ಐಪಿಎಲ್ನಲ್ಲಿ ಇಂದು ನಡೆಯಲಿರುವ 32ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ ದಿನೇಶ್ ಕಾರ್ತಿಕ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿ ಆಗುತ್ತಿವೆ. ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಸತತ ನಾಲ್ಕು ಜಯ ದಾಖಲಿಸಿ ಆತ್ಮವಿಶ್ವಾಸದಲ್ಲಿ ತೇಲುತ್ತಿರುವ ರೋಹಿತ್ ಪಡೆ ಗೆಲ್ಲುವ ಫೇವರಿಟ್ ಆಗಿದೆ. ಇತ್ತ ಅಸ್ಥಿರ ನಿರ್ವಹಣೆ ತೋರುತ್ತಿರುವ ಕಾರ್ತಿಕ್ ಪಡೆಗೆ ದೊಡ್ಡ ಗೆಲುವಿನ ಅನಿವಾರ್ಯತೆ ಇದೆ.
ಈ ಬಾರಿಯ ಟೂರ್ನಿಯಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಮುಂಬೈ ತಂಡ ಆಡಿರುವ 7 ಪಂದ್ಯಗಳಲ್ಲಿ 5ರಲ್ಲಿ ಜಯ ಸಾಧಿಸಿದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಕೋಲ್ಕತ್ತಾ ಆಡಿರುವ 7 ಪಂದ್ಯಗಳ ಪೈಕಿ 4ರಲ್ಲಿ ಜಯ ಸಾಧಿಸಿ 3ರಲ್ಲಿ ಸೋಲು ಕಂಡಿದೆ. ಹೀಗಾಗಿ ಪ್ಲೇ ಆಫ್ ಹಾದಿಯನ್ನು ಭದ್ರ ಪಡಿಸಿಕೊಳ್ಳಲು ಉಭಯ ತಂಡಗಳಿಗೆ ಗೆಲುವಿನ ಅಗತ್ಯವಿದೆ.
AB de Villiers: ಎಬಿ ಡಿವಿಲಿಯರ್ಸ್ ಆರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದೇಕೆ?; ಸ್ಪಷ್ಟನೆ ನೀಡಿದ ಕಿಂಗ್ ಕೊಹ್ಲಿ
ಮುಂಬೈ ಇಂಡಿಯನ್ಸ್ ತಂಡದಲ್ಲಿ ಬಹುತೇಕ ಎಲ್ಲ ಆಟಗಾರರು ಪ್ರಚಂಡ ಫಾರ್ಮ್ನಲ್ಲಿದ್ದಾರೆ. ರೋಹಿತ್ ಶರ್ಮಾ ಹಾಗೂ ಕ್ವಿಂಟನ್ ಡಿಕಾಕ್ ತಂಡಕ್ಕೆ ಉತ್ತಮ ಆರಂಭ ಒದಗಿಸುತ್ತಿದ್ದರೆ, ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ತಮ್ಮ ಜವಾಬ್ದಾರಿಗೂ ಮೀರಿ ಪ್ರದರ್ಶನ ನೀಡುತ್ತಿದ್ದಾರೆ.
ಆಲ್ರೌಂಡರ್ ಕೀರೊನ್ ಪೊಲಾರ್ಡ್, ಹಾರ್ದಿಕ್ ಪಾಂಡ್ಯ ಹಾಗೂ ಕ್ರುನಾಲ್ ಪಾಂಡ್ಯ ಫಿನಿಶಿಂಗ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ.
ಮುಂಬೈ ಬೌಲಿಂಗ್ ಕೂಡ ಮಾರಕವಾಗಿದೆ. ಲಸಿತ್ ಮಲಿಂಗ ಅಲಭ್ಯತೆ ಚೂರು ಎದ್ದುಕಾಣುತ್ತಿಲ್ಲ. ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್ ಬೆಂಕಿಯ ಚೆಂಡು ಉಗುಳುತ್ತಿದ್ದರೆ, ರಾಹುಲ್ ಚಹಾರ್, ಕ್ರುನಾಲ್ ಪಾಂಡ್ಯ ಸ್ಪಿನ್ ವಿಭಾಗದ ಅಸ್ತ್ರವಾಗಿದ್ದಾರೆ.
ಇತ್ತ ಕಳೆದ 3 ಪಂದ್ಯಗಳ ಪೈಕಿ 2ರಲ್ಲಿ ಅಂತಿಮ ಹಂತದಲ್ಲಿ ಜಯ ದಾಖಲಿಸಿದ ಕೆಕೆಆರ್, ಆರ್ಸಿಬಿ ಎದುರು ಹೀನಾಯವಾಗಿ ಸೋಲು ಕಂಡಿತು. ಇದಕ್ಕೂ ಮೊದಲು ಸಿಎಸ್ಕೆ ಹಾಗೂ ಕಿಂಗ್ಸ್ ಇಲೆವೆನ್ ಎದುರು ರೋಚಕ ಜಯ ದಾಖಲಿಸಿತ್ತು. ತಂಡದಲ್ಲಿ ನಿಂತು ಆಡುವ ಆಟಗಾರರು ಯಾರೂ ಇಲ್ಲ.
IPL 2020: ಕೆಎಲ್ ರಾಹುಲ್ ಬಳಿಯೇ ಉಳಿದುಕೊಂಡ ಆರೆಂಜ್ ಕ್ಯಾಪ್; ರಬಾಡಗೆ ಪರ್ಪಲ್ ಕ್ಯಾಪ್
ಶುಭ್ಮನ್ ಗಿಲ್ ಬ್ಯಾಟ್ನಿಂದ ರನ್ ಬರುತ್ತಿದೆಯಾದರೂ ದೊಡ್ಡ ಹೊಡೆತಗಳು ಕಾಣಿಸುತ್ತಿಲ್ಲ. ಕಳೆದ ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಯಾವೊಬ್ಬ ಬ್ಯಾಟ್ಸ್ಮನ್ಗಳು ಮಿಂಚಲಿಲ್ಲ. ದಿನೇಶ್ ಕಾರ್ತಿಕ್, ಮಾರ್ಗನ್, ನಿತೀಶ್ ರಾಣ, ತ್ರಿಪಾಠಿ, ರಸೆಲ್ ಸರಿಯಾದ ಸಮಯದಲ್ಲಿ ಸಿಡಿಯುವ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಇವರು ಬ್ಯಾಟ್ ಸದ್ದು ಮಾಡುತ್ತಿಲ್ಲ.
ಐಪಿಎಲ್ ಇತಿಹಾಸದಲ್ಲಿ ಇಲ್ಲಿಯವರೆಗೆ ಮುಂಬೈ ಮತ್ತು ಕೋಲ್ಕತ್ತಾ ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಮುಂಬೈ ಇಂಡಿಯನ್ಸ್ ತಂಡ 20ರಲ್ಲಿ ಗೆಲುವು ದಾಖಲಿಸಿದರೆ, ಕೋಲ್ಕತ್ತಾ ನೈಟ್ ರೈಡರ್ಸ್ ಕೇವಲ 6 ಪಂದ್ಯಗಳಲ್ಲಿ ಮಾತ್ರ ಜಯ ಸಾಧಿಸಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ