IPL

  • associate partner
HOME » NEWS » Ipl » IPL 2020 KKR VS RR HEAD TO HEAD RECORD PLAYERS TO WATCH OUT FOR ZP

RR vs KKR: ರಾಯಲ್ಸ್​ vs ರೈಡರ್ಸ್​: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ? ಇಲ್ಲಿದೆ ಮಾಹಿತಿ

ಐಪಿಎಲ್​ನಲ್ಲಿ ಈವರೆಗೆ ಉಭಯ ತಂಡಗಳು 21 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇಲ್ಲಿ ಅಂಕಿ-ಅಂಶಗಳಲ್ಲೂ ಎರಡು ತಂಡಗಳು ಸಮಬಲ ಸಾಧಿಸಿವೆ. ಕೆಕೆಆರ್ 11 ಬಾರಿ ಗೆದ್ದಿದ್ರೆ, ಆರ್​ಆರ್ ಕೂಡ 10 ಬಾರಿ ವಿಜಯ ಸಾಧಿಸಿದೆ.

news18-kannada
Updated:November 1, 2020, 5:18 PM IST
RR vs KKR: ರಾಯಲ್ಸ್​ vs ರೈಡರ್ಸ್​: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ? ಇಲ್ಲಿದೆ ಮಾಹಿತಿ
RR vs KKR
  • Share this:
ಐಪಿಎಲ್ ಅಂಗಳದ ನಿರ್ಣಾಯಕ ಪಂದ್ಯದಲ್ಲಿ ಇಂದು ರಾಜಸ್ಥಾನ್ ರಾಯಲ್ಸ್​ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿದೆ . ಉಭಯ ತಂಡಗಳಿಗೂ ಇಂದಿನ ಪಂದ್ಯವು ಮಹತ್ವದ್ದಾಗಿದ್ದು, ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಪ್ಲೇ ಆಫ್ ಪ್ರವೇಶಿಸುವ ಅವಕಾಶ ಪಡೆಯಬಹುದು. ಹೀಗಾಗಿ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕಾಗಿ ಎರಡೂ ತಂಡಗಳು ಭರ್ಜರಿ ಪೈಪೋಟಿ ನಡೆಸಲಿದೆ.

ಆಡಿರುವ 13 ಪಂದ್ಯಗಳಲ್ಲಿ 6 ಗೆಲುವು ಕಂಡಿರುವ ರಾಜಸ್ಥಾನ್ ರಾಯಲ್ಸ್ ಅಂಕ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದ್ದು, ಇಷ್ಟೇ ಗೆಲುವು ಕಂಡಿರುವ ಕೆಕೆಆರ್ 7ನೇ ಸ್ಥಾನವನ್ನು ಅಲಂಕರಿಸಿದೆ. ಇಂದಿನ ಪಂದ್ಯದಲ್ಲಿ ಭರ್ಜರಿ ಗೆಲುವು  ದಾಖಲಿಸಿದ ತಂಡವು  ರನ್ ರೇಟ್​ ಆಧಾರದಲ್ಲಿ ಪ್ಲೇ ಆಫ್ ಪ್ರವೇಶಿಸುವ ಅರ್ಹತೆಗಿಟ್ಟಿಸಲಿದೆ. ಹೀಗಾಗಿ ಉಭಯ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯ.

ಒಂದು ವೇಳೆ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ಧ ಗೆದ್ದರೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಿಂದ 4ನೇ ಸ್ಥಾನಕ್ಕೇರುವ ಸಾಧ್ಯತೆ. ಇನ್ನು ಅಂಕಪಟ್ಟಿಯಲ್ಲಿ 6ನೇ ದಲ್ಲಿರುವ ಸ್ಮಿತ್ ಪಡೆಯು ಸಕಲ ತಯಾರಿಯೊಂದಿಗೆ ಪ್ಲೇ ಆಫ್ ಪ್ರವೇಶಿಸುವ ಕನಸಿನೊಂದಿಗೆ ಕಣಕ್ಕಿಳಿಯಲಿದೆ. ಉಭಯ ತಂಡಗಳು ಬಲಿಷ್ಠ ಆಟಗಾರರನ್ನು ಒಳಗೊಂಡಿರುವುದರಿಂದ ಇಂದಿನ ಪಂದ್ಯದಲ್ಲೂ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಏಕೆಂದರೆ ಐಪಿಎಲ್​ನಲ್ಲಿ ಈವರೆಗೆ ಉಭಯ ತಂಡಗಳು 21 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇಲ್ಲಿ ಅಂಕಿ-ಅಂಶಗಳಲ್ಲೂ ಎರಡು ತಂಡಗಳು ಸಮಬಲ ಸಾಧಿಸಿವೆ. ಕೆಕೆಆರ್ 11 ಬಾರಿ ಗೆದ್ದಿದ್ರೆ, ಆರ್​ಆರ್ ಕೂಡ 10 ಬಾರಿ ವಿಜಯ ಸಾಧಿಸಿದೆ. ಹೀಗಾಗಿ ಅಂಕಿ ಅಂಶಗಳ ಪ್ರಕಾರ ಎರಡು ಸಮಾನವಾಗಿದೆ ಎಂದೇ ಹೇಳಬಹುದು.

ಈ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಕೆಕೆಆರ್ 37 ರನ್‌ಗಳಿಂದ ಮಣಿಸಿತು . ಹೀಗಾಗಿ ಇದೇ ಆತ್ಮ ವಿಶ್ವಾಸದಲ್ಲಿ ಕೆಕೆಆರ್ ಇಂದು ಕೂಡ ಕಣಕ್ಕಿಳಿಯಲಿದೆ. ಅತ್ತ ಹಳೆಯ ಸೋಲಿನ ಲೆಕ್ಕ ಚುಕ್ತಾ ಮಾಡಲು ರಾಜಸ್ಥಾನ್ ರಾಯಲ್ಸ್ ಕೂಡ ಸಜ್ಜಾಗಿ ನಿಂತಿದೆ.

ಇನ್ನು ಕಳೆದ ಸೀಸನ್​ನಲ್ಲಿನ ಪಂದ್ಯಗಳನ್ನು ಗಣನೆಗೆ ತೆಗೆದುಕೊಂಡರೆ, 2 ಮುಖಾಮುಖಿಯಲ್ಲಿ ರಾಜಸ್ಥಾನ್ ಒಂದು ಗೆದ್ದರೆ, ಮತ್ತೊಂದನ್ನು ಕೊಲ್ಕತ್ತಾ ಗೆದ್ದು ಬೀಗಿತ್ತು. ಹಾಗೆಯೇ 2014ರ ಯುಎಇ ಐಪಿಎಲ್​ನಲ್ಲೂ ಉಭಯ ತಂಡಗಳು ಒಂದು ಪಂದ್ಯವನ್ನು ಆಡಿದೆ. ಅಬುಧಾಬಿಯಲ್ಲಿ ನಡೆದಿದ್ದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ತನ್ನ 20 ಓವರ್‌ಗಳಲ್ಲಿ 152/5 ರನ್ ಗಳಿಸಿತ್ತು. ಇದನ್ನು ಚೇಸ್ ಮಾಡಿದ್ದ ಕೆಕೆಆರ್ ಕೂಡ 152/8 ಬಾರಿಸಿತ್ತು. ಬಳಿಕ ಸೂಪರ್ ಓವರ್​ನಲ್ಲೂ ಎರಡೂ ತಂಡಗಳು 11 ರನ್​ ಬಾರಿಸಿದ್ದವು. ಹೀಗಾಗಿ ಬೌಂಡರಿ ಎಣಿಕೆ ನಿಯಮದಲ್ಲಿ ಕೊಲ್ಕತ್ತಾ ವಿರುದ್ಧ ರಾಜಸ್ಥಾನ್​ನ್ನು ವಿಜಯಿ ಎಂದು ಘೋಷಿಸಲಾಯಿತು.

ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ದಿನೇಶ್ ಕಾರ್ತಿಕ್ ರಾಜಸ್ಥಾನ್ ರಾಯಲ್ಸ್ ವಿರುದ್ಧ ಉತ್ತಮ ಫಾರ್ಮ್ ಹೊಂದಿರುವುದು ಕೆಕೆಆರ್​ಗೆ ಪ್ಲಸ್ ಪಾಯಿಂಟ್. ಡಿಕೆ ರಾಜಸ್ಥಾನ್ ವಿರುದ್ಧ 37 ಸರಾಸರಿಯಲ್ಲಿ 518 ರನ್ ಕಲೆಹಾಕಿದ್ದಾರೆ. ಇನ್ನು ಕೆಕೆಆರ್​ ವಿರುದ್ಧ ಯಶಸ್ವಿ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದ ಅಜಿಂಕ್ಯಾ ರಹಾನೆ ಪ್ರಸ್ತುತ ತಂಡದಲ್ಲಿಲ್ಲ. ರಹಾನೆ ಈ ಬಾರಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಭಾಗವಾಗಿದ್ದಾರೆ.ಒಟ್ಟಾರೆ ಅಂಕಿ ಅಂಶಗಳನ್ನು ನೋಡುವುದಾದ್ರೆ ಉಭಯ ತಂಡಗಳು ಸಮಬಲ ಹೊಂದಿದ್ದು, ಆರ್​ಆರ್ ಪರ ಬೆನ್ ಸ್ಟೋಕ್ಸ್, ಸಂಜು ಸ್ಯಾಮ್ಸ್​ನ್ ಆರ್ಭಟಿಸುತ್ತಿದ್ರೆ, ಕೆಕೆಆರ್ ಪಾಳಯದಲ್ಲಿ ಇಯಾನ್ ಮೋರ್ಗನ್, ಶುಭ್​ಮನ್ ಫಾರ್ಮ್​ನಲ್ಲಿರುವುದು ತಂಡದ ಆತ್ಮ ವಿಶ್ವಾಸವನ್ನು ಹೆಚ್ಚಿಸಿದೆ.POINTS TABLE:

SCHEDULE TIME TABLE:

ORANGE CAP:

PURPLE CAP:

RESULT DATA:

MOST SIXES:

KL Rahul: ಕನ್ನಡಿಗನ ಕಮಾಲ್: ಸಿಡಿಲಬ್ಬರದ ಒಂದು ಸೆಂಚುರಿಗೆ 8 ದಾಖಲೆಗಳು ಉಡೀಸ್
Published by: zahir
First published: November 1, 2020, 5:18 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories