CSK vs RCB: ಮಿಂಚಿದ ರುತುರಾಜ್: ಆರ್​ಸಿಬಿ ವಿರುದ್ಧ ಭರ್ಜರಿ ಜಯ ದಾಖಲಿಸಿದ ಸಿಎಸ್​ಕೆ

IPL 2020, Live Cricket Score, Chennai Super Kings (CSK) vs Royal Challengers Bangalore (RCB) Live Updates: ಐಪಿಎಲ್‌ನಲ್ಲಿ ಈವರೆಗೆ ಉಭಯ ತಂಡಗಳು 25 ಬಾರಿ ಪರಸ್ಪರ ಮುಖಾಮುಖಿಯಾಗಿವೆ. ಇದರಲ್ಲಿ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ 15 ಬಾರಿ ಗೆಲುವು ದಾಖಲಿಸಿದರೆ, ಆರ್​ಸಿಬಿ ಕೇವಲ 9 ರಲ್ಲಿ ಮಾತ್ರ ವಿಜಯ ಸಾಧಿಸಿದೆ. ಹಾಗೆಯೇ ಒಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತು.

csk

csk

  • Share this:
    ಇಂಡಿಯನ್ ಪ್ರೀಮಿಯರ್ ಲೀಗ್​ನ 44ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್​ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪ್ಲೇ ಆಫ್ ಕನಸನ್ನು ಧೋನಿ ಪಡೆ ಜೀವಂತವರಿಸಿಕೊಂಡಿದೆ. ಇದಕ್ಕೂ ಮುನ್ನ ಆರ್​ಸಿಬಿ ನೀಡಿದ 146 ರನ್​ಗಳ ಸಾಧಾರಣ ಗುರಿ ಬೆನ್ನತ್ತಿದ ಚೆನ್ನೈಗೆ ಫಾಫ್ ಡುಪ್ಲೆಸಿಸ್ ಹಾಗೂ ರುತುರಾಜ್ ಗಾಯಕ್ವಾಡ್ ಸ್ಪೋಟಕ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಆಟ ಪ್ರದರ್ಶಿಸಿದ ಈ ಜೋಡಿ ಮೊದಲ 5 ಓವರ್​ನಲ್ಲಿ  46 ಬಾರಿಸಿದರು. ಆದರೆ 6ನೇ ಓವರ್​ನ ಮೊದಲ ಎಸೆತದಲ್ಲೇ ಫಾಫ್ ಡುಪ್ಲೆಸಿಸ್ ಬಿಗ್ ಹಿಟ್​ಗೆ ಮುಂದಾಗಿ ಸೈನಿಗೆ ವಿಕೆಟ್ ಒಪ್ಪಿಸಿದರು. 

    ಪವರ್​ಪ್ಲೇ ಮುಕ್ತಾಯದ ವೇಳೆಗೆ 48 ರನ್​ಗಳಿಸಿದ್ದ ಸಿಎಸ್​ಕೆ, ಆ ಬಳಿಕ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು. ನಿಧಾನಕ್ಕೆ ಕ್ರೀಸ್​ ಕಚ್ಚಿಕೊಂಡ ಅಂಬಾಟಿ ರಾಯುಡು ಆರ್ಭಟಿಸಲು ಆರಂಭಿಸಿದರು. ಇನ್ನೊಂದೆಡೆ ಸಿಕ್ಕ ಅವಕಾಶವನ್ನು ಬಳಸಿಕೊಂಡ ರುತುರಾಜ್ ಬಿರುಸಿನ ಆಟ ಪ್ರದರ್ಶಿಸಿದರು. ಪರಿಣಾಮ 13 ಓವರ್ ಮುಕ್ತಾಯದ ವೇಳೆಗೆ ತಂಡದ ಮೊತ್ತ 111ಕ್ಕೆ ಬಂದು ನಿಂತಿತು. ಆದರೆ 14ನೇ ಓವರ್​ನಲ್ಲಿ ಚಹಲ್ ಎಸೆತವನ್ನು ಗುರುತಿಸಲು ಎಡವಿದ ರಾಯುಡು ಕ್ಲೀನ್ ಬೌಲ್ಡ್ ಆಗುವ ಮೂಲಕ 27 ಎಸೆತಗಳಲ್ಲಿ ತಮ್ಮ 39 ರನ್​ಗಳ ಇನಿಂಗ್ಸ್​ ಅಂತ್ಯಗೊಳಿಸಿದರು.

    ಮತ್ತೊಂದೆಡೆ 42 ಎಸೆತಗಳನ್ನು ಎದುರಿಸಿದ ರುತುರಾಜ್ 2 ಸಿಕ್ಸರ್, 3 ಬೌಂಡರಿಯೊಂದಿಗೆ ಐಪಿಎಲ್​​ನ ಮೊದಲ ಅರ್ಧಶತಕ ಪೂರೈಸಿದರು. ಈ ಹಂತದಲ್ಲಿ ಜೊತೆಗೂಡಿದ ನಾಯಕ ಧೋನಿ ಉತ್ತಮ ಆಟ ಪ್ರದರ್ಶಿಸಿದರು. ಅದರಂತೆ 18. 4 ಓವರ್​ನಲ್ಲಿ 2 ವಿಕೆಟ್ ಕಳೆದುಕೊಂಡು 146 ರನ್​ಗಳ ಗುರಿ ಮುಟ್ಟಿತು.

    ಆರಂಭಿಕನಾಗಿ ಕಣಕ್ಕಿಳಿದು ಅಜೇಯರಾಗಿ ಉಳಿದ ರುತುರಾಜ್ ಗಾಯಕ್ವಾಡ್ 51 ಎಸೆತಗಳಲ್ಲಿ 65 ರನ್ ಬಾರಿಸಿದರು. ಈ ಇನಿಂಗ್ಸ್​ನಲ್ಲಿ 4 ಬೌಂಡರಿ  ಹಾಗೂ 3 ಸಿಕ್ಸರ್​ಗಳು ಮೂಡಿಬಂದಿದ್ದವು.

    ಇದಕ್ಕೂ ಮುನ್ನ ಟಾಸ್ ಗೆದ್ದ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ದೇವದತ್ ಪಡಿಕ್ಕಲ್ ಹಾಗೂ ಆರೋನ್ ಫಿಂಚ್ ಉತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ಬಿರುಸಿನ ಆಟಕ್ಕೆ ಒತ್ತು ನೀಡಿದ್ದ ಫಿಂಚ್ (15), ಸ್ಯಾಮ್ ಕರ್ರನ್ ಎಸೆತದಲ್ಲಿ ಕ್ಯಾಚ್ ನೀಡಿ 4ನೇ ಓವರ್​ನಲ್ಲಿ ನಿರ್ಗಮಿಸಿ ನಿರಾಸೆ ಮೂಡಿಸಿದರು. 

    ಮತ್ತೊಂದೆಡೆ ಉತ್ತಮವಾಗಿ ಬ್ಯಾಟ್ ಬೀಸಿದ ಪಡಿಕ್ಕಲ್ ಪವರ್​ಪ್ಲೇ ಮುಕ್ತಾಯದ ವೇಳೆಗೆ ತಂಡದ ಮೊತ್ತವನ್ನು 46 ಕ್ಕೇರಿಸಿದರು. ಆದರೆ ಇದರ ಬೆನ್ನಲ್ಲೇ ಸ್ಯಾಂಟ್ನರ್ ಎಸೆತದಲ್ಲಿ ಬೌಂಡರಿ ಲೈನ್​ನಲ್ಲಿ ಫಾಫ್ ಡು ಪ್ಲೆಸಿಸ್ ಹಿಡಿದ ಅದ್ಭುತ ಕ್ಯಾಚ್​ಗೆ ದೇವದತ್ ಪಡಿಕ್ಕಲ್ (22) ಬಲಿಯಾದರು.

    ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಎಚ್ಚರಿಕೆಯ ಆಟಕ್ಕೆ ಒತ್ತು ನೀಡಿದರು. ಅದರಂತೆ ಮೊದಲ ಹತ್ತು ಓವರ್ ಮುಕ್ತಾಯದ ವೇಳೆಗೆ ತಂಡದ ಮೊತ್ತವನ್ನು 72 ಕ್ಕೆ ತಂದು ನಿಲ್ಲಿಸಿದರು. ಅಲ್ಲದೆ ಅರ್ಧಶತಕದ ಜೊತೆಯಾಟದ ಮೂಲಕ 15 ಓವರ್​ ಮುಕ್ತಾಯಕ್ಕೆ ತಂಡದ ಮೊತ್ತವನ್ನು 101ಕ್ಕೇರಿಸಿದರು.

    ಕೊನೆಯ 4 ಓವರ್​ಗಳಿರುವಾಗ ಬಿರುಸಿನ ಆಟಕ್ಕೆ ಮುಂದಾದ ಎಬಿ ಡಿವಿಲಿಯರ್ಸ್​ (39) ಚಹರ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಕೊನೆಯ ಎರಡು ಓವರ್​ಗಳಿರುವಾಗ ನಾಯಕ ಕೊಹ್ಲಿ ಜೊತೆಗೂಡಿದ ಮೊಯೀನ್ ಅಲಿ (1) ಬಂದ ವೇಗದಲ್ಲೇ ಹಿಂತಿರುಗಿದರು. ಆದರೆ ಮತ್ತೊಂದೆಡೆ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ 42 ಎಸೆತಗಳಲ್ಲಿ 38ನೇ ಐಪಿಎಲ್ ಅರ್ಧಶತಕ ಪೂರೈಸಿದರು. ಹಾಫ್ ಸೆಂಚುರಿ ಬೆನ್ನಲ್ಲೇ ಫಾಫ್ ಡುಪ್ಲೆಸಿಸ್ ಮನಮೋಹಕ ಕ್ಯಾಚ್​ಗೆ ಕೊಹ್ಲಿ ನಿರ್ಗಮಿಸಬೇಕಾಯಿತು.

    ಇನ್ನು ಕೊನೆಯ ಮೂರು ಓವರ್​ನಲ್ಲಿ ಕಂಬ್ಯಾಕ್ ಮಾಡಿದ ಸಿಎಸ್​ಕೆ ಬೌಲರುಗಳ ಆರ್​ಸಿಬಿ ಬ್ಯಾಟ್ಸ್​ಮನ್​ಗಳು ರನ್​ಗಳಿಸದಂತೆ ತಡೆಯುವಲ್ಲಿ ಯಶಸ್ವಿಯಾದರು. ಅದರಂತೆ ಡೆತ್ ಓವರ್​ನಲ್ಲಿ ಕೇವಲ 20 ರನ್ ನೀಡಿ 4 ವಿಕೆಟ್ ಕಬಳಿಸಿದರು. ಪರಿಣಾಮ RCB ನಿಗದಿತ 20 ಓವರ್​ನಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್​ಗಳಿಸಲಷ್ಟೇ ಶಕ್ತರಾದರು. ಸಿಎಸ್​ಕೆ ಪರ ಸ್ಯಾಮ್ ಕರ್ರನ್ 3 ಓವರ್​ನಲ್ಲಿ 19 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.

    POINTS TABLE:

    SCHEDULE TIME TABLE:

    ORANGE CAP:

    PURPLE CAP:

    RESULT DATA:

    MOST SIXES:

    ಇದನ್ನೂ ಓದಿ: IPL 2020: 3ನೇ ವರ್ಷಕ್ಕೆ CSK ಸುಸ್ತು: ಡ್ಯಾಡಿಸ್ ಆರ್ಮಿ ವಿರುದ್ಧ ಕಿಡಿಕಾರಿದ ಕೋಚ್​
    Published by:zahir
    First published: