IPL

  • associate partner

IPL 2020 Points Table: ಪ್ಲೇಆಫ್​ಗೆ ಏರಲು ನಾಲ್ಕು ತಂಡಗಳ ನಡುವೆ ಭಾರೀ ಪೈಪೋಟಿ; ಯಾರಿಗೆ ಸಿಗಲಿದೆ ಸ್ಥಾನ

ಕೋಲ್ಕತ್ತಾ 10  ಪಂದ್ಯಗಳಲ್ಲಿ 5ರಲ್ಲಿ ಗೆದ್ದು ಐದರಲ್ಲಿ ಸೋತು ನಾಲ್ಕನೇ ಸ್ಥಾನದಲ್ಲಿದೆ. ಐದನೇ ಸ್ಥಾನದಲ್ಲಿ ಹೈದರಾಬಾದ್​ನಲ್ಲಿದೆ. ಆರನೇ ಸ್ಥಾನದಲ್ಲಿ ಪಂಜಾಬ್​​, ಏಳನೇ ಸ್ಥಾನದಲ್ಲಿ ರಾಜಸ್ಥಾನ್​​ ಹಾಗೂ ಕೊನೆಯ ಸ್ಥಾನದಲ್ಲಿ ಚೆನ್ನೈ ಇದೆ.

news18-kannada
Updated:October 23, 2020, 8:32 AM IST
IPL 2020 Points Table: ಪ್ಲೇಆಫ್​ಗೆ ಏರಲು ನಾಲ್ಕು ತಂಡಗಳ ನಡುವೆ ಭಾರೀ ಪೈಪೋಟಿ; ಯಾರಿಗೆ ಸಿಗಲಿದೆ ಸ್ಥಾನ
IPL 2020
  • Share this:
ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 40ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ತಂಡ ಭರ್ಜರಿ ಗೆಲುವು ಸಾಧಿಸಿದೆ. ಮನೀಶ್ ಪಾಂಡೆ ಹಾಗೂ ವಿಜಯ್ ಶಂಕರ್ ಅವರ ಶತಕದ ಜೊತೆಯಾಟದ ನೆರವಿನಿಂದ ಎಸ್​ಆರ್​ಹೆಚ್ ತಂಡ 8 ವಿಕೆಟ್​ಗಳ ಜಯ ಸಾಧಿಸಿ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದೆ. ಇತ್ತ ಸ್ಮಿತ್ ಪಡೆ ಟೂರ್ನಿಯಲ್ಲಿ ಏಳನೇ ಸೋಲು ಕಂಡಿದೆ. ಸಾಕಷ್ಟು ಅಡೆತಡೆಗಳನ್ನು ಎದುರಿಸಿ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಾರಂಭಿಸಲಾಗಿದೆ. ಪ್ರತಿ ವರ್ಷ ಭಾರತದಲ್ಲಿ ಐಪಿಎಲ್​ ನಡೆಯುತ್ತಿತ್ತು. ಆದರೆ, ಈ ಬಾರಿ ಐಪಿಎಲ್​ ಯುಎಇಗೆ ಶಿಫ್ಟ್​ ಆಗಿದೆ. ಸೆಪ್ಟೆಂಬರ್ 19ರಿಂದ ಹೊಡಿಬಡಿ ಆಟ ಅಭಿಮಾನಿಗಳನ್ನು ರಂಜಿಸುತ್ತಿದೆ.

ಡೆಲ್ಲಿ ಕ್ಯಾಪಿಟಲ್ಸ್​ ಆಡಿದ 10 ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು ಮೂರರಲ್ಲಿ ಸೋತಿದೆ. ಈ ಮೂಲಕ 14 ಅಂಕ ಪಡೆದು ಅಂಕಪಟ್ಟಿಯಲ್ಲಿ ಮೊದಲಿದೆ. ಆರ್​ಸಿಬಿ ಆಡಿದ 10 ಪಂದ್ಯಗಳಲ್ಲಿ ಏಳರಲ್ಲಿ ಗೆಲುವು ಮೂರರಲ್ಲಿ ಸೋಲು ಕಂಡಿದೆ. ಕೆಕೆಆರ್​ ವಿರುದ್ಧ ಅನಾಯಾಸವಾಗಿ ಗೆಲ್ಲುವ ಮೂಲಕ ಇಷ್ಟು ದಿನ ಮೈನಸ್​ ಇದ್ದ ರನ್​ ರೇಟ್​ ಈಗ ಧನಾತ್ಮಕವಾಗಿದೆ.  ಅಲ್ಲದೆ, ಡೆಲ್ಲಿ-ಆರ್​ಸಿಬಿ ಪ್ಲೇ ಆಫ್​ಗೆ ಏರುವುದು ಬಹುತೇಕ ಖಚಿತವಾಗಿದೆ. ಮುಂಬೈ ಇಂಡಿಯನ್ಸ್​​  ಆಡಿದ 9 ಪಂದ್ಯಗಳಲ್ಲಿ ಆರರಲ್ಲಿ ಗೆದ್ದು ಮೂರನೇ ಸ್ಥಾನದಲ್ಲಿದೆ.

ಕೋಲ್ಕತ್ತಾ 10  ಪಂದ್ಯಗಳಲ್ಲಿ 5ರಲ್ಲಿ ಗೆದ್ದು ಐದರಲ್ಲಿ ಸೋತು ನಾಲ್ಕನೇ ಸ್ಥಾನದಲ್ಲಿದೆ. ಐದನೇ ಸ್ಥಾನದಲ್ಲಿ ಹೈದರಾಬಾದ್​ನಲ್ಲಿದೆ. ಆರನೇ ಸ್ಥಾನದಲ್ಲಿ ಪಂಜಾಬ್​​, ಏಳನೇ ಸ್ಥಾನದಲ್ಲಿ ರಾಜಸ್ಥಾನ್​​ ಹಾಗೂ ಕೊನೆಯ ಸ್ಥಾನದಲ್ಲಿ ಚೆನ್ನೈ ಇದೆ.

POINTS TABLE:

ಅತಿ ಹೆಚ್ಚು ರನ್​ ಹೊಡೆದವರಿಗೆ ನೀಡುವ ಆರೆಂಜ್​ ಕ್ಯಾಪ್​ ಕಿಂಗ್ಸ್​ ಇಲವೆನ್​ ಪಂಜಾಬ್​ ತಂಡದ ನಾಯಕ ಕೆಎಲ್​ ರಾಹುಲ್​ ಬಳಿ ಇದೆ. 10 ಪಂದ್ಯಗಳಿಂದ ಅವರು 540 ರನ್​ ಕಲೆ ಹಾಕಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​ ಬೌಲರ್​ ರಬಾಡ 21 ವಿಕೆಟ್​ ತೆಗೆಯುವ ಮೂಲಕ ಈ ಮೂಲಕ ಪರ್ಪಲ್​​ ಕ್ಯಾಪ್ ಹಾಕಿಕೊಂಡಿದ್ದಾರೆ.
Published by: Rajesh Duggumane
First published: October 23, 2020, 7:54 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading