ದುಬೈ (ನ. 10): ಇಲ್ಲಿನ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 13ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಮೊತ್ತ ಕಲೆಹಾಕಿದೆ. ನಾಯಕ ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಡೆಲ್ಲಿ 20 ಓವರ್ಗಳಲ್ಲಿ 156 ರನ್ ಬಾರಿಸಿದೆ.
ಸದ್ಯ ಟಾರ್ಗೆಟ್ ಬೆನ್ನಟ್ಟಿರುವ ಮುಂಬೈ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆ ಒಂದು ವಿಕೆಟ್ ಕಳೆದುಕೊಂಡಿದೆ. ಓಪನರ್ಗಳಾದ ಕ್ವಿಂಟನ್ ಡಿಕಾಕ್ ಹಾಗೂ ನಾಯಕ ರೋಹಿತ್ ಶರ್ಮಾ ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಮೊದಲ 4 ಓವರ್ನಲ್ಲೇ 45 ರನ್ ಚಚ್ಚಿದರು. ಆದರೆ, 5ನೇ ಓವರ್ನಲ್ಲಿ ಕೀಪರ್ಗೆ ಕ್ಯಾಚಿತ್ತು ಡಿಕಾಕ್(20) ಔಟ್ ಆದರು.
ಬಳಿಕ ರೋಹಿತ್ ಜೊತೆ ಚೆನ್ನಾಗಿಯೆ ಆಡುತ್ತಿದ್ದ ಸೂರ್ಯಕುಮಾರ್(19) ರನೌಟ್ಗೆ ಬಲಿಯಾದರು. ಕ್ರೀಸ್ನಲ್ಲಿ ರೋಹಿತ್ ಹಾಗೂ ಇಶಾನ್ ಕಿಶನ್ ಇದ್ದಾರೆ.
ಇದಕ್ಕೂ ಮುನ್ನ ಟಾಸ್ ಗೆದ್ದು ಬ್ಯಾಟಿಂಗ್ಗೆ ಇಳಿದ ಡೆಲ್ಲಿ ಆರಂಭದಲ್ಲೇ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮೊದಲ ಓವರ್ನ ಮೊದಲ ಎಸೆತದಲ್ಲೇ ಟ್ರೆಂಟ್ ಬೌಲ್ಡ್ ಬೌಲಿಂಗ್ನಲ್ಲಿ ಮಾರ್ಕಸ್ ಸ್ಟಾಯಿನಿಸ್ ಕೀಪರ್ಗೆ ಕ್ಯಾಚ್ ನೀಡಿ ನಿರ್ಗಮಿಸದರು. ಬೌಲ್ಟ್ 2ನೇ ಓವರ್ನಲ್ಲಿ ಅಜಿಂಕ್ಯಾ ರಹಾನೆ(2) ಬ್ಯಾಟ್ ಕೆಳಗಿಟ್ಟರು. ಜಯಂತ್ ಯಾದವ್ ಸ್ಪಿನ್ ಮೋಡಿಗೆ ಶಿಖರ್ ಧವನ್(15) ಬೌಲ್ಡ್ ಆದರು.
ಈ ಸಂದರ್ಭ ಒಂದಾದ ರಿಷಭ್ ಪಂತ್ ಹಾಗೂ ನಾಯಕ ಶ್ರೇಯಸ್ ಅಯ್ಯರ್ ಎಚ್ಚರಿಕೆಯ ಆಟಕ್ಕೆ ಮುಂದಾದರು. ತಂಡದ ರನ್ ಗತಿಯನ್ನು ನಿಧಾನವಾಗಿ ಏರಿಸಲು ಶ್ರಮಪಟ್ಟ ಈ ಜೋಡಿ ಸೆಟ್ ಆದ ನಂತರ ಆರ್ಭಟಿಸಲು ಶುರುಮಾಡಿದರು. ಅದರಂತೆ ಪಂತ್ ಅರ್ಧಶತಕ ಸಿಡಿಸಿ ಮಿಂಚಿದರು. ಆದರೆ, ಬಳಿಕ ಹೆಚ್ಚುಹೊತ್ತು ನಿಲ್ಲದ ಪಂತ್ 38 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಬಾರಿಸಿ 56 ರನ್ಗೆ ಹೊರನಡೆದರು. ಈ ಜೋಡಿ ಬರೋಬ್ಬರಿ 96 ರನ್ಗಳ ಜೊತೆಯಾಟ ಆಡಿತು.
WATCH - Pant launches Krunal for 2 sixes
One straight down the ground and the other hit over mid-wicket. A couple of @RishabhPant17 classics for maximums.
📹📹https://t.co/RfzOCOFPHV #Final #Dream11IPL
— IndianPremierLeague (@IPL) November 10, 2020
ಅಂತಿಮವಾಗಿ ಡೆಲ್ಲಿ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಿತು. ಮುಂಬೈ ಪರ ಟ್ರೆಂಟ್ ಬೌಲ್ಟ್ 3 ವಿಕೆಟ್ ಕಿತ್ತರೆ, ನಥನ್ ಕಲ್ಟರ್ 2 ಹಾಗೂ ಜಯಂತ್ ಯಾದವ್ 1 ವಿಕೆಟ್ ಪಡೆದರು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ