IPL 2020 LIVE Score, RCB vs RR: ಅರ್ಧಶತಕ ಸಿಡಿಸಿ ಪಡಿಕ್ಕಲ್ ಔಟ್

IPL 2020, Bangalore vs Rajasthan Live Score: ಐಪಿಎಲ್​ನಲ್ಲಿ ಉಭಯ ತಂಡಗಳು ಈವರೆಗೆ 21 ಬಾರಿ ಮುಖಾಮುಖಿಯಾಗಿದ್ದು, 10 ಪಂದ್ಯಗಳಲ್ಲಿ ರಾಜಸ್ಥಾನ ರಾಯಲ್ಸ್, 8 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಗೆಲುವು ಕಂಡಿದ್ದು, ಮೂರು ಪಂದ್ಯಗಳು ಫಲಿತಾಂಶ ಕಂಡಿಲ್ಲ.

RR

RR

 • Share this:
  ಅಬುಧಾಬಿ (ಅ. 03): ಇಲ್ಲಿನ ಶೇಖ್‌ ಜಾಹೇದ್‌ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್​ನ 15ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಸವಾಲಿನ ಮೊತ್ತ ಕಲೆಹಾಕಿದೆ. ಮಾಹಿಪಾಲ್ ಲಮ್ರೋರ್ ಅವರ ಎಚ್ಚರಿಕೆಯ ಬ್ಯಾಟಿಂಗ್ ನೆರವಿನಿಂದ ಆರ್​ಸಿಬಿ ತಂಡಕ್ಕೆ ಗೆಲ್ಲಲು 155 ರನ್​ಗಳ ಟಾರ್ಗೆಟ್ ನೀಡಿದೆ.

  ಸದ್ಯ ಈ ಗುರಿ ಬೆನ್ನಟ್ಟಿರುವ ಆರ್​ಸಿಬಿ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡಿದೆ. ಓಪನರ್​ಗಳಾದ ಆ್ಯರೋನ್ ಫಿಂಚ್ ಹಾಗೂ ದೇವದತ್ ಪಡಿಕ್ಕಲ್ ಪೈಕಿ ಫಿಂಚ್ 8 ರನ್​ಗೆ ಔಟ್ ಆಗಿದ್ದಾರೆ.

  ಸದ್ಯ ಪಡಿಕ್ಕಲ್ ಹಾಗೂ ನಾಯಕ ವಿರಾಟ್ ಕೊಹ್ಲಿ ಕ್ರೀಸ್​ನಲ್ಲಿದ್ದು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದಾರೆ. ಅದರಲ್ಲೂ ಪಡಿಕ್ಕಲ್ ಐಪಿಎಲ್​ನಲ್ಲಿ ತಮ್ಮ ಮೂರನೇ ಅರ್ಧಶತಕ ಪೂರೈಸಿದ್ದಾರೆ.

  ಇದಕ್ಕೂ ಮುನ್ನ ಟಾಸ್ ಗೆದ್ದ ಆರ್​​ಆರ್​ ತಂಡದ ನಾಯಕ ಸ್ಟೀವ್ ಸ್ಮಿತ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಕಣಕ್ಕಿಳಿದ ಓಪನರ್​ಗಳ ಪೈಕಿ ನಾಯಕ ಸ್ಮಿತ್(5) ಮೂರನೇ ಓವರ್​ನಲ್ಲಿ ಇಸುರು ಉದಾನ ಬೌಲಿಂಗ್​ನಲ್ಲಿ ಕ್ಲೀನ್ ಬೌಲ್ಡ್ ಆದರು. ಇದಾದ ಬೆನ್ನಲ್ಲೇ 22 ರನ್ ಗಳಿಸಿದ್ದ ಜಾಸ್ ಬಟ್ಲರ್ ಕೂಡ ನಿರ್ಗಮಿಸಿದರು.

  ತಂಡಕ್ಕೆ ಆಸರೆಯಾಗುತ್ತಿದ್ದ ಸಂಜು ಸ್ಯಾಮ್ಸನ್ ಈ ಬಾರಿ ಕೇವಲ 4 ರನ್​ಗೆ ಪೆವಿಲಿಯನ್​ಗೆ ಸೇರಿಸಕೊಂಡರೆ, ರಾಬಿನ್ ಉತ್ತಪ್ಪ ಆಟ 17 ರನ್​ಗೆ ಅಂತ್ಯವಾಯಿತು. ನಂತರ ಮಾಹಿಪಾಲ್ ಲಮ್ರೋರ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರಾದರೂ ಇವರಿಗೆ ರಿಯಾನ್ ಪರಾಗ್(16) ಉತ್ತಮ ಸಾತ್ ನೀಡಲಿಲ್ಲ.

  ಮಾಹಿಪಾಲ್ ಕೂಡ 39 ಎಸೆತಗಳಳ್ಲಿ 1 ಬೌಂಡರಿ, 3 ಸಿಕ್ಸರ್ ಸಿಡಿಸಿ 47 ರನ್​ಗೆ ವಿಕೆಟ್ ಒಪ್ಪಿಸಿದರು. ಅಂತಿಮ ಹಂತದಲ್ಲಿ ರಾಹುಲ್ ತೇವಾಟಿಯ(24) ಹಾಗೂ ಜೋಫ್ರಾ ಆರ್ಚರ್(16) ಒಂದಿಷ್ಟು ರನ್ ಕಲೆಹಾಕಿದರು.

  ಅಂತಿಮವಾಗಿ ರಾಜಸ್ಥಾನ್ ತಂಡ 20 ಓವರ್​ನಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್ ಗಳಿಸಿತು. ಆರ್​ಸಿಬಿ ಪರ ಯಜುವೇಂದ್ರ ಚಹಾಲ್ 3 ವಿಕೆಟ್ ಕಿತ್ತರೆ, ಇಸುರು ಉದಾನ 2 ಹಾಗೂ ನವ್​ದೀಪ್ ಸೈನಿ 1 ವಿಕೆಟ್ ಪಡೆದರು.

  ಇಂದಿನ ಪಂದ್ಯಕ್ಕೆ ಕೊಹ್ಲಿ ಪಡೆಯಲ್ಲಿ ಯಾವುದೇ ಬದಲಾವಣೆ ಮಾಡದೆ ಕಳೆದ ಗೆದ್ದ ತಂಡದ ಆಟಗಾರರೇ ಕಣಕ್ಕಿಳಿಯುತ್ತಿದ್ದಾರೆ. ಇತ್ತ ಆರ್​ಆರ್​ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ.

  ರಾಯಲ್ ಚಾಲೆಂಜರ್ಸ್​ ಬೆಂಗಳೂರು: ದೇವದತ್ ಪಡಿಕ್ಕಲ್, ಆ್ಯರೋನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್‌ (ವಿ.ಕೀ), ಶಿವಂ ದುಬೆ, ಗುರುಕೀರತ್ ಸಿಂಗ್ ಮಾನ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವದೀಪ್ ಸೈನಿ, ಆಡಂ ಜಂಪಾ, ಯಜುವೇಂದ್ರ ಚಾಹಲ್.

  ರಾಜಸ್ಥಾನ್ ರಾಯಲ್ಸ್: ಜಾಸ್ ಬಟ್ಲರ್ (ವಿ.ಕೀ), ಸ್ಟೀವ್ ಸ್ಮಿತ್ (ನಾಯಕ), ಸಂಜು ಸ್ಯಾಮ್ಸನ್, ರಾಬಿನ್ ಉತ್ತಪ್ಪ, ರಿಯಾನ್ ಪರಾಗ್, ರಾಹುಲ್ ತೇವಾಟಿಯಾ, ಮಾಹಿಪಾಲ್ ಲಮ್ರೋರ್, ಶ್ರೇಯಸ್ ಗೋಪಾಲ್, ಟಾಮ್ ಕುರ್ರನ್, ಜೋಫ್ರಾ ಆರ್ಚರ್, ಜಯದೇವ್ ಉನಾದ್ಕಟ್.

  ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಈವರೆಗೆ 21 ಬಾರಿ ಮುಖಾಮುಖಿಯಾಗಿದ್ದು, 10 ಪಂದ್ಯಗಳಲ್ಲಿ ರಾಜಸ್ಥಾನ ರಾಯಲ್ಸ್ ಜಯ ಗಳಿಸಿದರೆ, 8 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಗೆಲುವು ಕಂಡಿದ್ದು, ಮೂರು ಪಂದ್ಯಗಳು ಫಲಿತಾಂಶ ಕಂಡಿಲ್ಲ.

  ಹಿಂದಿನ ಮೂರು ಪಂದ್ಯಗಳನ್ನು ದುಬೈನಲ್ಲಿ ಆಡಿದ್ದ ಆರ್​ಸಿಬಿ ಇದೇ ಮೊದಲ ಬಾರಿಗೆ ಅಬುಧಾಬಿಯ ಶೇಖ್‌ ಜಾಹೇದ್‌ ಕ್ರೀಡಾಂಗಣದಲ್ಲಿ ಕಣಕ್ಕಿಳಿಯುತ್ತಿದೆ. ಹಿಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೂಪರ್ ಓವರ್ ಮೂಲಕ ರೋಚಕ ಗೆಲುವು ದಾಖಲಿಸಿದ್ದ ಕೊಹ್ಲಿ ಪಡೆ ಮತ್ತೊಂದು ಜಯದ ನಿರೀಕ್ಷೆಯಲ್ಲಿದೆ.

  ಇನ್ನೂ ಬ್ಯಾಟಿಂಗ್​ನಲ್ಲಿ ನಾಯಕ ವಿರಾಟ್ ಕೊಹ್ಲಿ ಹೊರತುಪಡಿಸಿ ಇತರ ಬ್ಯಾಟ್ಸ್​ಮನ್​ಗಳು ನ್ಯಾಯ ಒದಗಿಸುತ್ತಿದ್ದರೂ ಫೀಲ್ಡಿಂಗ್ ಹಾಗೂ ಡೆತ್ ಓವರ್​ಗಳಲ್ಲಿ ಬೌಲಿಂಗ್ ಸುಧಾರಿಸಬೇಕಿದೆ.

  ಕಳೆದ ಪಂದ್ಯದಲ್ಲಿ 200 ರನ್‌ ಬಾರಿಸಿಯೂ ಪಂದ್ಯವನ್ನು ಉಳಿಸಿಕೊಳ್ಳುವುದರಲ್ಲಿ ವಿಫ‌ಲವಾಗಿದ್ದು ಇದಕ್ಕೆ ಉತ್ತಮ ನಿದರ್ಶನ. ಬೌಲಿಂಗ್‌ ಹರಿತಗೊಳ್ಳುವ ಜೊತೆಗೆ, ಫೀಲ್ಡಿಂಗ್‌ ಕೂಡ ಸುಧಾರಣೆ ಕಾಣಬೇಕಿದೆ.
  Published by:Vinay Bhat
  First published: