ಅಬುಧಾಬಿಯಲ್ಲಿ ಭಾನುವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಈವರೆಗೆ ಕಳಪೆ ಫಾರ್ಮ್ನಿಂದ ಕಂಗೆಟ್ಟಿದ ಬೆನ್ ಸ್ಟೋಕ್ಸ್ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ತಂಡಕ್ಕೆ ಜಯ ತಂದುಕೊಟ್ಟು ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದರು. ಸದ್ಯ ಆರ್ಆರ್ ತಂಡ 10 ಅಂಕದೊಂದಿಗೆ 6ನೇ ಸ್ಥಾನದಲ್ಲಿದೆ. ಜೊತೆಗೆ ಮುಂದಿನ ಎಲ್ಲ ಪಂದ್ಯಗಳನ್ನು ಗೆದ್ದರಷ್ಟೆ ಉಳಿಗಾಲ.
ಮುಂಬೈ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ರಾಜಸ್ಥಾನ್ ಮೊದಲು ಬೌಲಿಂಗ್ ಮಾಡಿತು. ಆದರೆ, ಬೌಲರ್ಗಳು ನಿರೀಕ್ಷೆಗೆ ತಕ್ಕಂತೆ ಪ್ರದರ್ಶನ ನೀಡಲಿಲ್ಲ. ಆರ್ಆರ್ ಬೌಲರ್ಗಳನ್ನು ಬೆಂಡೆತ್ತಿದ ಹಾರ್ದಿಕ್ ಪಾಂಡ್ಯ ಬೌಂಡರಿ- ಸಿಕ್ಸರ್ಗಳ ಮಳೆ ಸುರಿಸಿ ಸ್ಫೋಟಕ ಅರ್ಧಶತಕ ಸಿಡಿಸಿ ತಂಡದ ಮೊತ್ತವನ್ನು 195ಕ್ಕೆ ತಂದಿಟ್ಟರು.
IPL 2020, RCB: ಸಿಎಸ್ಕೆ ವಿರುದ್ಧದ ಸೋಲಿನ ಬೆನ್ನಲ್ಲೇ ಆರ್ಸಿಬಿ ತಂಡಕ್ಕೆ ದೊಡ್ಡ ಆಘಾತ..!
ಮುಂಬೈ ಬ್ಯಾಟ್ಸ್ಮನ್ಗಳನ್ನ ಕಟ್ಟಿಹಾಕಲು ಆರ್ಆರ್ ಬೌಲರ್ಗಳು ನಾನಾ ಪ್ರಯೋಗ ಮಾಡಿದರೂ ಫಲಿಸಲಿಲ್ಲ. ಅದರಲ್ಲೂ ವಿಶ್ವದ ಶ್ರೇಷ್ಠ ಬೌಲರ್ ಜೋಫ್ರಾ ಆರ್ಚರ್ ಕೂಡ ಈ ಪಂದ್ಯದಲ್ಲಿ ಕೊಂಚ ದುಬಾರಿಯಾದರು. 4 ಓವರ್ಗೆ 31 ರನ್ ನೀಡಿ 2 ವಿಕೆಟ್ ಪಡೆದರು.
ಈ ನಡುವೆ ಮುಂಬೈ ಬ್ಯಾಟಿಂಗ್ ನಡೆಸುತ್ತಿರುವಾಗ ಆರ್ಚರ್ ಅವರು ತಮ್ಮ ಓವರ್ ಮಧ್ಯೆ ಜಸ್ಪ್ರೀತ್ ಬುಮ್ರಾ ಅವರ ರೀತಿಯಲ್ಲಿ ಬೌಲಿಂಗ್ ಮಾಡಲು ಹೊರಟರು. ಬಾಲ್ ಹಿಡಿದು ಥೇಟ್ ಬುಮ್ರಾ ರೀತಿ ಓಡಲು ಮುಂದಾದರು. ಆದರೆ, ಅದು ಸಾಧ್ಯವಿಲ್ಲ ಎಂದು ತಿಳಿದು ಮತ್ತೆ ತಮ್ಮದೆ ಶೈಲಿಯನ್ನು ಮುಂದುವರೆಸಿದರು.
ಸದ್ಯ ಆರ್ಚರ್ ಅವರು ಬುಮ್ರಾ ಶೈಲಿಯಲ್ಲಿ ಬೌಲಿಂಗ್ ಮಾಡಲು ಹೊರಟ ವಿಡಿಯೋ ಸಾಮಾಜಿಕ ತಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 195 ರನ್ ಬಾರಿಸಿತು. ಹಾರ್ದಿಕ್ ಪಾಂಡ್ಯ ಕೇವಲ 21 ಎಸೆತಗಳಲ್ಲಿ 2 ಬೌಂಡರಿ, 7 ಸಿಕ್ಸರ್ ಸಿಡಿಸಿ ಅಜೇಯ 60 ರನ್ ಚಚ್ಚಿದರು. ಸೂರ್ಯಕುಮಾರ್ ಯಾದವ್ 40 ರನ್ ಬಾರಿಸಿದರು.
Virat Kohli: CSK ವಿರುದ್ಧದ ಸೋಲಿಗೆ ಇದೇನೇ ಕಾರಣ, ಬೇರೇನೂ ಇಲ್ಲ..!
ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಕಠಿಣ ಟಾರ್ಗೆಟ್ ಬೆನ್ನಟ್ಟಿದ ರಾಜಸ್ಥಾನ್ ಆರಂಭದಲ್ಲಿ ಎರಡು ವಿಕೆಟ್ ಕಳೆದುಕೊಂಡಿದ್ದು ಬಿಟ್ಟರೆ, ನಂತರ ಒಂದಾದ ಬೆನ್ ಸ್ಟೋಕ್ಸ್ ಹಾಗೂ ಸಂಜು ಸ್ಯಾಮ್ಸನ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಜಯ ತಂದುಕೊಟ್ಟರು. ಅದರಲ್ಲೂ ಸ್ಟೋಕ್ಸ್ ಶತಕ ಸಿಡಿಸಿ ಮಿಂಚಿದರು.
ಬೆನ್ ಸ್ಟೋಕ್ಸ್ 60 ಎಸೆತಗಳಲ್ಲಿ 14 ಬೌಂಡರಿ, 3 ಸಿಕ್ಸರ್ ಬಾರಿಸಿ ಅಜೇಯ 107 ಹಾಗೂ ಸಂಜು ಸ್ಯಾಮ್ಸನ್ 31 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಿಡಿಸಿ ಅಜೇಯ 54 ರನ್ ಗಳಿಸಿದು. ಆರ್ಆರ್ ತಂಡ 8 ವಿಕೆಟ್ಗಳ ಗೆಲುವು ಸಾಧಿಸಿತು.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ