಕ ಉಭಯ ತಂಡಗಳು ಎರಡನೇ ಹಂತದ ಮ್ಯಾಚ್​ಗಳನ್ನು ಆರಂಭಿಸುತ್ತಿದ್ದು, ಹೀಗಾಗಿ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಮೇಲೇರುವ ಬಿಗ್ ಪ್ಲ್ಯಾನಿಂಗ್​ನಲ್ಲಿದೆ. ಹೀಗಾಗಿ ಕಳೆದ ಪಂದ್ಯದಲ್ಲಿ ಕಣಕ್ಕಿಳಿದ ಬಲಿಷ್ಠ ತಂಡವನ್ನೇ ಇಂದು ಕೂಡ ಮೈದಾನಕ್ಕಿಳಿಸಲಿದೆ.

  ಡೆಲ್ಲಿ ಕ್ಯಾಪಿಟಲ್ಸ್​ ಸಂಭಾವ್ಯ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಪೃಥ್ವಿ ಷಾ, ಶಿಖರ್ ಧವನ್, ಅಜಿಂಕ್ಯ ರಹಾನೆ, ಮಾರ್ಕಸ್ ಸ್ಟೋಯಿನಿಸ್, ಅಲೆಕ್ಸ್ ಕ್ಯಾರಿ (ವಿ.ಕೀ), ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಆರ್. ಅಶ್ವಿನ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ

  ರಾಜಸ್ಥಾನ ರಾಯಲ್ಸ್ ಸಂಭಾವ್ಯ ತಂಡ: ಸ್ಟೀವನ್ ಸ್ಮಿತ್ (ನಾಯಕ), ಬೆನ್ ಸ್ಟೋಕ್ಸ್, ಜೋಶ್ ಬಟ್ಲರ್ (ವಿಕೀ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ/ಮನನ್ ವೋಹ್ರಾ, ರಿಯಾನ್ ಪರಾಗ್, ರಾಹುಲ್ ತೆವಾಟಿಯಾ, ಜ್ರೋಾ ಆರ್ಚರ್, ಶ್ರೇಯಸ್ ಗೋಪಾಲ್, ಜೈದೇವ್ ಉನಾದ್ಕತ್, ಕಾರ್ತಿಕ್ ತ್ಯಾಗಿ.
  POINTS TABLE:

  SCHEDULE TIME TABLE:

  ORANGE CAP:

  PURPLE CAP:

  RESULT DATA:

  MOST SIXES:

  ಇದನ್ನೂ ಓದಿ: IPL 2020: ಮೈದಾನದಲ್ಲೇ ಬೈಯ್ದಾಡಿಕೊಂಡ ಪಾಂಡ್ಯ ಬ್ರದರ್ಸ್: ಸಿಟ್ಟಿಗೆ ಕಾರಣವೇನು ಗೊತ್ತಾ?
  Published by:zahir
  First published: