IPL 2020 Points Table: ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಇಳಿದ ಚೆನ್ನೈ ಸೂಪರ್ ಕಿಂಗ್ಸ್
ಕೋಲ್ಕತ್ತಾ 9 ಪಂದ್ಯಗಳಲ್ಲಿ 5ರಲ್ಲಿ ಗೆದ್ದು ನಾಲ್ಕನೇ ಸ್ಥಾನದಲ್ಲಿದೆ. ಐದನೇ ಸ್ಥಾನದಲ್ಲಿ ರಾಜಸ್ಥಾನ ಇದೆ. ಆರನೇ ಸ್ಥಾನದಲ್ಲಿ ಹೈದರಾಬಾದ್, ಏಳನೇ ಸ್ಥಾನದಲ್ಲಿ ಪಂಜಾಭ್ ಹಾಗೂ ಕೊನೆಯ ಸ್ಥಾನದಲ್ಲಿ ಚೆನ್ನೈ ಇದೆ.
ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 13ನೇ ಆವೃತ್ತಿಯ 37ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 7 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ತನ್ನ ಪ್ಲೇ ಆಫ್ ಕನಸನ್ನ ಜೀವಂತವಾಗಿರಿಸಿದೆ. ಇತ್ತ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಹೀನಾಯ ಸೋಲುಕಂಡ ಧೋನಿ ಪಡೆ ಬಹುತೇಕ ಟೂರ್ನಿಯಿಂದಲೇ ಹೊರಬಿದ್ದಿದೆ. ಸಾಕಷ್ಟು ಅಡೆತಡೆಗಳನ್ನು ಎದುರಿಸಿ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಾರಂಭಿಸಲಾಗಿದೆ. ಪ್ರತಿ ವರ್ಷ ಭಾರತದಲ್ಲಿ ಐಪಿಎಲ್ ನಡೆಯುತ್ತಿತ್ತು. ಆದರೆ, ಈ ಬಾರಿ ಐಪಿಎಲ್ ಯುಎಇಗೆ ಶಿಫ್ಟ್ ಆಗಿದೆ. ಸೆಪ್ಟೆಂಬರ್ 19ರಿಂದ ಹೊಡಿಬಡಿ ಆಟ ಅಭಿಮಾನಿಗಳನ್ನು ರಂಜಿಸುತ್ತಿದೆ.
ಡೆಲ್ಲಿ ಕ್ಯಾಪಿಟಲ್ಸ್ ಆಡಿದ 9 ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು ಎರಡಲ್ಲಿ ಸೋತಿದೆ. ಈ ಮೂಲಕ 14 ಅಂಕ ಪಡೆದು ಅಂಕಪಟ್ಟಿಯಲ್ಲಿ ಮೇಲಿದೆ. ಅಲ್ಲದೆ, ಪ್ಲೇ ಆಫ್ಗೆ ಏರುವುದು ಬಹುತೇಕ ಖಚಿತವಾಗಿದೆ. ಮುಂಬೈ ಇಂಡಿಯನ್ಸ್ ಆಡಿದ 9 ಪಂದ್ಯಗಳಲ್ಲಿ ಆರರಲ್ಲಿ ಗೆದ್ದು ಮೂರನೇ ಸ್ಥಾನದಲ್ಲಿದೆ. ಆರ್ಸಿಬಿ 9 ಪಂದ್ಯಗಳಲ್ಲಿ ಆರರಲ್ಲಿ ಗೆದ್ದು ಮೂರರಲ್ಲಿ ಸೋತಿದೆ. ಈ ಮೂಲಕ ಮೂರನೇ ಸ್ಥಾನ ಅಲಂಕರಿಸಿದೆ.
ಕೋಲ್ಕತ್ತಾ 9 ಪಂದ್ಯಗಳಲ್ಲಿ 5ರಲ್ಲಿ ಗೆದ್ದು ನಾಲ್ಕನೇ ಸ್ಥಾನದಲ್ಲಿದೆ. ಐದನೇ ಸ್ಥಾನದಲ್ಲಿ ರಾಜಸ್ಥಾನ ಇದೆ. ಆರನೇ ಸ್ಥಾನದಲ್ಲಿ ಹೈದರಾಬಾದ್, ಏಳನೇ ಸ್ಥಾನದಲ್ಲಿ ಪಂಜಾಭ್ ಹಾಗೂ ಕೊನೆಯ ಸ್ಥಾನದಲ್ಲಿ ಚೆನ್ನೈ ಇದೆ.
ಅತಿ ಹೆಚ್ಚು ರನ್ ಹೊಡೆದವರಿಗೆ ನೀಡುವ ಆರೆಂಜ್ ಕ್ಯಾಪ್ ಕಿಂಗ್ಸ್ ಇಲವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಬಳಿ ಇದೆ. 8 ಪಂದ್ಯಗಳಿಂದ ಅವರು 525 ರನ್ ಕಲೆ ಹಾಕಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ರಬಾಡ 19 ವಿಕೆಟ್ ತೆಗೆಯುವ ಮೂಲಕ ಈ ಮೂಲಕ ಪರ್ಪಲ್ ಕ್ಯಾಪ್ ಹಾಕಿಕೊಂಡಿದ್ದಾರೆ.
Published by:Rajesh Duggumane
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ