IPL

  • associate partner
HOME » NEWS » Ipl » IPL 2020 MI VS DC PREDICTED PLAYING 11 ZP

IPL 2020, MI vs DC: 1 ಬದಲಾವಣೆ ಸಾಧ್ಯತೆ: ಇಂದು ಕಣಕ್ಕಿಳಿಯುವ ತಂಡ ಹೀಗಿರಲಿದೆ

ಡೆಲ್ಲಿ ಕ್ಯಾಪಿಟಲ್ಸ್ ಪರ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುತ್ತಿದ್ದು, ಮತ್ತೊಂದೆಡೆ ಶಿಖರ್ ಧವನ್ ವಿಫಲರಾಗುತ್ತಿದ್ದಾರೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಹೆಟ್ಮೆಯರ್, ರಿಷಭ್ ಪಂತ್ ಉಪಯುಕ್ತ ಕಾಣಿಕೆ ನೀಡಿದರೆ, ಅಂತಿಮ ಓವರ್​ಗಳಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಮಾರ್ಕಸ್ ಸ್ಟೊಯಿನಿಸ್ ಮಿಂಚುತ್ತಿದ್ದಾರೆ.

news18-kannada
Updated:October 11, 2020, 5:58 PM IST
IPL 2020, MI vs DC: 1 ಬದಲಾವಣೆ ಸಾಧ್ಯತೆ: ಇಂದು ಕಣಕ್ಕಿಳಿಯುವ ತಂಡ ಹೀಗಿರಲಿದೆ
MI vs DC
  • Share this:
IPL 2020ಯ 27ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ಮುಖಾಮುಖಿಯಾಗಲಿವೆ. ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದ್ದು, ಹೀಗಾಗಿ ಅಗ್ರಸ್ಥಾನವನ್ನು ಉಳಿಸಿಕೊಳ್ಳಲು ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಪೈಪೋಟಿ ನೀಡಲಿದೆ. ಹ್ಯಾಟ್ರಿಕ್ ಗೆಲುವಿನಿಂದ ಬೀಗುತ್ತಿರುವ ಉಭಯ ತಂಡಗಳು ಸ್ಥಿರ ಪ್ರದರ್ಶನವನ್ನು ನೀಡುತ್ತಿದ್ದು, ಇಂದಿನ ಪಂದ್ಯದಲ್ಲೂ ಜಿದ್ದಾಜಿದ್ದಿನ ಕಾದಾಟ ನಡೆಯುವ ನಿರೀಕ್ಷೆಯಿದೆ.

ಎರಡು ತಂಡಗಳೂ ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗ ಹೊಂದಿದ್ದು, ಅದರಲ್ಲೂ ಮುಂಬೈ ತಂಡದಲ್ಲಿ ಅನುಭವಿ ಆಟಗಾರರನ್ನು ಕಣಕ್ಕಿಳಿಸುತ್ತಿದೆ. ಇದೇ ಕಾರಣದಿಂದ ಆರಂಭಿಕರು ವಿಫಲರಾದರೂ ಮುಂಬೈ ಪಾಳಯದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಮಿಂಚುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಜಸ್​ಪ್ರೀತ್ ಬುಮ್ರಾ ಹಾಗೂ ಟ್ರೆಂಟ್ ಬೌಲ್ಟ್ ರೋಹಿತ್ ಪಡೆಯ ಟ್ರಂಪ್ ಕಾರ್ಡ್​ಗಳು.

ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಪರ ಯುವ ಬ್ಯಾಟ್ಸ್‌ಮನ್ ಪೃಥ್ವಿ ಶಾ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುತ್ತಿದ್ದು, ಮತ್ತೊಂದೆಡೆ ಶಿಖರ್ ಧವನ್ ವಿಫಲರಾಗುತ್ತಿದ್ದಾರೆ. ಆದರೆ ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್, ಹೆಟ್ಮೆಯರ್, ರಿಷಭ್ ಪಂತ್ ಉಪಯುಕ್ತ ಕಾಣಿಕೆ ನೀಡಿದರೆ, ಅಂತಿಮ ಓವರ್​ಗಳಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಮಾರ್ಕಸ್ ಸ್ಟೊಯಿನಿಸ್ ಮಿಂಚುತ್ತಿದ್ದಾರೆ. ಇನ್ನು ಬೌಲಿಂಗ್ ವಿಭಾಗದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಪರ ರಬಾಡ, ಅನ್ರಿಚ್ ನೋರ್ಜೆ, ಅಕ್ಷರ್ ಪಟೇಲ್ ಹಾಗೂ ಅಶ್ವಿನ್ ನಿರೀಕ್ಷೆಗಿಂತ ಉತ್ತಮ ಪ್ರದರ್ಶನ ನೀಡುತ್ತಿದೆ.

ಉಭಯ ತಂಡಗಳು ಸತತ ಗೆಲುವಿನಿಂದ ಆತ್ಮ ವಿಶ್ವಾಸದಿಂದ ಪುಟಿದೇಳುತ್ತಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ. ಇದರ ಹೊರತಾಗಿ ಡೆಲ್ಲಿ ಕ್ಯಾಪಿಟಲ್ಸ್ ಶಿಖರ್ ಧವನ್ ಬದಲಿಗೆ ಆರಂಭಿಕರಾಗಿ ಅಜಿಂಕ್ಯ ರಹಾನೆಗೆ ಅವಕಾಶ ನೀಡುವ ಸಾಧ್ಯತೆ ಕೂಡ ಇದೆ. ಉಭಯ ಸಂಭವನೀಯ ತಂಡಗಳು ಇಂತಿವೆ.

ಮುಂಬೈ ಇಂಡಿಯನ್ಸ್​ ಸಂಭಾವ್ಯ ತಂಡ: ರೋಹಿತ್ ಶರ್ಮ (ನಾಯಕ), ಕ್ವಿಂಟನ್ ಡಿ ಕಾನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಕೀರನ್ ಪೊಲಾರ್ಡ್, ಕೃನಾಲ್ ಪಾಂಡ್ಯ, ರಾಹುಲ್ ಚಹರ್, ಜೇಮ್ಸ್ ಪ್ಯಾಟಿನ್‌ಸನ್, ಟ್ರೆಂಟ್ ಬೌಲ್ಟ್, ಜಸ್‌ಪ್ರೀತ್ ಬುಮ್ರಾ.

ಡೆಲ್ಲಿ ಕ್ಯಾಪಿಟಲ್ಸ್ ಸಂಭಾವ್ಯ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಪೃಥ್ವಿ ಶಾ, ಶಿಖರ್ ಧವನ್, ರಿಷಭ್ ಪಂತ್ (ವಿಕೆಟ್ ಕೀಪರ್), ಶಿಮ್ರೋನ್ ಹೆಟ್ಮೆಯರ್, ಮಾರ್ಕಸ್ ಸ್ಟೋಯಿನಿಸ್, ಆರ್.ಅಶ್ವಿನ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ಅನ್ರಿಚ್ ನೋರ್ಜೆ.

POINTS TABLE: SCHEDULE TIME TABLE:

ORANGE CAP:

PURPLE CAP:

RESULT DATA:

MOST SIXES:

ಇದನ್ನೂ ಓದಿ: IPL 2020: ಐಪಿಎಲ್​ನಲ್ಲಿ ದ್ರಾವಿಡ್ ಗರಡಿ ಹುಡುಗರ ಮಿಂಚಿಂಗ್..!
Published by: zahir
First published: October 11, 2020, 5:58 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories