IPL

  • associate partner
HOME » NEWS » Ipl » IPL 2020 DC VS SRH QUALIFIER 2 LIVE CRICKET SCORE DELHI CAPITALS VS SUNRISERS HYDERABAD IPL PLAYOFFS LIVE SCORECARD SRH LOST 4 WICKETS VB

DC vs SRH Qualifier 2, IPL 2020 Live Score: ರೋಚಕ ಘಟ್ಟದತ್ತ ಡೆಲ್ಲಿ-ಹೈದರಾಬಾದ್ ಪಂದ್ಯ

IPL 2020 Playoffs, Delhi Capitals vs Sunrisers Hyderabad Live Score: ಉಭಯ ತಂಡಗಳು ಈವರೆಗೆ ಐಪಿಎಲ್​ನಲ್ಲಿ 17 ಪಂದ್ಯಗಳಲ್ಲಿ ಮುಖಾಮುಖಿ ಆಗಿದೆ. ಇದರಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ 11 ಹಾಗೂ ಡೆಲ್ಲಿ ಕ್ಯಾಪಿಟಲ್ಸ್ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

news18-kannada
Updated:November 8, 2020, 11:06 PM IST
DC vs SRH Qualifier 2, IPL 2020 Live Score: ರೋಚಕ ಘಟ್ಟದತ್ತ ಡೆಲ್ಲಿ-ಹೈದರಾಬಾದ್ ಪಂದ್ಯ
DC vs SRH Live Score Updates
  • Share this:
ಅಬುಧಾಬಿ (ನ. 08) ಇಲ್ಲಿನ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ 13ನೇ ಆವೃತ್ತಿ ಐಪಿಎಲ್​ನ 2ನೇ ಕ್ವಾಮಿಫೈಯರ್​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಭರ್ಜರಿ ಮೊತ್ತ ಕಲೆಹಾಕಿದೆ. ಶಿಖರ್ ಧವನ್ ಅವರ ಆಕರ್ಷಕ ಅರ್ಧಶತಕ ಹಾಗೂ ಶಿಮ್ರೋನ್ ಹೆಟ್ಮೇರ್, ಮಾರ್ಕಸ್ ಸ್ಟಾಯಿನಿಸ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್​ಗಳಲ್ಲಿ 189 ರನ್ ಗಳಿಸಿದೆ.

ಸದ್ಯ ಟಾರ್ಗೆಟ್ ಬೆನ್ನಟ್ಟಿರುವ ಹೈದರಾಬಾದ್ ಆರಂಭದಲ್ಲೇ ದೊಡ್ಡ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. 2ನೇ ಓವರ್​ನ ರಬಾಡ ಬೌಲಿಂಗ್​ನಲ್ಲಿ ನಾಯಕ ಡೇವಿಡ್ ವಾರ್ನರ್(2) ಕ್ಲೀನ್ ಬೌಲ್ಡ್ ಆದರೆ, ಪ್ರಿಯಂ ಗರ್ಗ್ 12 ಎಸೆತಗಳಲ್ಲಿ 17 ರನ್ ಬಾರಿಸಿ ಬ್ಯಾಟ್ ಕೆಳಗಿಟ್ಟರು. ಇದರ ಬೆನ್ನಲ್ಲೇ 14 ಎಸೆತಗಳಲ್ಲಿ 21 ರನ್ ಗಳಿಸಿ ಮನೀಶ್ ಪಾಂಡೆ ಕೂಡ ನಿರ್ಗಮಿಸಿದ್ದು ತಂಡಕ್ಕೆ ಹೊಡೆತ ಬಿದ್ದಂತಾಯಿತು.

ಕೇನ್ ವಿಲಿಯಮ್ಸನ್ ಜೊತೆ ಇನ್ನಿಂಗ್ಸ್​ ಕಟ್ಟಲು ಹೊರಟ ಜೇಸನ್ ಹೋಲ್ಡರ್(11) ಕೂಡ ನಿರಾಸೆ ಮೂಡಿಸಿದರು. ಕ್ರೀಸ್​ನಲ್ಲಿ ಕೇನ್ ಹಾಗೂ ಅಬದುಲ್ ಸಮದ್ ಇದ್ದಾರೆ.

ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ಡೆಲ್ಲಿ ಸ್ಫೋಟಕ ಆರಂಭ ಪಡೆದುಕೊಂಡಿತು. ಓಪನರ್ ಆಗಿ ಕಣಕ್ಕಿಳಿದಿರುವ ಮಾರ್ಕಸ್ ಸ್ಟಾಯಿನಿಸ್ ಹಾಗೂ ಶಿಖರ್ ಧವನ್ ಬಿರುಸಿನ ಬ್ಯಾಟಿಂಗ್ ನಡೆಸಿದರು. ಪರಿಣಾಮ ಮೊದಲ 6 ಓವರ್​ನಲ್ಲಿ 65 ರನ್ ಮೂಡಿಬಂತು. ಇವರಿಬ್ಬರ ಭರ್ಜರಿ ಜೊತೆಯಾಟಕ್ಕೆ ಬ್ರೇಕ್ ಹಾಕಿದ್ದು ರಶೀದ್ ಖಾನ್.

27 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಬಾರಿಸಿ 28 ರನ್ ಗಳಿಸಿದ್ದ ಸ್ಟಾಯಿನಿಸ್ 9ನೇ ಓವರ್​ನಲ್ಲಿ ಔಟ್ ಆದರು. ಈ ಜೋಡಿ ಮೊದಲ ವಿಕೆಟ್​ಗೆ 86 ರನ್​ಗಳ ಕಾಣಿಕೆ ನೀಡಿದರು. ನಾಯಕ ಶ್ರೇಯಸ್ ಅಯ್ಯರ್ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲದೆ 20 ಎಸೆತಗಳಲ್ಲಿ 21 ರನ್ ಗಳಿಸಿ ಔಟ್ ಆದರು.

ಈ ನಡುವೆ ಧವನ್ ಆಕರ್ಷಕ ಅರ್ಧಶತಕ ಸಿಡಿಸಿದರು. ಅಯ್ಯರ್ ನಿರ್ಗಮನದ ಬಳಿಕ ಧವನ್ ಜೊತೆಯಾದ ಶಿಮ್ರೋನ್ ಹೆಟ್ಮೇರ್ ಅಮೋಘ ಆಟ ಪ್ರದರ್ಶಿಸಿದರು. ಹಿಂದಿನ ರನ್ ಗತಿಯನ್ನ ಕಾಪಾಡಿಕೊಂಡು ಬ್ಯಾಟ್ ಬೀಸಿದ ಈ ಜೋಡಿ 52 ರನ್ ಕಲೆಹಾಕಿತು.





ಧವನ್ 50 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ ಬಾರಿಸಿ 78 ರನ್ ಗಳಿಸಿದರೆ, ಹೆಟ್ಮೇರ್ 22 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಿಡಿಸಿ ಅಜೇಯ 42 ರನ್ ಚಚ್ಚಿದರು. ಅಂತಿಮವಾಗಿ ಡೆಲ್ಲಿ 20 ಓವರ್​ಗಳಲ್ಲಿ 3 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಎಸ್​ಆರ್​ಹೆಚ್ ಪರ ಜೇನಸ್ ಹೋಲ್ಡರ್, ಸಂದೀಪ್ ಶರ್ಮಾ ಹಾಗೂ ರಶೀದ್ ಖಾನ್ ತಲಾ 1 ವಿಕೆಟ್ ಪಡೆದರು.

ಸನ್​ರೈಸರ್ಸ್​ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಶ್ರೀವತ್ಸ್ ಗೋಸ್ವಾಮಿ (ವಿ.ಕೀ), ಕೇನ್ ವಿಲಿಯಮ್ಸನ್, ಮನೀಷ್ ಪಾಂಡೆ, ಜೇಸನ್ ಹೋಲ್ಡರ್, ಪ್ರಿಯಂ ಗರ್ಗ್, ಶಹ್ಬಾಜ್ ನದೀಂ, ರಶೀದ್ ಖಾನ್, ಅಬ್ದುಲ್ ಸಮದ್, ಸಂದೀಪ್ ಶರ್ಮಾ, ಟಿ. ನಟರಾಜನ್.

ಡೆಲ್ಲಿ ಕ್ಯಾಪಿಟಲ್ಸ್: ಶಿಖರ್ ಧವನ್, ಅಜಿಂಕ್ಯಾ ರಹಾನೆ, ಶ್ರೇಯಸ್ ಅಯ್ಯರ್ (ನಾಯಕ), ರಿಷಭ್ ಪಂತ್, ಶಿಮ್ರೋನ್ ಹೆಟ್ಮೇರ್, ಮಾರ್ಕಸ್ ಸ್ಟೊಯಿನಿಸ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಪ್ರವೀನ್ ದುಬೆ, ಕಗಿಸೊ ರಬಡಾ, ಆನ್ರಿಚ್ ನಾರ್ಟ್ಜೆ.
Published by: Vinay Bhat
First published: November 8, 2020, 9:46 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories