IPL

  • associate partner
HOME » NEWS » Ipl » IPL 2020 RCB VS SRH LIVE CRICKET SCORE ROYAL CHALLENGERS BANGALORE VS SUNRISERS HYDERABAD RCB LOST 3 WICKETS VB 2

RCB vs SRH, IPL 2020 Live Score: ಆರ್​ಸಿಬಿ ಕಳಪೆ ಬ್ಯಾಟಿಂಗ್: 7 ವಿಕೆಟ್ ಪತನ

IPL 2020, Royal Challengers Bangalore vs Sunrisers Hyderabad Live Score: ಐಪಿಎಲ್​ನಲ್ಲಿ ಈವರೆಗೆ ಉಭಯ ತಂಡಗಳು 14 ಬಾರಿ ಮುಖಾಮುಖಿಯಾಗಿದ್ದು, 7 ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಹಾಗೂ 7 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಗೆಲುವು ಸಾಧಿಸಿದೆ.

news18-kannada
Updated:October 31, 2020, 9:00 PM IST
RCB vs SRH, IPL 2020 Live Score: ಆರ್​ಸಿಬಿ ಕಳಪೆ ಬ್ಯಾಟಿಂಗ್: 7 ವಿಕೆಟ್ ಪತನ
SRH vs RCB
  • Share this:
ಶಾರ್ಜಾ (ಅ. 31): ಇಲ್ಲಿನ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ  ಐಪಿಎಲ್​ನ 52ನೇ ಪಂದ್ಯ ನಡೆಯುತ್ತಿದ್ದು, ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಹಾಗೂ ಡೇವಿಡ್ ವಾರ್ನರ್ ನಾಯಕತ್ವದ ಸನ್​ರೈಸರ್ಸ್​ ಹೈದರಾಬಾದ್ ತಂಡ ಸೆಣೆಸಾಟ ನಡೆಸುತ್ತಿವೆ.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಆರ್​ಸಿಬಿ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಓಪನರ್​ ದೇವದತ್ ಪಡಿಕ್ಕಲ್ ಈ ಬಾರಿ ಕೇವಲ 5 ರನ್​ಗೆ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರೆ, ನಾಯಕ ವಿರಾಟ್ ಕೊಹ್ಲಿ ಕೇವಲ 7 ರನ್​ಗೆ ನಿರ್ಗಮಿಸಿದರು.

ಈ ಸಂದರ್ಭ ಜೊತೆಯಾದ ಎಬಿ ಡಿವಿಲಿಯರ್ಸ್ ಹಾಗೂ ಜೋಶ್ ಫಿಲಿಪ್ ತಂಡವನ್ನು ಆರಂಭಿಕ ಆಘಾತದಿಂದ ಪಾರುಮಾಡಿದರು. ಆದರೆ, ಈ ಜೋಡಿಯ ಜೊತೆಯಾಟ 43 ರನ್​ಗೆ ಅಂತ್ಯವಾಯಿತು. ಡಿವಿಲಿಯರ್ಸ್ 24 ಎಸೆತಗಳಲ್ಲಿ 24 ರನ್ ಬಾರಿಸಿ ಔಟ್ ಆಗಿ ಶಾಕ್ ನೀಡಿದರು. ಇದರ ಬೆನ್ನಲ್ಲೇ 32 ರನ್ ಗಳಿಸಿದ್ದ ಫಿಲಿಪ್ ಕೂಡ ಬ್ಯಾಟ್ ಕೆಳಗಿಟ್ಟರು.

ವಾಷಿಂಗ್ಟನ್ ಸುಂದರ್(21) ತಂಡದ ಖಾತೆಗೆ ತಮ್ಮ ಕೈಲಾದಷ್ಟು ರನ್ ಸೇರಿಸಿದರು.

ಇಂದಿನ ಪಂದ್ಯಕ್ಕೆ ಎಸ್​ಆರ್​ಹೆಚ್ ಪರ ವಿಜಯ್ ಶಂಕರ್ ಇಂಜುರಿಗೆ ತುತ್ತಾದ ಪರಿಣಾಮ ಇವರ ಬದಲು ಅಭಿಷೇಕ್ ಶರ್ಮಾ ಸ್ಥಾನ ಪಡೆದುಕೊಂಡಿದ್ದಾರೆ.

ಸನ್​ರೈಸರ್ಸ್​ ಹೈದರಾಬಾದ್: ಡೇವಿಡ್ ವಾರ್ನರ್ (ನಾಯಕ), ಕೇನ್ ವಿಲಿಯಮ್ಸನ್, ಮನೀಷ್ ಪಾಂಡೆ, ವೃದ್ದಿಮಾನ್ ಸಾಹ, ಜೇಸನ್ ಹೋಲ್ಡರ್, ಅಭಿಷೇಕ್ ಶರ್ಮಾ, ಶಹ್ಬಾಜ್ ನದೀಂ, ರಶೀದ್ ಖಾನ್, ಅಬ್ದುಲ್ ಸಮದ್, ಸಂದೀಪ್ ಶರ್ಮಾ, ಟಿ. ನಟರಾಜನ್.

ಇತ್ತ ಆರ್​ಸಿಬಿ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ. ನವ್​ದೀಪ್ ಸೈನಿ ಕಮ್​ಬ್ಯಾಕ್ ಮಾಡಿದ್ದು, ಡೇಲ್ ಸ್ಟೈನ್ ಬದಲು ಉಸುರು ಉದಾನ ಸ್ಥಾನ ಪಡೆದುಕೊಂಡಿದ್ದಾರೆ.ರಾಯಲ್ ಚಾಲೆಂಜರ್ಸ್​ ಬೆಂಗಳೂರು: ದೇವದತ್ ಪಡಿಕ್ಕಲ್, ಜೋಷ್ ಫಿಲಿಪ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್‌ (ವಿ.ಕೀ), ಗುರುಕೀರತ್ ಮನ್​ಸಿಂಗ್, ಕ್ರಿಸ್ ಮೊರೀಸ್, ವಾಷಿಂಗ್ಟನ್ ಸುಂದರ್, ಇಸುರು ಉದಾನ, ನವ್​ದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯಜುವೇಂದ್ರ ಚಾಹಲ್.

ಸತತ 2 ಸೋಲಿನಿಂದ ಕಂಗೆಟ್ಟಿರುವ ಆರ್​ಸಿಬಿ ತಂಡ ಪ್ಲೇಆಫ್ ಹಂತಕ್ಕೇರುವ ದೃಷ್ಟಿಯಿಂದ ಮಹತ್ವ ಪಡೆದಿದೆ. ಸನ್‌ರೈಸರ್ಸ್‌ ಹೈದರಾಬಾದ್ ತಂಡಕ್ಕೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.





ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯ ಐಪಿಎಲ್​ನಲ್ಲಿ 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದರೆ, 10 ಅಂಕಗಳೊಂದಿಗೆ 7ನೇ ಸ್ಥಾನದಲ್ಲಿರುವ ಹೈದರಾಬಾದ್ ತಂಡ ಉಳಿದ ಎರಡೂ ಪಂದ್ಯಗಳನ್ನು ಗೆಲ್ಲಬೇಕಿದೆ.

ಕಳೆದ ಪಂದ್ಯದಲ್ಲಿ ಮೂರು ಬದಲಾವಣೆ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಬೌಲರ್​ಗಳು ಮತ್ತೆ ದುಬಾರಿ ಆಗುತ್ತಿದ್ದಾರೆ. ದೇವದತ್ ಪಡಿಕ್ಕಲ್ ಹಾಗೂ ಜೋಶ್ ಫಿಲಿಪ್ ಕಳೆದ ಪಂದ್ಯದಲ್ಲಿ ಉತ್ತಮ ಆರಂಭ ಒದಗಿಸಿದ್ದರು.

ಆದರೆ, ನಾಯಕ ವಿರಾಟ್ ಕೊಹ್ಲಿ ಹಾಗೂ ಡಿವಿಲಿಯರ್ಸ್​ ನಿರ್ಗಮನದ ಬಳಿಕ ಅಬ್ಬರಿಸುವ ಬ್ಯಾಟ್ಸ್​ಮನ್​ ಯಾರೂ ಇಲ್ಲ. ಇದು ತಂಡದ ಹಿನ್ನಡೆಗೆ ಕಾರಣವಾಗಿದೆ. ಕ್ರಿಸ್ ಮೊರೀಸ್ ಮತ್ತು ಶಿವಂ ದುಬೆ ಬ್ಯಾಟಿಂಗ್​ನಲ್ಲಿ ಮಿಂಚಲೇಬೇಕಿದೆ.

ಇತ್ತ ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಭರ್ಜರಿ ಜಯ ದಾಖಲಿಸಿದ ವಿಶ್ವಾಸದಲ್ಲಿರುವ ಸನ್‌ರೈಸರ್ಸ್‌ ಹೈದರಾಬಾದ್ ತಂಡಕ್ಕೆ ಪ್ಲೇ-ಆಫ್ ಜೀವಂತವಾಗಿರಿಸಿಕೊಳ್ಳಲು ಗೆಲುವೊಂದೆ ಮಾರ್ಗವಾಗಿದೆ.

ವೃದ್ಧಿಮಾನ್ ಸಾಹ, ಡೇವಿಡ್ ವಾರ್ನರ್ ಸ್ಫೋಟಕ ಆರಂಭ ಒದಗಿಸಿ ಭರವಸೆ ಮೂಡಿಸಿದ್ದಾರೆ. ಮನೀಷ್ ಪಾಂಡೆ ಕೂಡ ತಂಡಕ್ಕೆ ಆಧಾರವಾಗುತ್ತಿದ್ದಾರೆ. ಆದರೆ ವಿಜಯ್ ಶಂಕರ್ ಅಲಭ್ಯತೆ ತಂಡಕ್ಕೆ ಕಾಡಲಿದೆ. ರಶೀದ್ ಖಾನ್, ತಂಡಕ್ಕೆ ಬೌಲಿಂಗ್ ವಿಭಾಗದಲ್ಲಿ ದೊಡ್ಡ ಶಕ್ತಿಯಾಗಿದ್ದಾರೆ. ಇವರಿಗೆ ಸಂದೀಪ್ ಶರ್ಮ, ಟಿ.ನಟರಾಜನ್ ಅಗತ್ಯ ಸಾಥ್ ನೀಡುತ್ತಿದ್ದಾರೆ.

ಐಪಿಎಲ್​ನಲ್ಲಿ ಈವರೆಗೆ ಉಭಯ ತಂಡಗಳು 14 ಬಾರಿ ಮುಖಾಮುಖಿಯಾಗಿದ್ದು, 7 ರಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಹಾಗೂ 7 ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ಗೆಲುವು ಸಾಧಿಸಿದೆ.
Published by: Vinay Bhat
First published: October 31, 2020, 7:04 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories